- Kannada News Photo gallery Cricket photos Rohit Sharma becomes first Indian cricketer to hit 150 sixes in T20I
Rohit Sharma: ರೋಹಿತ್ ಶರ್ಮಾ ಈಗ ಸಿಕ್ಸರ್ ಸರದಾರ
Rohit Sharma Record: ಮುಂದಿನ ಸರಣಿಯಲ್ಲಿ ರೋಹಿತ್ ಶರ್ಮಾ 15 ಸಿಕ್ಸ್ ಬಾರಿಸಿದರೆ ಟಿ20 ಕ್ರಿಕೆಟ್ನಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ.
Updated on: Nov 22, 2021 | 4:46 PM

ನ್ಯೂಜಿಲೆಂಡ್ ವಿರುದ್ದ ಕೊನೆಯ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಪ್ರದರ್ಶನ ನೀಡಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ನಾಯಕ ರೋಹಿತ್ ಶರ್ಮಾ ತಂಡಕ್ಕೆ ಭರ್ಜರಿ ಆರಂಭ ಒದಗಿಸಿದ್ದರು. ಯುವ ಬ್ಯಾಟ್ಸ್ಮನ್ ಇಶಾನ್ ಕಿಶನ್ ಜೊತೆಗೂಡಿ ಇನಿಂಗ್ಸ್ ಆರಂಭಿಸಿದ ಹಿಟ್ಮ್ಯಾನ್ ಬಿರುಸಿನ ಅರ್ಧಶತಕ ಬಾರಿಸಿ ಗಮನ ಸೆಳೆದರು.

ಅಂತಿಮವಾಗಿ 31 ಎಸೆತಗಳನ್ನು ಎದುರಿಸಿದ ರೋಹಿತ್ ಶರ್ಮಾ 56 ರನ್ ಬಾರಿಸಿ ಔಟಾದರು. ಆದರೆ ಇದಕ್ಕೂ ಮುನ್ನ ಹಿಟ್ಮ್ಯಾನ್ 5 ಬೌಂಡರಿ ಹಾಗೂ 3 ಭರ್ಜರಿ ಸಿಕ್ಸ್ ಸಿಡಿಸಿದ್ದರು. ಈ ಮೂರು ಸಿಕ್ಸ್ನೊಂದಿಗೆ ಟಿ20 ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾ ಪರ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಬ್ಯಾಟ್ಸ್ಮನ್ ಎಂಬ ದಾಖಲೆಯನ್ನು ರೋಹಿತ್ ಶರ್ಮಾ ನಿರ್ಮಿಸಿದ್ದಾರೆ.

ನ್ಯೂಜಿಲೆಂಡ್ ವಿರುದ್ದದ 3 ಸಿಕ್ಸ್ನೊಂದಿಗೆ ಹಿಟ್ಮ್ಯಾನ್ ಟಿ20 ಕ್ರಿಕೆಟ್ನಲ್ಲಿ 150 ಸಿಕ್ಸ್ ಪೂರೈಸಿದ್ದಾರೆ. ಇದರೊಂದಿಗೆ 150 ಸಿಕ್ಸ್ ಬಾರಿಸಿದ ವಿಶ್ವದ ಎರಡನೇ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟ್ಸ್ಮನ್ ಎಂಬ ದಾಖಲೆ ನಿರ್ಮಿಸಿದ್ದಾರೆ.

ಸದ್ಯ 165 ಸಿಕ್ಸ್ ಬಾರಿಸಿರುವ ಮಾರ್ಟಿನ್ ಗಪ್ಟಿಲ್ ಅಗ್ರಸ್ಥಾನದಲ್ಲಿದ್ದು, ಈ ವಿಶ್ವ ದಾಖಲೆಯನ್ನು ಮುರಿಯಲು ಹಿಟ್ಮ್ಯಾನ್ಗೆ ಇನ್ನು ಕೇವಲ 12 ಸಿಕ್ಸ್ಗಳ ಅವಶ್ಯಕತೆಯಿದೆ.

ಹೀಗಾಗಿ ಮುಂದಿನ ಸರಣಿಯಲ್ಲಿ ರೋಹಿತ್ ಶರ್ಮಾ 15 ಸಿಕ್ಸ್ ಬಾರಿಸಿದರೆ ಟಿ20 ಕ್ರಿಕೆಟ್ನಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ.









