- Kannada News Photo gallery Cricket photos Rohit Sharma becomes 5th Indian player to play 500 international match
ಕಣಕ್ಕಿಳಿದ ಬೆನ್ನಲ್ಲೇ ದಾಖಲೆ ಬರೆದ ರೋಹಿತ್ ಶರ್ಮಾ
Rohit Sharma Record: ಟೀಮ್ ಇಂಡಿಯಾ ಪರ ಅಂತರ ರಾಷ್ಟ್ರೀಯ ಕ್ರಿಕೆಟ್ನಲ್ಲಿ ಐನೂರಕ್ಕೂ ಹೆಚ್ಚು ಪಂದ್ಯಗಳಾಡಿರುವುದು ಕೇವಲ ನಾಲ್ವರು ಆಟಗಾರರು ಮಾತ್ರ. ಇದೀಗ ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ಈ ಸಾಧಕರ ಪಟ್ಟಿಗೆ ಹಿಟ್ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಕೂಡ ಸೇರ್ಪಡೆಯಾಗಿದ್ದಾರೆ.
Updated on:Oct 19, 2025 | 9:26 AM

ಪರ್ತ್ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯುತ್ತಿದ್ದಂತೆ ರೋಹಿತ್ ಶರ್ಮಾ (Rohit Sharma) ವಿಶೇಷ ದಾಖಲೆ ಬರೆದಿದ್ದಾರೆ. ಅದು ಸಹ 500 ಅಂತಾರಾಷ್ಟ್ರೀಯ ಪಂದ್ಯಗಳನ್ನು ಪೂರೈಸುವ ಮೂಲಕ ಎಂಬುದು ವಿಶೇಷ.

ಅಂದರೆ ಭಾರತದ ಪರ 500 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವುದು ಕೇವಲ 5 ಮಂದಿ ಮಾತ್ರ. ಈ ಐವರಲ್ಲಿ ಇದೀಗ ಐದನೇ ಸ್ಥಾನದಲ್ಲಿ ರೋಹಿತ್ ಶರ್ಮಾ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ 500 ಪಂದ್ಯಗಳನ್ನಾಡಿದ ವಿಶೇಷ ಸಾಧಕರ ಪಟ್ಟಿಗೆ ಹಿಟ್ಮ್ಯಾನ್ ಸೇರ್ಪಡೆಯಾಗಿದ್ದಾರೆ.

ಇದಕ್ಕೂ ಮುನ್ನ ಭಾರತದ ಪರ ಸಚಿನ್ ತೆಂಡೂಲ್ಕರ್ (664), ವಿರಾಟ್ ಕೊಹ್ಲಿ (551), ಮಹೇಂದ್ರ ಸಿಂಗ್ ಧೋನಿ (535) ಮತ್ತು ರಾಹುಲ್ ದ್ರಾವಿಡ್ (504) ಮಾತ್ರ 500 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದ ಸಾಧನೆ ಮಾಡಿದ್ದರು. ಇದೀಗ ಈ ಸಾಧನೆ ಮಾಡಿದ ಐದನೇ ಭಾರತೀಯನಾಗಿ ರೋಹಿತ್ ಶರ್ಮಾ ಗುರುತಿಸಿಕೊಂಡಿದ್ದಾರೆ.

ಭಾರತದ ಪರ 500 ಪಂದ್ಯಗಳಲ್ಲಿ 532 ಇನಿಂಗ್ಸ್ ಆಡಿರುವ ರೋಹಿತ್ ಶರ್ಮಾ ಈವರೆಗೆ 19701* ರನ್ ಕಲೆಹಾಕಿದ್ದಾರೆ. ಇದರ ನಡುವೆ ಹಿಟ್ಮ್ಯಾನ್ ಬ್ಯಾಟ್ನಿಂದ 49 ಶತಕ ಹಾಗೂ 108 ಅರ್ಧಶತಕಗಳು ಮೂಡಿಬಂದಿವೆ. ಹಾಗೆಯೇ 637 ಸಿಕ್ಸರ್ಗಳನ್ನು ಸಿಡಿಸಿದ್ದಾರೆ.

ಅಂದರೆ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಸರಣಿಯ ಮೂಲಕ ರೋಹಿತ್ ಶರ್ಮಾ 300 ರನ್ ಕಲೆಹಾಕಿದರೆ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 20 ಸಾವಿರ ರನ್ ಪೂರೈಸಲಿದ್ದಾರೆ. ಹಾಗೆಯೇ ಒಂದು ಶತಕ ಸಿಡಿಸಿದರೆ ಇಂಟರ್ನ್ಯಾಷನಲ್ ಕ್ರಿಕೆಟ್ನಲ್ಲಿ 50 ಶತಕ ಸಿಡಿಸಿದ ಸಾಧಕರ ಪಟ್ಟಿಯಲ್ಲೂ ಸ್ಥಾನ ಪಡೆಯಲಿದ್ದಾರೆ. ಹೀಗಾಗಿ ಆಸೀಸ್ ಪಿಚ್ನಲ್ಲಿ ಹಿಟ್ಮ್ಯಾನ್ ಕಡೆಯಿಂದ ಭರ್ಜರಿ ದಾಖಲೆಗಳನ್ನು ನಿರೀಕ್ಷಿಸಬಹುದು.
Published On - 9:23 am, Sun, 19 October 25




