ಭಾರತ ತಂಡವು ಇದೇ ತಿಂಗಳ 16 ರಂದು ದಕ್ಷಿಣ ಆಫ್ರಿಕಾ ಸರಣಿಗೆ ತೆರಳಲಿದ್ದು, ಮೊದಲ ಟೆಸ್ಟ್ ಪಂದ್ಯವು ಡಿಸೆಂಬರ್ 26 ರಿಂದ ಶುರುವಾಗಲಿದೆ. ಇನ್ನು ಮೂರು ಟೆಸ್ಟ್ ಪಂದ್ಯಗಳ ಬಳಿಕ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಏಕದಿನ ಸರಣಿ ಆರಂಭವಾಗಲಿದೆ. ಈ ಸರಣಿಯೊಂದಿಗೆ ರೋಹಿತ್ ಶರ್ಮಾ ಏಕದಿನ ತಂಡದ ನಾಯಕನಾಗಿ ಪದಾರ್ಪಣೆ ಮಾಡಲಿದ್ದಾರೆ.