Updated on: Aug 29, 2022 | 12:00 AM
ಏಷ್ಯಾಕಪ್ನ 2ನೇ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ದ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆ ನಿರ್ಮಿಸಿದ್ದಾರೆ.
2008 ರಿಂದ ಏಷ್ಯಾಕಪ್ ಆಡುತ್ತಿರುವ ರೋಹಿತ್ ಶರ್ಮಾಗೆ ಇದು 28ನೇ ಪಂದ್ಯ. ಅಂದರೆ ಏಷ್ಯಾಕಪ್ನಲ್ಲಿ ಅತ್ಯಧಿಕ ಪಂದ್ಯವಾಡಿದ ಟೀಮ್ ಇಂಡಿಯಾ ಆಟಗಾರ ಎನಿಸಿಕೊಂಡಿದ್ದಾರೆ.
ಅಷ್ಟೇ ಅಲ್ಲದೆ ಅತೀ ಹೆಚ್ಚು ಏಷ್ಯಾಕಪ್ ಪಂದ್ಯವಾಡಿದ ಆಟಗಾರ ಎಂಬ ದಾಖಲೆಯನ್ನು ಕೂಡ ಸರಿಗಟ್ಟಿದ್ದಾರೆ. ಈ ಪಟ್ಟಿಯಲ್ಲಿ ಶ್ರೀಲಂಕಾದ ಮಹೇಲ ಜಯವರ್ಧನೆ ಅಗ್ರಸ್ಥಾನದಲ್ಲಿದ್ದಾರೆ.
ಶ್ರೀಲಂಕಾ ತಂಡದ ಮಾಜಿ ನಾಯಕ ಜಯವರ್ಧನೆ 28 ಏಷ್ಯಾಕಪ್ ಪಂದ್ಯಗಳನ್ನಾಡಿದ್ದರು. ಇದೀಗ ರೋಹಿತ್ ಶರ್ಮಾ ಈ ದಾಖಲೆಯನ್ನು ಸರಿಗಟ್ಟುವ ಮೂಲಕ ಹೊಸ ಇತಿಹಾಸ ನಿರ್ಮಿಸುವತ್ತ ಹೆಜ್ಜೆಯಿನ್ನಿಟ್ಟಿದ್ದಾರೆ.
ಅಂದರೆ ಹಾಂಗ್ ಕಾಂಗ್ ವಿರುದ್ದದ ಪಂದ್ಯದಲ್ಲಿ ಹಿಟ್ಮ್ಯಾನ್ ಕಣಕ್ಕಿಳಿದರೆ ಅತೀ ಹೆಚ್ಚು ಏಷ್ಯಾಕಪ್ ಪಂದ್ಯವಾಡಿದ ಹೊಸ ದಾಖಲೆಯೊಂದು ರೋಹಿತ್ ಶರ್ಮಾ ಪಾಲಾಗಲಿದೆ.