AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾಗೆ ಗುಡ್ ನ್ಯೂಸ್: ಇಬ್ಬರು ಆಟಗಾರರು ಫುಲ್​ ಫಿಟ್

Champions Trophy 2025: ಚಾಂಪಿಯನ್ಸ್ ಟ್ರೋಫಿಯ ಕೊನೆಯ ಲೀಗ್​ ಪಂದ್ಯವು ಭಾನುವಾರ ನಡೆಯಲಿದೆ. ದುಬೈನ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಲಿದೆ.

ಝಾಹಿರ್ ಯೂಸುಫ್
|

Updated on: Mar 01, 2025 | 11:31 AM

Share
ಚಾಂಪಿಯನ್ಸ್ ಟ್ರೋಫಿಯ 12ನೇ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಅದು ಸಹ ಇಬ್ಬರು ಪ್ರಮುಖ ಆಟಗಾರರು ಮುಂದಿನ ಪಂದ್ಯಕ್ಕಾಗಿ ಸಂಪೂರ್ಣ ಫಿಟ್​ ಆಗುವುದರೊಂದಿಗೆ. ಈ ಸಿಹಿ ಸುದ್ದಿಯೊಂದಿಗೆ ಭಾರತ ತಂಡ ಆತಂಕ ಕೂಡ ದೂರವಾಗಿದೆ.

1 / 5
ಇದಕ್ಕೂ ಮುನ್ನ ನ್ಯೂಝಿಲೆಂಡ್ ವಿರುದ್ಧದ ಪಂದ್ಯಕ್ಕೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಅಲಭ್ಯರಾಗುವ ಸಾಧ್ಯತೆಯಿದೆ ಎಂದು ವರದಿಯಾಗಿತ್ತು. ಇದಕ್ಕೆ ಮುಖ್ಯ ಕಾರಣ ಗುರುವಾರ ನಡೆದ ಅಭ್ಯಾಸದ ವೇಳೆ ಈ ಇಬ್ಬರು ಕಾಣಿಸಿಕೊಳ್ಳದೇ ಇರುವುದು.

2 / 5
ಮಂಡಿರಜ್ಜು ಗಾಯದ ಸಮಸ್ಯೆಯ ಕಾರಣ ರೋಹಿತ್ ಶರ್ಮಾ ಗುರುವಾರ ನಡೆದ ಅಭ್ಯಾಸದ ವೇಳೆ ವೇಳೆ ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ಅವರು ನ್ಯೂಝಿಲೆಂಡ್ ವಿರುದ್ಧದ ಕೊನೆಯ ಲೀಗ್​ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎನ್ನಲಾಗಿತ್ತು. ಆದರೆ ಶುಕ್ರವಾರ ನೆಟ್ಸ್​ನಲ್ಲಿ ಅಭ್ಯಾಸ ನಡೆಸಿದ್ದಾರೆ. ಇದರೊಂದಿಗೆ ರೋಹಿತ್ ಶರ್ಮಾ ಫಿಟ್​ ಆಗಿರುವುದು ಖಚಿತವಾಗಿದೆ.

3 / 5
ಹಾಗೆಯೇ ಅನಾರೋಗ್ಯದಿಂದ ಬಳಲುತ್ತಿದ್ದ ಶುಭ್​ಮನ್ ಗಿಲ್ ಕೂಡ ಸಂಪೂರ್ಣ ಗುಣಮುಖರಾಗಿದ್ದು, ಶುಕ್ರವಾರ ನಡೆದ ಅಭ್ಯಾಸದ ವೇಳೆ ವಿರಾಟ್ ಕೊಹ್ಲಿ ಜತೆ ಕಾಣಿಸಿಕೊಂಡಿದ್ದಾರೆ. ಹೀಗಾಗಿ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಹಾಗೂ ಶುಭ್​​ಮನ್ ಗಿಲ್ ಕಣಕ್ಕಿಳಿಯುವುದು ಖಚಿತ ಎನ್ನಬಹುದು.

4 / 5
ಇನ್ನು ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಪಂದ್ಯವು ಮಾರ್ಚ್ 2 ರಂದು ನಡೆಯಲಿದೆ. ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಗ್ರೂಪ್-A ಅಂಕ ಪಟ್ಟಿಯಲ್ಲಿ ಭಾರತ ತಂಡ ಅಗ್ರಸ್ಥಾನ ಅಲಂಕರಿಸಲಿದೆ. ಅಲ್ಲದೆ ಸೆಮಿಫೈನಲ್​ನಲ್ಲಿ ಗ್ರೂಪ್-ಬಿ ನಲ್ಲಿ ದ್ವಿತೀಯ ಸ್ಥಾನ ಅಲಂಕರಿಸುವ ತಂಡವನ್ನು ಎದುರಿಸಲಿದೆ.

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ