Rohit Sharma: ಬಾಬರ್ ದಾಖಲೆ ಮುರಿದು ಹೊಸ ಇತಿಹಾಸ ನಿರ್ಮಿಸಿದ ರೋಹಿತ್ ಶರ್ಮಾ

| Updated By: ಝಾಹಿರ್ ಯೂಸುಫ್

Updated on: Feb 17, 2022 | 3:05 PM

Rohit Sharma: ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾ ಆರೋನ್ ಫಿಂಚ್ ಅಗ್ರಸ್ಥಾನದಲ್ಲಿದ್ದು, ಫಿಂಚ್ ಇಂಗ್ಲೆಂಡ್ ವಿರುದ್ಧ 34 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ.

1 / 6
ಭಾರತ-ವೆಸ್ಟ್ ಇಂಡೀಸ್ ನಡುವಣ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊಸ ದಾಖಲೆ ನಿರ್ಮಿಸಿದ್ದಾರೆ. ಕೋಲ್ಕತ್ತಾದ ಈಡನ್ ಗಾರ್ಡನ್‌ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಹಿಟ್​ಮ್ಯಾನ್ ಬಿರುಸಿನ ಇನ್ನಿಂಗ್ಸ್ ಆಡಿದ್ದರು.

2 / 6
ಕೇವಲ 19 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್​ ಸಿಡಿಸಿದ ರೋಹಿತ್ ಶರ್ಮಾ 40 ರನ್ ಗಳಿಸಿ ಔಟ್ ಆಗಿದ್ದರು. ಈ ಸ್ಪೋಟಕ 40 ರನ್​ಗಳೊಂದಿಗೆ ಟಿ20 ಕ್ರಿಕೆಟ್​ನಲ್ಲಿ ವೆಸ್ಟ್ ಇಂಡೀಸ್ ವಿರುದ್ದ ಅತೀ ಹೆಚ್ಚು ರನ್​ ಬಾರಿಸಿದ ಆಟಗಾರ ಎಂಬ ದಾಖಲೆಯನ್ನು ರೋಹಿತ್ ಶರ್ಮಾ ತಮ್ಮದಾಗಿಸಿಕೊಂಡರು.

3 / 6
ಇದಕ್ಕೂ ಮುನ್ನ ಈ ದಾಖಲೆ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಜಂ ಹೆಸರಿನಲ್ಲಿತ್ತು. ಬಾಬರ್​ ವೆಸ್ಟ್ ಇಂಡೀಸ್ ವಿರುದ್ದ 540 ರನ್ ಬಾರಿಸಿದ್ದಾರೆ. ಇದೀಗ ಬಾಬರ್ ದಾಖಲೆಯನ್ನು ಹಿಂದಿಕ್ಕಿರುವ ರೋಹಿತ್ ಶರ್ಮಾ  559 ರನ್ ಗಳಿಸಿ ಅಗ್ರಸ್ಥಾನಕ್ಕೇರಿದ್ದಾರೆ.

4 / 6
 ಅಷ್ಟೇ ಅಲ್ಲದೆ ಈ ಪಂದ್ಯದಲ್ಲಿ 3 ಸಿಕ್ಸ್ ಸಿಡಿಸುವ ಮೂಲಕ ರೋಹಿತ್ ಶರ್ಮಾ ವೆಸ್ಟ್ ಇಂಡೀಸ್ ವಿರುದ್ದ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಇನ್ನು ಎದುರಾಳಿ ತಂಡದ ವಿರುದ್ದ ಅತೀ ಹೆಚ್ಚು ಸಿಕ್ಸ್​ ಸಿಡಿಸಿದ ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ 2ನೇ ಸ್ಥಾನ ಅಲಂಕರಿಸಿದ್ದಾರೆ. ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾ ಆರೋನ್ ಫಿಂಚ್ ಅಗ್ರಸ್ಥಾನದಲ್ಲಿದ್ದು, ಫಿಂಚ್ ಇಂಗ್ಲೆಂಡ್ ವಿರುದ್ಧ 34 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ.

5 / 6
ಇದೀಗ ವೆಸ್ಟ್ ಇಂಡೀಸ್ ವಿರುದ್ದ 32 ಸಿಕ್ಸ್ ಸಿಡಿಸಿರುವ ರೋಹಿತ್ ಶರ್ಮಾ ವೆಸ್ಟ್ ಇಂಡೀಸ್ ವಿರುದ್ದ ಮುಂಬರುವ 2 ಟಿ20 ಪಂದ್ಯಗಳಲ್ಲಿ 3 ಸಿಕ್ಸ್ ಬಾರಿಸಿದರೆ ಅಂತಾರಾಷ್ಟ್ರೀಯ ಟಿ20 ತಂಡದ ವಿರುದ್ದ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ವಿಶ್ವ ದಾಖಲೆ ಹಿಟ್​ಮ್ಯಾನ್ ಪಾಲಾಗಲಿದೆ.

6 / 6
Rohit Sharma

Rohit Sharma