Rohit Sharma: ಟಾಪ್-3 ಗೆ ಎಂಟ್ರಿ ಕೊಟ್ಟ ಸಿಕ್ಸರ್ ಸರದಾರ ರೋಹಿತ್ ಶರ್ಮಾ
TV9 Web | Updated By: ಝಾಹಿರ್ ಯೂಸುಫ್
Updated on:
Jan 25, 2023 | 5:28 PM
Rohit Sharma Records: ರೋಹಿತ್ ಶರ್ಮಾ ಏಕದಿನ ಸಿಕ್ಸರ್ ಸರದಾರರ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದರು. ಹಾಗಿದ್ರೆ ಏಕದಿನ ಕ್ರಿಕೆಟ್ನಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಬ್ಯಾಟರ್ಗಳು ಯಾರೆಲ್ಲಾ ಎಂದು ನೋಡೋಣ...
1 / 8
ನ್ಯೂಜಿಲೆಂಡ್ ವಿರುದ್ಧ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಆಕರ್ಷಕ ಶತಕ ಬಾರಿಸಿ ಮಿಂಚಿದ್ದರು. ಈ ಪಂದ್ಯದಲ್ಲಿ 85 ಎಸೆತಗಳನ್ನು ಎದುರಿಸಿದ ಹಿಟ್ಮ್ಯಾನ್ 101 ರನ್ ಬಾರಿಸಿದ್ದರು. ಈ ಸ್ಪೋಟಕ ಇನಿಂಗ್ಸ್ನಲ್ಲಿ ರೋಹಿತ್ ಬ್ಯಾಟ್ನಿಂದ 6 ಸಿಕ್ಸರ್ ಹಾಗೂ 9 ಫೋರ್ಗಳು ಮೂಡಿಬಂದಿತ್ತು.
2 / 8
ವಿಶೇಷ ಎಂದರೆ ಈ 6 ಭರ್ಜರಿ ಸಿಕ್ಸ್ಗಳೊಂದಿಗೆ ಏಕದಿನ ಕ್ರಿಕೆಟ್ನಲ್ಲಿ ಅತ್ಯಧಿಕ ಸಿಕ್ಸರ್ ಬಾರಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ಹಿಟ್ಮ್ಯಾನ್ 3ನೇ ಸ್ಥಾನಕ್ಕೇರಿದ್ದಾರೆ. ಇದಕ್ಕೂ ಮುನ್ನ ಈ ಸ್ಥಾನದಲ್ಲಿ ಶ್ರೀಲಂಕಾದ ಸನತ್ ಜಯಸೂರ್ಯ ಇದ್ದರು.
3 / 8
ನ್ಯೂಜಿಲೆಂಡ್ ವಿರುದ್ಧ 6 ಸಿಕ್ಸ್ ಸಿಡಿಸುವುದರೊಂದಿಗೆ ರೋಹಿತ್ ಶರ್ಮಾ ಏಕದಿನ ಸಿಕ್ಸರ್ ಸರದಾರರ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದರು. ಹಾಗಿದ್ರೆ ಏಕದಿನ ಕ್ರಿಕೆಟ್ನಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಬ್ಯಾಟರ್ಗಳು ಯಾರೆಲ್ಲಾ ಎಂದು ನೋಡೋಣ...
4 / 8
1- ಶಾಹಿದ್ ಅಫ್ರಿದಿ: ಪಾಕಿಸ್ತಾನದ ಮಾಜಿ ಆಟಗಾರ ಶಾಹಿದ್ ಅಫ್ರಿದಿ 369 ಏಕದಿನ ಇನಿಂಗ್ಸ್ನಲ್ಲಿ ಒಟ್ಟು 351 ಸಿಕ್ಸ್ಗಳನ್ನು ಬಾರಿಸಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್ನ ಸಿಕ್ಸರ್ ಕಿಂಗ್ ಎನಿಸಿಕೊಂಡಿದ್ದಾರೆ.
5 / 8
2- ಕ್ರಿಸ್ ಗೇಲ್: ವೆಸ್ಟ್ ಇಂಡೀಸ್ನ ಸ್ಪೋಟಕ ಬ್ಯಾಟ್ಸ್ಮನ್ ಕ್ರಿಸ್ ಗೇಲ್ 294 ಏಕದಿನ ಇನಿಂಗ್ಸ್ ಮೂಲಕ ಒಟ್ಟು 331 ಸಿಕ್ಸ್ಗಳನ್ನು ಬಾರಿಸಿದ್ದಾರೆ. ಈ ಮೂಲಕ ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.
6 / 8
3- ರೋಹಿತ್ ಶರ್ಮಾ: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ 234 ಏಕದಿನ ಇನಿಂಗ್ಸ್ ಮೂಲಕ ಒಟ್ಟು 273 ಸಿಕ್ಸ್ ಬಾರಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಅತ್ಯಧಿಕ ಸಿಕ್ಸ್ ಬಾರಿಸಿದ ಬ್ಯಾಟರ್ ಹಾಗೂ ಏಕದಿನ ಕ್ರಿಕೆಟ್ನಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ವಿಶ್ವದ 3ನೇ ಆಟಗಾರ ಎನಿಸಿಕೊಂಡಿದ್ದಾರೆ.
7 / 8
4- ಸನತ್ ಜಯಸೂರ್ಯ: ಶ್ರೀಲಂಕಾದ ಮಾಜಿ ಆರಂಭಿಕ ಆಟಗಾರ ಸನತ್ ಜಯಸೂರ್ಯ 433 ಏಕದಿನ ಇನಿಂಗ್ಸ್ ಮೂಲಕ ಒಟ್ಟು 270 ಸಿಕ್ಸ್ಗಳನ್ನು ಬಾರಿಸಿದ್ದಾರೆ.
8 / 8
5- ಮಹೇಂದ್ರ ಸಿಂಗ್ ಧೋನಿ: ಟೀಮ್ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ 297 ಏಕದಿನ ಇನಿಂಗ್ಸ್ ಮೂಲಕ ಒಟ್ಟು 229 ಸಿಕ್ಸ್ ಸಿಡಿಸಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ 2ನೇ ಭಾರತೀಯ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ.