ಢಾಕಾದಲ್ಲಿ ಬುಧವಾರ ನಡೆದ ಬಾಂಗ್ಲಾದೇಶ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಸಿಡಿಲಬ್ಬದ ಬ್ಯಾಟಿಂಗ್ ನಡೆಸಿದ್ದರು.
ಈ ಪಂದ್ಯದಲ್ಲಿ ಹಿಟ್ಮ್ಯಾನ್ ಕೇವಲ 28 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 3 ಫೋರ್ನೊಂದಿಗೆ ಅಜೇಯ 51 ರನ್ ಬಾರಿಸಿದ್ದರು. ಈ 5 ಸಿಕ್ಸ್ನೊಂದಿಗೆ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 500 ಸಿಕ್ಸ್ ಸಿಡಿಸಿದ ಮೊದಲ ಭಾರತೀಯ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 2ನೇ ಆಟಗಾರ ಎಂಬ ದಾಖಲೆ ಬರೆದಿದ್ದಾರೆ.
ರೋಹಿತ್ ಶರ್ಮಾ ಈ ದಾಖಲೆ ಬರೆದಿರುವುದು ಯುನಿವರ್ಸ್ ಬಾಸ್ ಕ್ರಿಸ್ ಗೇಲ್ ಅವರ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಅಂದರೆ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ವಿಶ್ವ ದಾಖಲೆ ಗೇಲ್ ಹೆಸರಿನಲ್ಲಿದೆ.
ಕ್ರಿಸ್ ಗೇಲ್ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 500 ಸಿಕ್ಸ್ ಬಾರಿಸಲು ಬರೋಬ್ಬರಿ 447 ಇನಿಂಗ್ಸ್ ಆಡಿದ್ದರು. ಆದರೆ ಇದೀಗ ಅದಕ್ಕಿಂತ 19 ಇನಿಂಗ್ಸ್ ಕಡಿಮೆಯಲ್ಲಿ ರೋಹಿತ್ ಶರ್ಮಾ ದಾಖಲೆ ಬರೆದಿರುವುದು ವಿಶೇಷ.

Published On - 9:24 pm, Thu, 8 December 22