ರೋಹಿತ್ ಶರ್ಮಾ ಅಬ್ಬರಕ್ಕೆ ಸಚಿನ್ ತೆಂಡೂಲ್ಕರ್ ದಾಖಲೆ ಧೂಳೀಪಟ
TV9 Web | Updated By: ಝಾಹಿರ್ ಯೂಸುಫ್
Updated on:
Sep 10, 2023 | 6:21 PM
Rohit Sharma Records: ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ರೋಹಿತ್ ಶರ್ಮಾ 49 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ 56 ರನ್ ಚಚ್ಚಿದರು. ಈ ಮೂಲಕ ಏಷ್ಯಾಕಪ್ನಲ್ಲಿ ತಂಡವೊಂದರ ವಿರುದ್ಧ ಅತ್ಯಧಿಕ 50+ ಸಿಡಿಸಿದ ದಾಖಲೆಯನ್ನು ಹಿಟ್ಮ್ಯಾನ್ ತಮ್ಮದಾಗಿಸಿಕೊಂಡರು.
1 / 7
ಏಷ್ಯಾಕಪ್ನ ಸೂಪರ್-4 ಹಂತದ 3ನೇ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ಧ ಅಬ್ಬರಿಸುವ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ.
2 / 7
ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ರೋಹಿತ್ ಶರ್ಮಾ 49 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ 56 ರನ್ ಚಚ್ಚಿದರು. ಈ ಮೂಲಕ ಏಷ್ಯಾಕಪ್ನಲ್ಲಿ ತಂಡವೊಂದರ ವಿರುದ್ಧ ಅತ್ಯಧಿಕ 50+ ಸಿಡಿಸಿದ ದಾಖಲೆಯನ್ನು ಹಿಟ್ಮ್ಯಾನ್ ತಮ್ಮದಾಗಿಸಿಕೊಂಡರು.
3 / 7
ಇದಕ್ಕೂ ಮುನ್ನ ಈ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. ಸಚಿನ್ ಏಷ್ಯಾಕಪ್ನಲ್ಲಿ ಶ್ರೀಲಂಕಾ ವಿರುದ್ಧ ಒಟ್ಟು 5 ಬಾರಿ 50+ ರನ್ ಕಲೆಹಾಕಿದ್ದರು.
4 / 7
ಇದೀಗ ಪಾಕಿಸ್ತಾನ್ ವಿರುದ್ಧ 6ನೇ ಬಾರಿ 50+ ರನ್ ಬಾರಿಸುವ ಮೂಲಕ ಏಷ್ಯಾಕಪ್ನಲ್ಲಿ ತಂಡವೊಂದರ ವಿರುದ್ಧ ಅತ್ಯಧಿಕ ಬಾರಿ ಅರ್ಧಶತಕಕ್ಕಿಂತ ಅಧಿಕ ರನ್ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆಯನ್ನು ರೋಹಿತ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ.
5 / 7
ಅಷ್ಟೇ ಅಲ್ಲದೆ ಏಷ್ಯಾಕಪ್ನಲ್ಲಿ ಅತೀ ಹೆಚ್ಚು ಬಾರಿ 50+ ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಎಂಬ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಕೂಡ ರೋಹಿತ್ ಶರ್ಮಾ ಸರಿಗಟ್ಟಿದ್ದಾರೆ. ಸಚಿನ್ ತೆಂಡೂಲ್ಕರ್ ಏಷ್ಯಾಕಪ್ನಲ್ಲಿ ಒಟ್ಟು 9 ಬಾರಿ ಈ ಸಾಧನೆ ಮಾಡಿದ್ದರು.
6 / 7
ಇದೀಗ ಪಾಕ್ ವಿರುದ್ಧ ಅರ್ಧಶತಕ ಬಾರಿಸುವ ಮೂಲಕ ರೋಹಿತ್ ಶರ್ಮಾ ಕೂಡ ಏಷ್ಯಾಕಪ್ನಲ್ಲಿ 9 ಬಾರಿ 50+ ಸ್ಕೋರ್ಗಳಿಸಿದ ದಾಖಲೆ ಮಾಡಿದ್ದಾರೆ. ಈ ಮೂಲಕ ಸಚಿನ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಸರಿಗಟ್ಟಿದ್ದಾರೆ.
7 / 7
ಇನ್ನು ಏಷ್ಯಾಕಪ್ನಲ್ಲಿ ಅತ್ಯಧಿಕ ಬಾರಿ 50+ ಸ್ಕೋರ್ಗಳಿಸಿದ ದಾಖಲೆ ಶ್ರೀಲಂಕಾ ಮಾಜಿ ಆಟಗಾರ ಕುಮಾರ ಸಂಗಾಕ್ಕರ ಹೆಸರಿನಲ್ಲಿದೆ. ಸಂಗಾಕ್ಕರ ಒಟ್ಟು 12 ಬಾರಿ 50+ ಸ್ಕೋರ್ಗಳಿಸಿದ್ದರು.