AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಜಸ್ಪ್ರೀತ್ ಬುಮ್ರಾ ನಾಯಕತ್ವದಲ್ಲಿ ಟೀಂ ಇಂಡಿಯಾದ ಪ್ರದರ್ಶನ ಹೇಗಿದೆ ಗೊತ್ತಾ?

Jasprit Bumrah Captaincy Record: ರೋಹಿತ್ ಶರ್ಮಾ ಅವರ ಅನುಪಸ್ಥಿತಿಯಲ್ಲಿ ಜಸ್ಪ್ರೀತ್ ಬುಮ್ರಾ ಭಾರತ ಕ್ರಿಕೆಟ್ ತಂಡವನ್ನು ಪರ್ತ್ ಟೆಸ್ಟ್‌ನಲ್ಲಿ ಮುನ್ನಡೆಸಲಿದ್ದಾರೆ. ಬುಮ್ರಾ ಅವರ ನಾಯಕತ್ವದಲ್ಲಿ ಟೀಂ ಇಂಡಿಯಾದ ಹಿಂದಿನ ಪ್ರದರ್ಶನವನ್ನು ಪರಿಶೀಲಿಸಿದರೆ, ಅವರು ಒಂದು ಟೆಸ್ಟ್ ಪಂದ್ಯದಲ್ಲಿ ಸೋಲು ಮತ್ತು ಒಂದು ಟೆಸ್ಟ್ ಪಂದ್ಯದಲ್ಲಿ ಗೆಲುವು ಸಾಧಿಸಿದ್ದಾರೆ. ಅಲ್ಲದೆ ನಾಯಕನಾಗಿ ಟಿ20ಯಲ್ಲಿ ಐರ್ಲೆಂಡ್ ವಿರುದ್ಧದ ಸರಣಿಯನ್ನು ಗೆದ್ದಿದ್ದಾರೆ.

ಪೃಥ್ವಿಶಂಕರ
|

Updated on: Nov 18, 2024 | 7:11 PM

Share
ಆಸ್ಟ್ರೇಲಿಯಾ ಹಾಗೂ ಭಾರತ ನಡುವೆ ನವೆಂಬರ್ 23 ರಿಂದ ಆರಂಭವಾಗಲಿರುವ ಪರ್ತ್​ ಟೆಸ್ಟ್​ಗೆ ಟೀಂ ಇಂಡಿಯಾದ ಖಾಯಂ ನಾಯಕ ರೋಹಿತ್ ಶರ್ಮಾ ಅಲಭ್ಯರಾಗಿದ್ದಾರೆ. ಹೀಗಾಗಿ ಅವರ ಅನುಪಸ್ಥಿತಿಯಲ್ಲಿ ತಂಡದ ಉಪನಾಯಕನಾಗಿರುವ ಜಸ್ಪ್ರೀತ್ ಬುಮ್ರಾ ಭಾರತ ಟೆಸ್ಟ್ ತಂಡವನ್ನು ಮುನ್ನಡೆಸಲಿದ್ದಾರೆ. ಆದರೆ ಅದಕ್ಕೂ ಮುನ್ನ ಬುಮ್ರಾ ನಾಯಕತ್ವದಲ್ಲಿ ಟೀಂ ಇಂಡಿಯಾದ ಪ್ರದರ್ಶನ ಹೇಗಿದೆ ಎಂಬುದನ್ನು ನೋಡುವುದಾದರೆ..

1 / 7
ಮೊದಲು ನಾವು ಟೆಸ್ಟ್ ಮಾದರಿಯಲ್ಲಿ ಬುಮ್ರಾ ಅವರ ನಾಯಕತ್ವದ ಬಗ್ಗೆ ಮಾತನಾಡುವುದಾದರೆ... ಬುಮ್ರಾ ಪೂರ್ಣ ಪ್ರಮಾಣದ ನಾಯಕನಾಗಿ ಕೇವಲ ಒಂದು ಟೆಸ್ಟ್  ಪಂದ್ಯದಲ್ಲಿ ಭಾರತವನ್ನು ಮುನ್ನಡೆಸಿದ್ದಾರೆ. 2021 ರ ಜುಲೈನಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಬುಮ್ರಾ ತಂಡದ ನಾಯಕತ್ವವಹಿಸಿದ್ದರು.

2 / 7
ವಾಸ್ತವವಾಗಿ ಭಾರತ ಹಾಗೂ ಇಂಗ್ಲೆಂಡ್ ನಡುವೆ 2021 ರಲ್ಲಿ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಯೋಜಿಸಲಾಗಿತ್ತು. ಆದರೆ ಮೊದಲ ನಾಲ್ಕು ಪಂದ್ಯಗಳು ನಡೆದ ಬಳಿಕ ಕೋವಿಡ್ -19 ಸಾಂಕ್ರಾಮಿಕ ರೋಗದ ಕಾರಣದಿಂದಾಗಿ ಕೊನೆಯ ಟೆಸ್ಟ್ ಪಂದ್ಯವನ್ನು ಮುಂದಿನ ವರ್ಷಕ್ಕೆ ಅಂದರೆ 2022 ರಲ್ಲಿ ಆಯೋಜಿಸಲು ತೀರ್ಮಾನಿಸಲಾಯಿತು.

3 / 7
ಅದರಂತೆ 2022 ರಲ್ಲಿ ಆಯೋಜಿಸಲಾಗಿದ್ದ ಕೊನೆಯ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಅವರ ಅನುಪಸ್ಥಿತಿಯಲ್ಲಿ ಬುಮ್ರಾ ಅವರು ಟೀಂ ಇಂಡಿಯಾವನ್ನು ಮುನ್ನಡೆಸಿದ್ದರು. ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲನುಭವಿಸಬೇಕಾಯಿತು. ಈ ಪಂದ್ಯವನ್ನು ಇಂಗ್ಲೆಂಡ್ ಏಳು ವಿಕೆಟ್‌ಗಳಿಂದ ಜಯಗಳಿಸಿತು.

4 / 7
ಇದರರ್ಥ ಬುಮ್ರಾ ನಾಯಕತ್ವವಹಿಸಿದ ಏಕೈಕ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲನುಭವಿಸಬೇಕಾಯಿತು. ಆದಾಗ್ಯೂ, ಬುಮ್ರಾ ಆ ಪಂದ್ಯದಲ್ಲಿ ವೈಯಕ್ತಿಕವಾಗಿ ಅದ್ಭುತ ಪ್ರದರ್ಶನ ನೀಡಿದಲ್ಲದೆ, ಸ್ಟುವರ್ಟ್ ಬ್ರಾಡ್ ಎಸೆದ ಒಂದೇ ಓವರ್‌ನಲ್ಲಿ 35 ರನ್ ಬಾರಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದರು.

5 / 7
 ಆ ಬಳಿಕ 2023ರಲ್ಲಿ ಧರ್ಮಶಾಲಾದಲ್ಲಿ ನಡೆದ ಟೆಸ್ಟ್‌ನಲ್ಲಿ ಬುಮ್ರಾ ಪೂರ್ಣಾವಧಿ ನಾಯಕರಾಗಿರಲಿಲ್ಲ. ಆದರೆ ನಾಯಕ ರೋಹಿತ್ ಇಂಜುರಿಗೆ ತುತ್ತಾದ ಕಾರಣ, ಇಂಗ್ಲೆಂಡ್‌ನ ಎರಡನೇ ಇನ್ನಿಂಗ್ಸ್‌ನಲ್ಲಿ ಬುಮ್ರಾ ಭಾರತ ತಂಡವನ್ನು ಮುನ್ನಡೆಸಿದರು. ಬುಮ್ರಾ ಅವರ ನಾಯಕತ್ವದಲ್ಲಿ, ಭಾರತವು ಇಂಗ್ಲೆಂಡ್ ತಂಡವನ್ನು ಎರಡನೇ ಇನ್ನಿಂಗ್ಸ್‌ನಲ್ಲಿ 195 ರನ್‌ಗಳಿಗೆ ಆಲೌಟ್ ಮಾಡಿದಲ್ಲದೆ, ಇನ್ನಿಂಗ್ಸ್ ಮತ್ತು 64 ರನ್‌ಗಳಿಂದ ಜಯ ಸಾಧಿಸಿತು.

6 / 7
ಇನ್ನು ಟಿ20 ಮಾದರಿಯ ಬಗ್ಗೆ ಹೇಳುವುದಾದರೆ.. ಬುಮ್ರಾ, 2023 ರ ಆಗಸ್ಟ್​ನಲ್ಲಿ ಐರ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದರು. ತಂಡದ ನಿಯೋಜಿತ ನಾಯಕ ಹಾರ್ದಿಕ್ ಪಾಂಡ್ಯ ವಿಶ್ರಾಂತಿ ಪಡೆದ ಕಾರಣ ಬುಮ್ರಾಗೆ ನಾಯಕತ್ವ ನೀಡಲಾಗಿತ್ತು. ಬುಮ್ರಾ ಅವರ ನಾಯಕತ್ವದಲ್ಲಿ ಭಾರತವು ಮೊದಲ ಎರಡು ಪಂದ್ಯಗಳನ್ನು ಗೆದ್ದು ಸರಣಿಯನ್ನು 2-0 ರಿಂದ ವಶಪಡಿಸಿಕೊಂಡಿತು. ಮೂರನೇ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು.

7 / 7
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ