AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿತ್ ಶರ್ಮಾ ಸೆಂಚುರಿಗೆ ಸಚಿನ್ ಸಾರ್ವಕಾಲಿಕ ದಾಖಲೆ ಉಡೀಸ್

Rohit Sharma Records: ಇಂಗ್ಲೆಂಡ್ ವಿರುದ್ಧದ ಮೊದಲೆರಡು ಏಕದಿನ ಪಂದ್ಯಗಳಲ್ಲಿ ವಿಫಲರಾಗಿದ್ದ ರೋಹಿತ್ ಶರ್ಮಾ ಕೊನೆಗೂ ಅಬ್ಬರಿಸಿದ್ದಾರೆ. ಅದು ಸಹ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ. ಈ ಸೆಂಚುರಿಯೊಂದಿಗೆ ಹಿಟ್​​ಮ್ಯಾನ್, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.

ಝಾಹಿರ್ ಯೂಸುಫ್
|

Updated on:Jul 20, 2026 | 8:44 AM

Share
ಲಾರ್ಡ್ಸ್ ಮೈದಾನದಲ್ಲಿ ಹಿಟ್​​ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಸಿಡಿಸಿದ ಸೆಂಚುರಿಗೆ ಸಚಿನ್ ತೆಂಡೂಲ್ಕರ್ ಅವರ ಸಾರ್ವಕಾಲಿಕ ದಾಖಲೆ ಧೂಳೀಪಟವಾಗಿದೆ. ಈ ಶತಕದೊಂದಿಗೆ ಹಿಟ್​​​ಮ್ಯಾನ್ ಟೀಮ್ ಇಂಡಿಯಾ ಪರ ಆರಂಭಿಕನಾಗಿ ಅತ್ಯಧಿಕ ಶತಕ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. (PC: BCCI)

1 / 5
ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ರೋಹಿತ್ ಶರ್ಮಾ 84 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ಟೀಮ್ ಇಂಡಿಯಾದ ಆರಂಭಿಕ ದಾಂಡಿಗ ಎಂಬ ಹಿರಿಮೆಯನ್ನು ತಮ್ಮದಾಗಿಸಿಕೊಂಡರು. (PC: BCCI)

2 / 5
ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲುತ್ತು. ಟೀಮ್ ಇಂಡಿಯಾ 356 ಪಂದ್ಯಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಸಚಿನ್ ತೆಂಡೂಲ್ಕರ್ ಒಟ್ಟು 45 ಸೆಂಚುರಿ ಸಿಡಿಸಿ ಈ ದಾಖಲೆ ನಿರ್ಮಿಸಿದ್ದರು. (PC: BCCI)

3 / 5
ಇದೀಗ ಈ ದಾಖಲೆಯನ್ನು ರೋಹಿತ್ ಶರ್ಮಾ ಅಳಿಸಿ ಹಾಕಿದ್ದಾರೆ. ಭಾರತದ ಪರ ಟೆಸ್ಟ್, ಏಕದಿನ ಹಾಗೂ ಟಿ20 ಕ್ರಿಕೆಟ್​​​ನಲ್ಲಿ ಆರಂಭಿಕನಾಗಿ ಬ್ಯಾಟ್ ಬೀಸಿರುವ ಹಿಟ್​ಮ್ಯಾನ್ ಈವರೆಗೆ ಒಟ್ಟು 46 ಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಅತ್ಯಧಿಕ ಸೆಂಚುರಿ ಸಿಡಿಸಿದ ಓಪನರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: BCCI)

4 / 5
ಈ ದಾಖಲೆಯೊಂದಿಗೆ ರೋಹಿತ್ ಶರ್ಮಾ ಭಾರತದ ಪರ ಕ್ರಿಕೆಟ್ ಕಾಶಿ ಲಾರ್ಡ್ಸ್​ ಮೈದಾನದಲ್ಲಿ ಏಕದಿನ ಶತಕ ಸಿಡಿಸಿದ ಮೊದಲ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಅಂದರೆ ಈ ಮೈದಾನದಲ್ಲಿ ಭಾರತೀಯರು ಟೆಸ್ಟ್ ಸೆಂಚುರಿ ಸಿಡಿಸಿದರೂ, ಏಕದಿನ ಕ್ರಿಕೆಟ್​ನಲ್ಲಿ ಯಾವುದೇ ಬ್ಯಾಟರ್ ಮೂರಂಕಿ ಮೊತ್ತ ಗಳಿಸಿರಲಿಲ್ಲ. ಇದೀಗ ರೋಹಿತ್ ಶರ್ಮಾ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ಈ ಬರ ನೀಗಿಸಿದ್ದಾರೆ. (PC: BCCI)

5 / 5

Published On - 8:43 am, Mon, 20 July 26

ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!

ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು

ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?

‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ

ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ

ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ

ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ

ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ

ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ

ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ