Champions Trophy 2025: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಕೊನೆಯ ಜೊತೆಯಾಟ
Rohit Sharma and Virat Kohli: ಚಾಂಪಿಯನ್ಸ್ ಟ್ರೋಫಿ ಮುಕ್ತಾಯದ ಬೆನ್ನಲ್ಲೇ ರೋಹಿತ್ ಶರ್ಮಾ ಏಕದಿನ ಕ್ರಿಕೆಟ್ಗೆ ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ. ಏಕೆಂದರಎ 37 ವರ್ಷದ ರೋಹಿತ್ ಶರ್ಮಾಗೆ ಮುಂಬರುವ ಸರಣಿಗಳಿಗೆ ಆಯ್ಕೆ ಮಾಡುವುದಿಲ್ಲ ಎಂದು ಆಯ್ಕೆ ಸಮಿತಿ ಸ್ಪಷ್ಟ ಸಂದೇಶ ರವಾನಿಸಿದೆ. ಹಾಗೆಯೇ ಚಾಂಪಿಯನ್ಸ್ ಟ್ರೋಫಿಯಲ್ಲಿನ ಪ್ರದರ್ಶನ ಮೇಲೆ ವಿರಾಟ್ ಕೊಹ್ಲಿಯ ಭವಿಷ್ಯ ಕೂಡ ನಿರ್ಧಾರವಾಗಲಿದೆ.
1 / 6
ಟೀಮ್ ಇಂಡಿಯಾ ದಿಗ್ಗಜರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಮೂರನೇ ಬಾರಿ ಜೊತೆಯಾಗಿ ಚಾಂಪಿಯನ್ಸ್ ಟ್ರೋಫಿ ಆಡಲು ಸಜ್ಜಾಗಿದ್ದಾರೆ. 2013 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಜೊತೆಯಾಗಿ ಕಣಕ್ಕಿಳಿದಿದ್ದ ಈ ಜೋಡಿಯು ಆ ಬಳಿಕ 2017 ರಲ್ಲೂ ಜೊತೆ ಜೊತೆಯಾಗಿ ಕಾಣಿಸಿಕೊಂಡಿದ್ದರು.
2 / 6
ಇದೀಗ 2025 ರಲ್ಲಿ ಮತ್ತೆ ಜೊತೆಯಾಗಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಆದರೆ ಇದು ಕೊನೆಯ ಜೊತೆಯಾಟವಾಗುವುದು ಖಚಿತ. ಏಕೆಂದರೆ ಚಾಂಪಿಯನ್ಸ್ ಟ್ರೋಫಿ ಬಳಿಕ ಟೀಮ್ ಇಂಡಿಯಾಗೆ ಮೇಜರ್ ಸರ್ಜರಿಯಾಗಲಿದೆ ಎಂಬ ಸೂಚನೆಯನ್ನು ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ನೀಡಿದ್ದಾರೆ.
3 / 6
ಇತ್ತ ಚಾಂಪಿಯನ್ಸ್ ಟ್ರೋಫಿಯಲ್ಲಿ ರೋಹಿತ್ ಶರ್ಮಾ ವಿಫಲರಾದರೆ ಏಕದಿನ ತಂಡದಿಂದ ಹೊರಬೀಳುವುದು ಖಚಿತ. ಅಷ್ಟೇ ಅಲ್ಲದೆ ಹಿಟ್ಮ್ಯಾನ್ ಅವರ ಕೆರಿಯರ್ ಕೂಡ ಇದರೊಂದಿಗೆ ಕೊನೆಗೊಳ್ಳಲಿದೆ ಎಂದು ಕೆಲ ವರದಿಗಳು ತಿಳಿಸಿವೆ. ಹೀಗಾಗಿ ಇದು ರೋಹಿತ್ ಶರ್ಮಾ ಅವರ ಕೊನೆಯ ಐಸಿಸಿ ಟೂರ್ನಿಯಾಗುವ ಸಾಧ್ಯತೆ ಹೆಚ್ಚು.
4 / 6
ಮತ್ತೊಂದೆಡೆ ವಿರಾಟ್ ಕೊಹ್ಲಿಯ ಭವಿಷ್ಯ ಕೂಡ ಚಾಂಪಿಯನ್ಸ್ ಟ್ರೋಫಿಯೊಂದಿಗೆ ನಿರ್ಧಾರವಾಗಲಿದೆ. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಕೊಹ್ಲಿಗೂ ಬಿಸಿ ಮುಟ್ಟಿಸಲು ಬಿಸಿಸಿಐ ನಿರ್ಧರಿಸಿದೆ. ಹೀಗಾಗಿ ಚಾಂಪಿಯನ್ಸ್ ಟ್ರೋಫಿಯಲ್ಲಿ ವಿಫಲರಾದರೆ ಕೆಲ ಸರಣಿಗಳಿಂದ ಅವರನ್ನು ಕೈ ಬಿಡುವ ಸೂಚನೆ ನೀಡಲಾಗಿದೆ.
5 / 6
ಹೀಗಾಗಿ ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕೆರಿಯರ್ನ ಭವಿಷ್ಯ ನಿರ್ಧರಿಸಲಿದೆ. ಈ ಭವಿಷ್ಯ ನಿರ್ಧಾರಕ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿ ತನ್ನ ಸ್ಥಾನವನ್ನು ಗಟ್ಟಿಸುವವರು ಯಾರು ಎಂಬುದೇ ಈಗ ಕುತೂಹಲ.
6 / 6
ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಭ್ ಪಂತ್, ರವೀಂದ್ರ ಜಡೇಜಾ.