
ಲಾರ್ಡ್ಸ್ ಮೈದಾನದಲ್ಲಿ ಹಿಟ್ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಸಿಡಿಸಿದ ಸೆಂಚುರಿಗೆ ಸಚಿನ್ ತೆಂಡೂಲ್ಕರ್ ಅವರ ಸಾರ್ವಕಾಲಿಕ ದಾಖಲೆ ಧೂಳೀಪಟವಾಗಿದೆ. ಈ ಶತಕದೊಂದಿಗೆ ಹಿಟ್ಮ್ಯಾನ್ ಟೀಮ್ ಇಂಡಿಯಾ ಪರ ಆರಂಭಿಕನಾಗಿ ಅತ್ಯಧಿಕ ಶತಕ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. (PC: BCCI)

ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ರೋಹಿತ್ ಶರ್ಮಾ 84 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ಟೀಮ್ ಇಂಡಿಯಾದ ಆರಂಭಿಕ ದಾಂಡಿಗ ಎಂಬ ಹಿರಿಮೆಯನ್ನು ತಮ್ಮದಾಗಿಸಿಕೊಂಡರು. (PC: BCCI)

ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲುತ್ತು. ಟೀಮ್ ಇಂಡಿಯಾ 356 ಪಂದ್ಯಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಸಚಿನ್ ತೆಂಡೂಲ್ಕರ್ ಒಟ್ಟು 45 ಸೆಂಚುರಿ ಸಿಡಿಸಿ ಈ ದಾಖಲೆ ನಿರ್ಮಿಸಿದ್ದರು. (PC: BCCI)

ಇದೀಗ ಈ ದಾಖಲೆಯನ್ನು ರೋಹಿತ್ ಶರ್ಮಾ ಅಳಿಸಿ ಹಾಕಿದ್ದಾರೆ. ಭಾರತದ ಪರ ಟೆಸ್ಟ್, ಏಕದಿನ ಹಾಗೂ ಟಿ20 ಕ್ರಿಕೆಟ್ನಲ್ಲಿ ಆರಂಭಿಕನಾಗಿ ಬ್ಯಾಟ್ ಬೀಸಿರುವ ಹಿಟ್ಮ್ಯಾನ್ ಈವರೆಗೆ ಒಟ್ಟು 46 ಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಅತ್ಯಧಿಕ ಸೆಂಚುರಿ ಸಿಡಿಸಿದ ಓಪನರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: BCCI)

ಈ ದಾಖಲೆಯೊಂದಿಗೆ ರೋಹಿತ್ ಶರ್ಮಾ ಭಾರತದ ಪರ ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ ಏಕದಿನ ಶತಕ ಸಿಡಿಸಿದ ಮೊದಲ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಅಂದರೆ ಈ ಮೈದಾನದಲ್ಲಿ ಭಾರತೀಯರು ಟೆಸ್ಟ್ ಸೆಂಚುರಿ ಸಿಡಿಸಿದರೂ, ಏಕದಿನ ಕ್ರಿಕೆಟ್ನಲ್ಲಿ ಯಾವುದೇ ಬ್ಯಾಟರ್ ಮೂರಂಕಿ ಮೊತ್ತ ಗಳಿಸಿರಲಿಲ್ಲ. ಇದೀಗ ರೋಹಿತ್ ಶರ್ಮಾ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ಈ ಬರ ನೀಗಿಸಿದ್ದಾರೆ. (PC: BCCI)
Published On - 8:43 am, Mon, 20 July 26