ರೋಹಿತ್ ಶರ್ಮಾ ಅಬ್ಬರಕ್ಕೆ ಸಚಿನ್ ತೆಂಡೂಲ್ಕರ್ ದಾಖಲೆ ಧೂಳೀಪಟ

Rohit Sharma Records: ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ರೋಹಿತ್ ಶರ್ಮಾ 49 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 56 ರನ್​ ಚಚ್ಚಿದರು. ಈ ಮೂಲಕ ಏಷ್ಯಾಕಪ್​ನಲ್ಲಿ ತಂಡವೊಂದರ ವಿರುದ್ಧ ಅತ್ಯಧಿಕ 50+ ಸಿಡಿಸಿದ ದಾಖಲೆಯನ್ನು ಹಿಟ್​ಮ್ಯಾನ್ ತಮ್ಮದಾಗಿಸಿಕೊಂಡರು.

TV9 Web
| Updated By: ಝಾಹಿರ್ ಯೂಸುಫ್

Updated on: Sep 10, 2023 | 6:21 PM

ಏಷ್ಯಾಕಪ್​ನ ಸೂಪರ್-4 ಹಂತದ 3ನೇ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ಧ ಅಬ್ಬರಿಸುವ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ.

1 / 7
ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ರೋಹಿತ್ ಶರ್ಮಾ 49 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 56 ರನ್​ ಚಚ್ಚಿದರು. ಈ ಮೂಲಕ ಏಷ್ಯಾಕಪ್​ನಲ್ಲಿ ತಂಡವೊಂದರ ವಿರುದ್ಧ ಅತ್ಯಧಿಕ 50+ ಸಿಡಿಸಿದ ದಾಖಲೆಯನ್ನು ಹಿಟ್​ಮ್ಯಾನ್ ತಮ್ಮದಾಗಿಸಿಕೊಂಡರು.

2 / 7
ಇದಕ್ಕೂ ಮುನ್ನ ಈ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. ಸಚಿನ್ ಏಷ್ಯಾಕಪ್​ನಲ್ಲಿ ಶ್ರೀಲಂಕಾ ವಿರುದ್ಧ ಒಟ್ಟು 5 ಬಾರಿ 50+ ರನ್​ ಕಲೆಹಾಕಿದ್ದರು.

3 / 7
ಇದೀಗ ಪಾಕಿಸ್ತಾನ್ ವಿರುದ್ಧ 6ನೇ ಬಾರಿ 50+ ರನ್ ಬಾರಿಸುವ ಮೂಲಕ ಏಷ್ಯಾಕಪ್​ನಲ್ಲಿ ತಂಡವೊಂದರ ವಿರುದ್ಧ ಅತ್ಯಧಿಕ ಬಾರಿ ಅರ್ಧಶತಕಕ್ಕಿಂತ ಅಧಿಕ ರನ್ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆಯನ್ನು ರೋಹಿತ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ.

4 / 7
ಅಷ್ಟೇ ಅಲ್ಲದೆ ಏಷ್ಯಾಕಪ್​ನಲ್ಲಿ ಅತೀ ಹೆಚ್ಚು ಬಾರಿ 50+ ರನ್​ ಕಲೆಹಾಕಿದ ಭಾರತೀಯ ಬ್ಯಾಟರ್ ಎಂಬ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಕೂಡ ರೋಹಿತ್ ಶರ್ಮಾ ಸರಿಗಟ್ಟಿದ್ದಾರೆ. ಸಚಿನ್ ತೆಂಡೂಲ್ಕರ್ ಏಷ್ಯಾಕಪ್​ನಲ್ಲಿ ಒಟ್ಟು 9 ಬಾರಿ ಈ ಸಾಧನೆ ಮಾಡಿದ್ದರು.

5 / 7
ಇದೀಗ ಪಾಕ್ ವಿರುದ್ಧ ಅರ್ಧಶತಕ ಬಾರಿಸುವ ಮೂಲಕ ರೋಹಿತ್ ಶರ್ಮಾ ಕೂಡ ಏಷ್ಯಾಕಪ್​ನಲ್ಲಿ 9 ಬಾರಿ 50+ ಸ್ಕೋರ್​ಗಳಿಸಿದ ದಾಖಲೆ ಮಾಡಿದ್ದಾರೆ. ಈ ಮೂಲಕ ಸಚಿನ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಸರಿಗಟ್ಟಿದ್ದಾರೆ.

6 / 7
ಇನ್ನು ಏಷ್ಯಾಕಪ್​ನಲ್ಲಿ ಅತ್ಯಧಿಕ ಬಾರಿ 50+ ಸ್ಕೋರ್​ಗಳಿಸಿದ ದಾಖಲೆ ಶ್ರೀಲಂಕಾ ಮಾಜಿ ಆಟಗಾರ ಕುಮಾರ ಸಂಗಾಕ್ಕರ ಹೆಸರಿನಲ್ಲಿದೆ. ಸಂಗಾಕ್ಕರ ಒಟ್ಟು 12 ಬಾರಿ 50+ ಸ್ಕೋರ್​ಗಳಿಸಿದ್ದರು.

7 / 7
Follow us
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ

ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ

ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ

ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ