ಕಣಕ್ಕಿಳಿದ ಬೆನ್ನಲ್ಲೇ ದಾಖಲೆ ಬರೆದ ರೋಹಿತ್ ಶರ್ಮಾ

Updated on: Oct 19, 2025 | 9:26 AM

Rohit Sharma Record: ಟೀಮ್ ಇಂಡಿಯಾ ಪರ ಅಂತರ ರಾಷ್ಟ್ರೀಯ ಕ್ರಿಕೆಟ್​ನಲ್ಲಿ ಐನೂರಕ್ಕೂ ಹೆಚ್ಚು ಪಂದ್ಯಗಳಾಡಿರುವುದು ಕೇವಲ ನಾಲ್ವರು ಆಟಗಾರರು ಮಾತ್ರ. ಇದೀಗ ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ಈ ಸಾಧಕರ ಪಟ್ಟಿಗೆ ಹಿಟ್​ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಕೂಡ ಸೇರ್ಪಡೆಯಾಗಿದ್ದಾರೆ. 

1 / 5
ಪರ್ತ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯುತ್ತಿದ್ದಂತೆ ರೋಹಿತ್ ಶರ್ಮಾ (Rohit Sharma) ವಿಶೇಷ ದಾಖಲೆ ಬರೆದಿದ್ದಾರೆ. ಅದು ಸಹ 500 ಅಂತಾರಾಷ್ಟ್ರೀಯ ಪಂದ್ಯಗಳನ್ನು ಪೂರೈಸುವ ಮೂಲಕ ಎಂಬುದು ವಿಶೇಷ.

ಪರ್ತ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯುತ್ತಿದ್ದಂತೆ ರೋಹಿತ್ ಶರ್ಮಾ (Rohit Sharma) ವಿಶೇಷ ದಾಖಲೆ ಬರೆದಿದ್ದಾರೆ. ಅದು ಸಹ 500 ಅಂತಾರಾಷ್ಟ್ರೀಯ ಪಂದ್ಯಗಳನ್ನು ಪೂರೈಸುವ ಮೂಲಕ ಎಂಬುದು ವಿಶೇಷ.

2 / 5

ಅಂದರೆ ಭಾರತದ ಪರ 500 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವುದು ಕೇವಲ 5 ಮಂದಿ ಮಾತ್ರ. ಈ ಐವರಲ್ಲಿ ಇದೀಗ ಐದನೇ ಸ್ಥಾನದಲ್ಲಿ ರೋಹಿತ್ ಶರ್ಮಾ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ 500 ಪಂದ್ಯಗಳನ್ನಾಡಿದ ವಿಶೇಷ ಸಾಧಕರ ಪಟ್ಟಿಗೆ ಹಿಟ್​ಮ್ಯಾನ್ ಸೇರ್ಪಡೆಯಾಗಿದ್ದಾರೆ.

3 / 5

ಇದಕ್ಕೂ ಮುನ್ನ ಭಾರತದ ಪರ ಸಚಿನ್ ತೆಂಡೂಲ್ಕರ್ (664), ವಿರಾಟ್ ಕೊಹ್ಲಿ (551), ಮಹೇಂದ್ರ ಸಿಂಗ್ ಧೋನಿ (535) ಮತ್ತು ರಾಹುಲ್ ದ್ರಾವಿಡ್ (504) ಮಾತ್ರ 500 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದ ಸಾಧನೆ ಮಾಡಿದ್ದರು. ಇದೀಗ ಈ ಸಾಧನೆ ಮಾಡಿದ ಐದನೇ ಭಾರತೀಯನಾಗಿ ರೋಹಿತ್ ಶರ್ಮಾ ಗುರುತಿಸಿಕೊಂಡಿದ್ದಾರೆ.

4 / 5

ಭಾರತದ ಪರ 500 ಪಂದ್ಯಗಳಲ್ಲಿ 532 ಇನಿಂಗ್ಸ್ ಆಡಿರುವ ರೋಹಿತ್ ಶರ್ಮಾ ಈವರೆಗೆ 19701* ರನ್ ಕಲೆಹಾಕಿದ್ದಾರೆ. ಇದರ ನಡುವೆ ಹಿಟ್​ಮ್ಯಾನ್ ಬ್ಯಾಟ್​ನಿಂದ 49 ಶತಕ ಹಾಗೂ 108 ಅರ್ಧಶತಕಗಳು ಮೂಡಿಬಂದಿವೆ. ಹಾಗೆಯೇ 637 ಸಿಕ್ಸರ್​ಗಳನ್ನು ಸಿಡಿಸಿದ್ದಾರೆ.

5 / 5

ಅಂದರೆ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಸರಣಿಯ ಮೂಲಕ ರೋಹಿತ್ ಶರ್ಮಾ 300 ರನ್ ಕಲೆಹಾಕಿದರೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 20 ಸಾವಿರ ರನ್ ಪೂರೈಸಲಿದ್ದಾರೆ. ಹಾಗೆಯೇ ಒಂದು ಶತಕ ಸಿಡಿಸಿದರೆ ಇಂಟರ್​ನ್ಯಾಷನಲ್ ಕ್ರಿಕೆಟ್​ನಲ್ಲಿ 50 ಶತಕ ಸಿಡಿಸಿದ ಸಾಧಕರ ಪಟ್ಟಿಯಲ್ಲೂ ಸ್ಥಾನ ಪಡೆಯಲಿದ್ದಾರೆ. ಹೀಗಾಗಿ ಆಸೀಸ್ ಪಿಚ್​ನಲ್ಲಿ ಹಿಟ್​ಮ್ಯಾನ್ ಕಡೆಯಿಂದ ಭರ್ಜರಿ ದಾಖಲೆಗಳನ್ನು ನಿರೀಕ್ಷಿಸಬಹುದು.

Published On - 9:23 am, Sun, 19 October 25

Loading...
Unable to load recommendations.
Follow Us