AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಕ್ಸರ್‌ಗಳ ದ್ವಿಶತಕ; ಈ ಸಾಧನೆ ಮಾಡಿದ ಮೊದಲ ಬ್ಯಾಟರ್ ರೋಹಿತ್ ಶರ್ಮಾ

ಗುವಾಹಟಿ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಸ್ಫೋಟಕ ಅರ್ಧಶತಕ ಗಳಿಸಿ ಹಲವು ದಾಖಲೆ ಬರೆದಿದ್ದಾರೆ. ಭಾರತದಲ್ಲಿ 200 ODI ಸಿಕ್ಸರ್‌ಗಳನ್ನು ಪೂರೈಸಿದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ವಿಂಡೀಸ್ ವಿರುದ್ಧ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಆಟಗಾರ ಎಂಬ ಮತ್ತೊಂದು ದಾಖಲೆಯನ್ನೂ ಬರೆದರು. ಕ್ರಿಸ್ ಗೇಲ್ ಮತ್ತು ಎಬಿ ಡಿವಿಲಿಯರ್ಸ್ ಅವರ ದಾಖಲೆಗಳನ್ನು ಹಿಂದಿಕ್ಕಿ, ರೋಹಿತ್ ತಮ್ಮ ಶಕ್ತಿ ಪ್ರದರ್ಶಿಸಿದರು.

ಪೃಥ್ವಿಶಂಕರ
|

Updated on: Sep 30, 2026 | 8:11 PM

Share
ಗುವಾಹಟಿಯಲ್ಲಿ ನಡೆಯುತ್ತಿರುವ  ಎರಡನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ವೆಸ್ಟ್ ಇಂಡೀಸ್ ತಂಡ 405 ರನ್​ಗಳ ಬೃಹತ್ ಮೊತ್ತ ಕಲೆಹಾಕಿದೆ. ಈ ಗುರಿ ಬೆನ್ನಟ್ಟಿರುವ ಟೀಂ ಇಂಡಿಯಾಕ್ಕೆ ಉತ್ತಮ ಆರಂಭ ಸಿಕ್ಕಿದೆ. ಆರಂಭಿಕರಿಬ್ಬರು ಅರ್ಧಶತಕ ಸಿಡಿಸಿ ಮಿಂಚಿದ್ದಾರೆ(PC-PTI).

1 / 5
ಕಳೆದ ಪಂದ್ಯದಲ್ಲಿ ಉತ್ತಮ ಆರಂಭ ಪಡೆದು ಆ ಬಳಿಕ ವಿಕೆಟ್ ಒಪ್ಪಿಸಿದ್ದ ಮಾಜಿ ನಾಯಕ ರೋಹಿತ್ ಶರ್ಮಾ, ಈ ಪಂದ್ಯದಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡುವ ಮೂಲಕ ತಂಡವನ್ನು 100 ರನ್​ಗಳ ಗಡಿ ದಾಟಿಸಿದ್ದಾರೆ. ರೋಹಿತ್ ಕೇವಲ 32 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು. ಇದರಲ್ಲಿ 4 ಸಿಕ್ಸರ್‌ಗಳನ್ನು ಬಾರಿಸಿದರು(PC-PTI).

2 / 5
ಈ ಸಿಕ್ಸರ್‌ಗಳೊಂದಿಗೆ ರೋಹಿತ್ ಶರ್ಮಾ ಭಾರತದಲ್ಲಿ ಏಕದಿನ ಕ್ರಿಕೆಟ್​ನಲ್ಲಿ 200 ಸಿಕ್ಸರ್‌ಗಳನ್ನು ಬಾರಿಸಿದ ದಾಖಲೆಯನ್ನು ನಿರ್ಮಿಸಿದ್ದಾರೆ. ಇದರೊಂದಿಗೆ ರೋಹಿತ್ ಶರ್ಮಾ ಒಂದೇ ದೇಶದಲ್ಲಿ 200 ಸಿಕ್ಸ್ ಬಾರಿಸಿದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಅಲ್ಲದೆ ರೋಹಿತ್ ವೆಸ್ಟ್ ಇಂಡೀಸ್‌ನಲ್ಲಿ 147 ಸಿಕ್ಸ್ ಬಾರಿಸಿದ್ದ ಕ್ರಿಸ್ ಗೇಲ್ ಅವರನ್ನು ಬಹಳ ಹಿಂದೆಯೇ ಹಿಂದಿಕ್ಕಿದ್ದರು(PC-PTI).

3 / 5
ಇನ್ನು ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್​ನ ಮಾಜಿ ಆರಂಭಿಕ ಆಟಗಾರ ಮಾರ್ಟಿನ್ ಗುಪ್ಟಿಲ್ ನ್ಯೂಜಿಲೆಂಡ್‌ನಲ್ಲಿ 132 ಸಿಕ್ಸ್ ಬಾರಿಸಿದ್ದಾರೆ. ಹಾಗೆಯೇ ಬ್ರೆಂಡನ್ ಮೆಕಲಮ್ ನ್ಯೂಜಿಲೆಂಡ್‌ನಲ್ಲಿ 126 ಸಿಕ್ಸ್ ಬಾರಿಸಿದ್ದು 4ನೇ ಸ್ಥಾನದಲ್ಲಿದ್ದು, ಭಾರತದಲ್ಲಿ 123 ಸಿಕ್ಸ್ ಬಾರಿಸಿರುವ ಧೋನಿ ಐದನೇ ಸ್ಥಾನದಲ್ಲಿದ್ದಾರೆ(PC-PTI).

4 / 5
ಇದರ ಜೊತೆಗೆ ರೋಹಿತ್ ಶರ್ಮಾ ವೆಸ್ಟ್ ಇಂಡೀಸ್ ವಿರುದ್ಧ ಅತಿ ಹೆಚ್ಚು ಏಕದಿನ ಸಿಕ್ಸರ್‌ಗಳನ್ನು ಬಾರಿಸಿದ ಆಟಗಾರನೆಂಬ ದಾಖಲೆಯನ್ನು ನಿರ್ಮಿಸಿದ್ದಾರೆ. ಈ ಸುದ್ದಿಯನ್ನು ಬರೆಯುವ ಹೊತ್ತಿಗೆ, ಅವರು ವೆಸ್ಟ್ ಇಂಡೀಸ್ ವಿರುದ್ಧ 42 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಈ ಮೂಲಕ 40 ಸಿಕ್ಸರ್‌ಗಳನ್ನು ಬಾರಿಸಿದ್ದ ಎಬಿ ಡಿವಿಲಿಯರ್ಸ್‌ರನ್ನು ಹಿಂದಿಕ್ಕಿದ್ದಾರೆ(PC-PTI).

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us