- Kannada News Photo gallery Cricket photos Rohit Sharma breaks Shahid Afridi’s long standing world record
Rohit Sharma: ಶಾಹಿದ್ ಅಫ್ರಿದಿ ವಿಶ್ವ ದಾಖಲೆ ಮುರಿದ ಹಿಟ್ಮ್ಯಾನ್ ರೋಹಿತ್ ಶರ್ಮಾ
Rohit Sharma's Record: ಟಿ20 ಕ್ರಿಕೆಟ್ನಲ್ಲಿ ಭಾರತದ ಪರ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ದಾಖಲೆ ಕೂಡ ರೋಹಿತ್ ಶರ್ಮಾ ಹೆಸರಿನಲ್ಲಿದೆ. ಅಷ್ಟೇ ಅಲ್ಲದೆ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ರೋಹಿತ್ ಶರ್ಮಾ 3ನೇ ಸ್ಥಾನದಲ್ಲಿದ್ದಾರೆ.
Updated on: Nov 20, 2021 | 3:02 PM

ರಾಂಚಿಯಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ದದ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಮ್ ಇಂಡಿಯಾ ಸರಣಿ ವಶಪಡಿಸಿಕೊಂಡಿದೆ. ಈ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ರೋಹಿತ್ ಶರ್ಮಾ 36 ಎಸೆತಗಳಲ್ಲಿ 55 ರನ್ ಬಾರಿಸಿದ್ದರು.

ಈ ಸ್ಪೋಟಕ ಇನಿಂಗ್ಸ್ನಲ್ಲಿ ಹಿಟ್ಮ್ಯಾನ್ ಬ್ಯಾಟ್ನಿಂದ ಮೂಡಿಬಂದಿದ್ದು 1 ಫೋರ್ ಹಾಗೂ 5 ಭರ್ಜರಿ ಸಿಕ್ಸರ್ಗಳು. ಈ ಸಿಕ್ಸ್ನೊಂದಿಗೆ ರೋಹಿತ್ ಶರ್ಮಾ ಪಾಕಿಸ್ತಾನದ ಮಾಜಿ ಆಟಗಾರ ಶಾಹಿದ್ ಅಫ್ರಿದಿ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಮುರಿದಿರುವುದು ವಿಶೇಷ.

ಹೌದು, 5 ಸಿಕ್ಸರ್ನೊಂದಿಗೆ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 450 ಸಿಕ್ಸ್ಗಳನ್ನು ಬಾರಿಸಿದ್ದಾರೆ. ಇಷ್ಟೊಂದು ಸಿಕ್ಸ್ಗಳನ್ನು ಬಾರಿಸಲು ರೋಹಿತ್ ಶರ್ಮಾ ತೆಗೆದುಕೊಂಡಿದ್ದು ಕೇವಲ 404 ಇನಿಂಗ್ಸ್ ಮಾತ್ರ. ಅಂದರೆ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತೀ ವೇಗವಾಗಿ 450 ಸಿಕ್ಸ್ ಬಾರಿಸಿದ ವಿಶ್ವ ದಾಖಲೆ ಇದೀಗ ರೋಹಿತ್ ಶರ್ಮಾ ಪಾಲಾಗಿದೆ.

ಇದಕ್ಕೂ ಮುನ್ನ ಈ ದಾಖಲೆ ಪಾಕಿಸ್ತಾನದ ಮಾಜಿ ಬ್ಯಾಟರ್ ಶಾಹಿದ್ ಅಫ್ರಿದಿ ಹೆಸರಿನಲ್ಲಿತ್ತು. ಅಫ್ರಿದಿ 487 ಇನಿಂಗ್ಸ್ಗಳಲ್ಲಿ 450 ಸಿಕ್ಸ್ ಬಾರಿಸಿ ವಿಶ್ವ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆಯನ್ನು ರೋಹಿತ್ ಶರ್ಮಾ ಮುರಿದು ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಇನ್ನು ಟಿ20 ಕ್ರಿಕೆಟ್ನಲ್ಲಿ ಭಾರತದ ಪರ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ದಾಖಲೆ ಕೂಡ ರೋಹಿತ್ ಶರ್ಮಾ ಹೆಸರಿನಲ್ಲಿದೆ. ಅಷ್ಟೇ ಅಲ್ಲದೆ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ರೋಹಿತ್ ಶರ್ಮಾ 3ನೇ ಸ್ಥಾನದಲ್ಲಿದ್ದಾರೆ.

ಅಗ್ರಸ್ಥಾನದಲ್ಲಿ ಕ್ರಿಸ್ ಗೇಲ್ (553) ಇದ್ದು, ನಂತರದ ಸ್ಥಾನದಲ್ಲಿ ಶಾಹಿದ್ ಅಫ್ರಿದಿ (476) ಇದ್ದಾರೆ. ಇದೀಗ 454 ಸಿಕ್ಸ್ನೊಂದಿಗೆ ಹಿಟ್ಮ್ಯಾನ್ 3ನೇ ಸ್ಥಾನ ಅಲಂಕರಿಸಿದ್ದಾರೆ.
