Team India: ನಾಯಕತ್ವ ಬದಲಿಸಿ ಟೀಮ್ ಇಂಡಿಯಾ ಗಳಿಸಿದ್ದೇನು? ಕೊಹ್ಲಿ ಅಭಿಮಾನಿಗಳ ಪ್ರಶ್ನೆ

Edited By:

Updated on: Jun 11, 2023 | 8:30 PM

WTC Final 2023: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು ಬಗ್ಗು ಬಡಿದು ಆಸ್ಟ್ರೇಲಿಯಾ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದರೊಂದಿಗೆ 2ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವ ಟೀಮ್ ಇಂಡಿಯಾ ಕನಸು ನುಚ್ಚು ನೂರಾಗಿದೆ.

1 / 8
ಲಂಡನ್​ನ ಓವಲ್​ ಮೈದಾನದಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ದ ಟೀಮ್ ಇಂಡಿಯಾ ಸೋಲನುಭವಿಸಿದೆ. ಈ ಸೋಲಿನೊಂದಿಗೆ ಐಸಿಸಿ ಟ್ರೋಫಿ ಗೆಲ್ಲುವ ಟೀಮ್ ಇಂಡಿಯಾದ ಕನಸು ಮತ್ತೊಮ್ಮೆ ಕಮರಿದೆ.

ಲಂಡನ್​ನ ಓವಲ್​ ಮೈದಾನದಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ದ ಟೀಮ್ ಇಂಡಿಯಾ ಸೋಲನುಭವಿಸಿದೆ. ಈ ಸೋಲಿನೊಂದಿಗೆ ಐಸಿಸಿ ಟ್ರೋಫಿ ಗೆಲ್ಲುವ ಟೀಮ್ ಇಂಡಿಯಾದ ಕನಸು ಮತ್ತೊಮ್ಮೆ ಕಮರಿದೆ.

2 / 8

ಅದರಲ್ಲೂ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಮ್ ಇಂಡಿಯಾ ಸತತ ಮೂರು ಪ್ರಮುಖ ಟೂರ್ನಿಗಳಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಳ್ಳುವಲ್ಲಿ ವಿಫಲವಾಗಿದೆ. 2022 ರಲ್ಲಿ ಭಾರತ ತಂಡದ ಪೂರ್ಣ ಪ್ರಮಾಣದ ನಾಯಕರಾಗಿ ಆಯ್ಕೆಯಾದ ರೋಹಿತ್ ಶರ್ಮಾ ಇದುವರೆಗೆ ಒಂದೇ ಒಂದು ಪ್ರಮುಖ ಟ್ರೋಫಿ ಗೆದ್ದಿಲ್ಲ.

3 / 8

ಹಿಟ್​ಮ್ಯಾನ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಏಷ್ಯಾಕಪ್, ಟಿ20 ವಿಶ್ವಕಪ್​ ಹಾಗೂ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್ ಫೈನಲ್ ಆಡಿದೆ. ಏಷ್ಯಾಕಪ್​ನಲ್ಲಿ ಭಾರತ ತಂಡವು ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಗಿತ್ತು. ಅಲ್ಲದೆ ಸೂಪರ್-4 ಹಂತದಲ್ಲೇ ಹೊರಬಿದ್ದಿದ್ದರು.

4 / 8

ಇನ್ನು ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವು ಸೆಮಿಫೈನಲ್​ನಲ್ಲಿ ಮುಗ್ಗರಿಸಿತು. ಇದೀಗ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲೂ ಪರಾಜಯಗೊಂಡಿದೆ. ಅಂದರೆ ರೋಹಿತ್ ಶರ್ಮಾ ನಾಯಕರಾದ ಬಳಿಕ ಪ್ರಮುಖ ಟೂರ್ನಿಗಳನ್ನಾಡಿರುವ ಟೀಮ್ ಇಂಡಿಯಾ ಕೇವಲ ಒಂದು ಬಾರಿ ಮಾತ್ರ ಫೈನಲ್​ ಪ್ರವೇಶಿಸಿದೆ.

5 / 8

ಅಲ್ಲದೆ ಮೂರು ಟೂರ್ನಿಗಳಲ್ಲೂ ಭಾರತ ತಂಡವು ಕಪ್ ಗೆಲ್ಲುವಲ್ಲಿ ವಿಫಲವಾಗಿದೆ. ಈ ಹಿಂದೆ ನಾಯಕರಾಗಿದ್ದ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೀಮ್ ಇಂಡಿಯಾ ಯಾವುದೇ ಐಸಿಸಿ ಟೂರ್ನಿ ಗೆದ್ದಿರಲಿಲ್ಲ. ಇದೇ ಕಾರಣದಿಂದಾಗಿ ಕೊಹ್ಲಿ ಬದಲಿಗೆ ರೋಹಿತ್ ಶರ್ಮಾಗೆ ನಾಯಕನ ಪಟ್ಟ ಕಟ್ಟಲಾಗಿತ್ತು.

6 / 8

ಆದರೀಗ ಒಂದು ಏಷ್ಯಾಕಪ್ ಹಾಗೂ 2 ಐಸಿಸಿ ಟೂರ್ನಿಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿರುವ ರೋಹಿತ್ ಶರ್ಮಾ ಪ್ರಶಸ್ತಿ ಗೆದ್ದುಕೊಡುವಲ್ಲಿ ವಿಫಲರಾಗಿದ್ದಾರೆ. ಇದರ ಬೆನ್ನಲ್ಲೇ ಹಿಟ್​ಮ್ಯಾನ್​ಗೆ ಪಟ್ಟಕಟ್ಟಿದ್ದ ಬಿಸಿಸಿಐ ನಡೆಯನ್ನು ಹಲವರು ಪ್ರಶ್ನಿಸಿದ್ದಾರೆ.

7 / 8

ವಿರಾಟ್ ಕೊಹ್ಲಿಯನ್ನು ಯಾವ ಕಾರಣದಿಂದ ನಾಯಕತ್ವದಿಂದ ಕೆಳಗಿಸಲಾಗಿತ್ತೋ, ಇದೀಗ ಅದೇ ಸ್ಥಾನದಲ್ಲಿ ರೋಹಿತ್ ಶರ್ಮಾ ಇದ್ದಾರೆ. ಈಗ ಬಿಸಿಸಿಐನವರು ಏನು ಸಮಜಾಯಿಷಿ ನೀಡುವಿರಿ ಎಂದು ಅನೇಕರು ಸೋಷಿಯಲ್ ಮೀಡಿಯಾದಲ್ಲಿ ಪ್ರಶ್ನಿಸಿದ್ದಾರೆ.

8 / 8

ಒಟ್ಟಿನಲ್ಲಿ ಕಿಂಗ್ ಕೊಹ್ಲಿ ನಾಯಕತ್ವ ತೊರೆದು ವರ್ಷ ಕಳೆದರೂ ಅವರೇ ಮತ್ತೊಮ್ಮೆ ಟೀಮ್ ಇಂಡಿಯಾವನ್ನು ಮುನ್ನಡೆಸಬೇಕೆಂಬ ಅಭಿಪ್ರಾಯ ಆಗಾಗ್ಗೆ ಕೇಳಿ ಬರುತ್ತಿರುತ್ತದೆ. ಇದೀಗ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಸೋಲಿನ ಬೆನ್ನಲ್ಲೇ ಕಿಂಗ್ ಕೊಹ್ಲಿಯ ನಾಯಕತ್ವದ ಚರ್ಚೆಗಳು ಮತ್ತೆ ಶುರುವಾಗಿರುವುದು ವಿಶೇಷ.

Published On - 8:30 pm, Sun, 11 June 23

Loading...
Unable to load recommendations.
Follow Us