- Kannada News Photo gallery Cricket photos Rohit Sharma 5 sixes away from breaking this ODI World Cup record held by Chris Gayle
ಕ್ರಿಸ್ ಗೇಲ್ ದಾಖಲೆ ಮುರಿದು ವಿಶ್ವ ದಾಖಲೆ ಸೃಷ್ಟಿಸುವ ಸನಿಹದಲ್ಲಿ ರೋಹಿತ್ ಶರ್ಮಾ..!
Rohit Sharma: ಈ ಪಂದ್ಯದಲ್ಲಿ ಭಾರತದ ನಾಯಕ ರೋಹಿತ್ ಶರ್ಮಾ ಅವರು ಹೊಸ ವಿಶ್ವ ದಾಖಲೆಯನ್ನು ರಚಿಸುವ ಅವಕಾಶವನ್ನು ಹೊಂದಿದ್ದು, ಅವರು ಕ್ರಿಸ್ ಗೇಲ್ ಅವರ ಅಧಿಕ ಸಿಕ್ಸರ್ಗಳ ದಾಖಲೆಯನ್ನು ಮುರಿಯುವ ಸನಿಹದಲ್ಲಿದ್ದಾರೆ.
Updated on: Nov 11, 2023 | 3:05 PM

2023ರ ಏಕದಿನ ವಿಶ್ವಕಪ್‌ನಲ್ಲಿ ಭಾರತ ತಂಡವು ಭಾನುವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೆದರ್ಲೆಂಡ್ಸ್ ವಿರುದ್ಧ ತನ್ನ ಕೊನೆಯ ಲೀಗ್ ಪಂದ್ಯವನ್ನು ಆಡಲಿದೆ. ಭಾರತ ತಂಡ ಈ ಪಂದ್ಯವನ್ನು ಗೆಲ್ಲುವ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ತನ್ನ ಸ್ಥಾನವನ್ನು ಉಳಿಸಿಕೊಳ್ಳಲು ಪ್ರಯತ್ನಿಸಲಿದೆ.

ಇನ್ನು ಈ ಪಂದ್ಯದಲ್ಲಿ ಭಾರತದ ನಾಯಕ ರೋಹಿತ್ ಶರ್ಮಾ ಅವರು ಹೊಸ ವಿಶ್ವ ದಾಖಲೆಯನ್ನು ರಚಿಸುವ ಅವಕಾಶವನ್ನು ಹೊಂದಿದ್ದು, ಅವರು ಕ್ರಿಸ್ ಗೇಲ್ ಅವರ ಅಧಿಕ ಸಿಕ್ಸರ್ಗಳ ದಾಖಲೆಯನ್ನು ಮುರಿಯುವ ಸನಿಹದಲ್ಲಿದ್ದಾರೆ.

ರೋಹಿತ್ ಶರ್ಮಾ 2023 ರ ಏಕದಿನ ವಿಶ್ವಕಪ್‌ನಲ್ಲಿ ಕಳೆದ 8 ಲೀಗ್ ಪಂದ್ಯಗಳಲ್ಲಿ 22 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಅವರ ಫಾರ್ಮ್ ನೋಡಿದರೆ, ಅವರ ಬ್ಯಾಟ್ ನೆದರ್ಲ್ಯಾಂಡ್ಸ್ ವಿರುದ್ಧವೂ ಅಬ್ಬರಿಸುವ ಸಾಧ್ಯತೆಗಳಿವೆ.

ಒಂದು ವೇಳೆ ರೋಹಿತ್ ಶರ್ಮಾ ನೆದರ್ಲೆಂಡ್ಸ್ ವಿರುದ್ಧ ತಮ್ಮ ಇನ್ನಿಂಗ್ಸ್‌ನಲ್ಲಿ 5 ಸಿಕ್ಸರ್‌ಗಳನ್ನು ಬಾರಿಸಿದರೆ, ಅವರು ಕ್ರಿಸ್ ಗೇಲ್ ಅವರ ದಾಖಲೆಯನ್ನು ಮುರಿದು ವಿಶ್ವಕಪ್‌ನ ಒಂದು ಆವೃತ್ತಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟ್ಸ್‌ಮನ್ ಎನಿಸಿಕೊಳ್ಳಲಿದ್ದಾರೆ.

2015ರಲ್ಲಿ ಒಟ್ಟು 26 ಸಿಕ್ಸರ್‌ಗಳನ್ನು ಬಾರಿಸಿದ್ದ ಕ್ರಿಸ್ ಗೇಲ್ ಅವರ ಹೆಸರಿನಲ್ಲಿ ಒಂದು ವಿಶ್ವಕಪ್ ಆವೃತ್ತಿಯಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ದಾಖಲೆ ದಾಖಲಾಗಿತ್ತು.

ಇದಲ್ಲದೆ ರೋಹಿತ್ ಸಿಕ್ಸರ್ ಬಾರಿಸುವ ಮೂಲಕ, ಏಕದಿನ ವಿಶ್ವಕಪ್‌ನ ಒಂದು ಆವೃತ್ತಿಯಲ್ಲಿ ನಾಯಕನಾಗಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ನಾಯಕರ ಪೈಕಿ ಇಯಾನ್ ಮಾರ್ಗನ್ ಅವರನ್ನು ಹಿಂದಿಕ್ಕುವ ಅವಕಾಶ ಹೊಂದಿದ್ದಾರೆ.

ಇನ್ನು ಒಂದು ಆವೃತ್ತಿಯಲ್ಲಿ ಅಧಿಕ ಸಿಕ್ಸರ್ ಬಾರಿಸಿದ ಆಟಗಾರರ ಪೈಕಿ ಕ್ರಿಸ್ ಗೇಲ್ ನಂತರ ಆಸ್ಟ್ರೇಲಿಯಾದ ಮ್ಯಾಕ್ಸ್‌ವೆಲ್ ಇದ್ದಾರೆ. ಮ್ಯಾಕ್ಸ್‌ವೆಲ್ 2023 ರ ವಿಶ್ವಕಪ್‌ನಲ್ಲಿ ಇದುವರೆಗೆ 22 ಸಿಕ್ಸರ್ ಬಾರಿಸಿದ್ದಾರೆ.

ಅವರ ನಂತರ 22 ಸಿಕ್ಸರ್ ಬಾರಿಸಿರುವ ರೋಹಿತ್ ಶರ್ಮಾ ಇದ್ದರೆ. ಅಷ್ಟೇ ಸಂಖ್ಯೆಯ ಸಿಕ್ಸರ್ ಬಾರಿಸಿರುವ ಇಂಗ್ಲೆಂಡ್ ತಂಡದ ಮಾಜಿ ನಾಯಕ ಇಯಾನ್ ಮಾರ್ಗನ್ ಇದ್ದಾರೆ.

ಇನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರೋಹಿತ್ ಶರ್ಮಾ ಅವರ ದಾಖಲೆಯನ್ನು ನೋಡುವುದಾದರೆ, ಇದುವರೆಗೆ ರೋಹಿತ್ ಬೆಂಗಳೂರಿನಲ್ಲಿ ಎರಡು ಶತಕಗಳನ್ನು ಬಾರಿಸಿದ್ದಾರೆ. ಅಲ್ಲದೆ ಇದೇ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧ 09 ರನ್‌ಗಳ ಇನ್ನಿಂಗ್ಸ್‌ಗಳನ್ನು ಆಡಿದ್ದರು.
























