Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಆರಂಭಿಕನಾಗಿ ರನ್ ಶಿಖರ; ವಿಶ್ವ ದಾಖಲೆ ಮುರಿದ ರೋಹಿತ್ ಶರ್ಮಾ

Rohit Sharma Breaks Sachin's Record: ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ 20 ರನ್‌ಗಳಿಗೆ ಔಟಾದರೂ, ಏಕದಿನ ಕ್ರಿಕೆಟ್‌ನಲ್ಲಿ ಆರಂಭಿಕನಾಗಿ 9000 ರನ್‌ಗಳನ್ನು ಪೂರ್ಣಗೊಳಿಸಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಸಚಿನ್ ತೆಂಡೂಲ್ಕರ್‌ರ ದಾಖಲೆಯನ್ನು ಮುರಿದು, ಅತಿ ಕಡಿಮೆ ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆಯನ್ನು ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಪೃಥ್ವಿಶಂಕರ
|

Updated on: Feb 23, 2025 | 9:06 PM

ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮತ್ತೊಮ್ಮೆ ಉತ್ತಮ ಆರಂಭವನ್ನು ಬಿಗ್ ಇನ್ನಿಂಗ್ಸ್ ಆಗಿ ಪರಿವರ್ತಿಸುವಲ್ಲಿ ವಿಫಲರಾಗಿದ್ದಾರೆ. ಪಾಕಿಸ್ತಾನ ವಿರುದ್ಧದ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಎಂದಿನಂತೆ ಆರಂಭಿಕರಾಗಿ ಕಣಕ್ಕಿಳಿದಿದ್ದ ರೋಹಿತ್ ಹೊಡಿಬಡಿ ಆಟದ ಮೂಲಕ ಪಾಕ್ ಬೌಲರ್​ಗಳ ಬೆವರಿಳಿಸಿದರು. ಆದರೆ 20 ರನ್​ಗಳಿಗೆ ರೋಹಿತ್ ಇನ್ನಿಂಗ್ಸ್ ಅಂತ್ಯಗೊಂಡಿತು.

1 / 6
ಆದಾಗ್ಯೂ ತಮ್ಮ ಅಲ್ಪ ಇನ್ನಿಂಗ್ಸ್​ನಲ್ಲೂ ಏಕದಿನದಲ್ಲಿ ರೋಹಿತ್ ಶರ್ಮಾ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದಾರೆ. 2013 ರಲ್ಲಿ ಸಾಮಾನ್ಯ ಆರಂಭಿಕ ಆಟಗಾರನಾಗಿ ಆಡಲು ಪ್ರಾರಂಭಿಸಿದ ರೋಹಿತ್, ಅಂದಿನಿಂದ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಂದರ ನಂತರ ಒಂದರಂತೆ ಅನೇಕ ದೊಡ್ಡ ದಾಖಲೆಗಳನ್ನು ಮಾಡಿದ್ದಾರೆ. ಇದೀಗ ವಿಶೇಷ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿದ್ದಾರೆ.

2 / 6
ಪಾಕಿಸ್ತಾನ ವಿರುದ್ಧದ ಈ ಪಂದ್ಯದಲ್ಲಿ ಖಾತೆ ತೆರೆದ ತಕ್ಷಣ ರೋಹಿತ್ ಶರ್ಮಾ ಏಕದಿನ ಕ್ರಿಕೆಟ್‌ನಲ್ಲಿ ಆರಂಭಿಕನಾಗಿ 9000 ರನ್‌ಗಳನ್ನು ಪೂರ್ಣಗೊಳಿಸಿದ ಸಾಧನೆ ಮಾಡಿದರು. ರೋಹಿತ್ ಕೇವಲ 181 ಇನ್ನಿಂಗ್ಸ್‌ಗಳಲ್ಲಿ ಏಕದಿನ ಕ್ರಿಕೆಟ್‌ನಲ್ಲಿ 9000 ರನ್‌ಗಳ ಗಡಿಯನ್ನು ದಾಟಿದರು. ಈ ಮೂಲಕ ಏಕದಿನದಲ್ಲಿ ಆರಂಭಿಕನಾಗಿ ಅತಿ ಕಡಿಮೆ ಇನ್ನಿಂಗ್ಸ್​ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟರ್ ಎಂಬ ವಿಶ್ವದಾಖಲೆ ಬರೆದಿದ್ದಾರೆ.

3 / 6
ರೋಹಿತ್ ಶರ್ಮಾಗೂ ಮೊದಲು ಈ ದಾಖಲೆ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. ಅವರು 197 ಇನ್ನಿಂಗ್ಸ್‌ಗಳಲ್ಲಿ ಆರಂಭಿಕನಾಗಿ 9000 ರನ್‌ಗಳನ್ನು ಪೂರೈಸಿದ್ದರು. ಈಗ ರೋಹಿತ್ ಶರ್ಮಾ ಈ ದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ.

4 / 6
ಸಚಿನ್ ಹೊರತುಪಡಿಸಿ, ರೋಹಿತ್ ಶರ್ಮಾ ಸೌರವ್ ಗಂಗೂಲಿ, ಕ್ರಿಸ್ ಗೇಲ್, ಆಡಮ್ ಗಿಲ್‌ಕ್ರಿಸ್ಟ್ ಮತ್ತು ಸನತ್ ಜಯಸೂರ್ಯ ಅವರಂತಹ ದಂತಕಥೆಯ ಆರಂಭಿಕ ಆಟಗಾರರನ್ನು ಹಿಂದಿಕ್ಕಿದ್ದಾರೆ. ಸೌರವ್ ಗಂಗೂಲಿ 231 ಇನ್ನಿಂಗ್ಸ್‌ಗಳಲ್ಲಿ, ಕ್ರಿಸ್ ಗೇಲ್ 246 ಇನ್ನಿಂಗ್ಸ್‌ಗಳಲ್ಲಿ, ಆಡಮ್ ಗಿಲ್‌ಕ್ರಿಸ್ಟ್ 253 ಇನ್ನಿಂಗ್ಸ್‌ಗಳಲ್ಲಿ ಮತ್ತು ಸನತ್ ಜಯಸೂರ್ಯ 268 ಇನ್ನಿಂಗ್ಸ್‌ಗಳಲ್ಲಿ ಆರಂಭಿಕರಾಗಿ 9000 ರನ್‌ಗಳನ್ನು ಪೂರೈಸಿದ್ದಾರೆ.

5 / 6
ಮೇಲೆ ಹೇಳಿದಂತೆ ಈ ಪಂದ್ಯದಲ್ಲಿ ರೋಹಿತ್ ಶರ್ಮಾ ದೊಡ್ಡ ಇನ್ನಿಂಗ್ಸ್ ಆಡುವಲ್ಲಿ ವಿಫಲರಾದರು. ಅವರು 15 ಎಸೆತಗಳನ್ನು ಎದುರಿಸಿ 133.33 ಸ್ಟ್ರೈಕ್ ರೇಟ್‌ನಲ್ಲಿ 20 ರನ್ ಗಳಿಸಿ ಔಟಾದರು. ಈ ಅವಧಿಯಲ್ಲಿ, ಅವರ ಬ್ಯಾಟ್‌ನಿಂದ 3 ಬೌಂಡರಿಗಳು ಮತ್ತು 1 ಸಿಕ್ಸರ್‌ಗಳು ಸಿಡಿದವು.

6 / 6
Follow us
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ

VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್

ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?

Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ

ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್

ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!

ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು

ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?

‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ

ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ