Updated on: Feb 24, 2022 | 8:08 PM
ಶ್ರೀಲಂಕಾ ವಿರುದ್ದದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಅಬ್ಬರಿಸುವ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಹಿಟ್ಮ್ಯಾನ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು
32 ಎಸೆತಗಳಲ್ಲಿ 44 ರನ್ ಬಾರಿಸುವ ಮೂಲಕ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟ್ಸ್ಮನ್ ಎಂಬ ದಾಖಲೆ ಬರೆದರು.
ಇದಕ್ಕೂ ಮುನ್ನ ಈ ದಾಖಲೆ ನ್ಯೂಜಿಲೆಂಡ್ನ ಆರಂಭಿಕ ಆಟಗಾರ ಮಾರ್ಟಿನ್ ಗಪ್ಟಿಲ್ ಹೆಸರಿನಲ್ಲಿತ್ತು. ಗಪ್ಟಿಲ್ 112 ಟಿ20 ಪಂದ್ಯಗಳಿಂದ 3299 ರನ್ ಕಲೆಹಾಕಿದ್ದರು. ಇದೀಗ ರೋಹಿತ್ ಶರ್ಮಾ 3307 ರನ್ ಬಾರಿಸುವ ಮೂಲಕ ಟಿ20 ಕ್ರಿಕೆಟ್ನಲ್ಲಿ ಅತ್ಯಂತ ಯಶಸ್ವಿ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ.
ಇನ್ನು ಈ ಪಟ್ಟಿಯಲ್ಲಿ ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಕಿಂಗ್ ಕೊಹ್ಲಿ 97 ಟಿ20 ಪಂದ್ಯಗಳಿಂದ 3296 ರನ್ ಬಾರಿಸಿದ್ದಾರೆ.
ಇದೀಗ 115 ಟಿ20 ಇನಿಂಗ್ಸ್ಗಳ ಮೂಲಕ ರೋಹಿತ್ ಶರ್ಮಾ 3307 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟ್ಸ್ಮನ್ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದಾರೆ.