Rohit Sharma-Virat Kohli: ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಲು ರೋಹಿತ್ ಶರ್ಮಾಗೆ ಉತ್ತಮ ಅವಕಾಶ

India vs Afghanistan: ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಮೂರು ಪಂದ್ಯಗಳ ಟಿ20 ಸರಣಿಯು ಇಂದಿನಿಂದ ಪ್ರಾರಂಭವಾಗಲಿದೆ. ಮೊದಲ ಪಂದ್ಯಕ್ಕೆ ಮೊಹಾಲಿ ಆತಿಥ್ಯವಹಿಸಿದರೆ, ಎರಡನೇ ಪಂದ್ಯವು ಇಂದೋರ್​ನಲ್ಲಿ ನಡೆಯಲಿದೆ. ಹಾಗೆಯೇ ಮೂರನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಜರುಗಲಿದೆ.

| Updated By: ಝಾಹಿರ್ ಯೂಸುಫ್

Updated on: Jan 11, 2024 | 7:07 AM

ಅಫ್ಘಾನಿಸ್ತಾನ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲೇ ವಿಶೇಷ ದಾಖಲೆ ಬರೆಯುವ ಅವಕಾಶ ಟೀಮ್ ಇಂಡಿಯಾ (Team India) ನಾಯಕ ರೋಹಿತ್ ಶರ್ಮಾ (Rohit Sharma) ಮುಂದಿದೆ. ಅದು ಕೂಡ ವಿರಾಟ್ ಕೊಹ್ಲಿಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 5
ಅಂದರೆ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ರನ್ ಕಲೆಹಾಕಿದ ನಾಯಕ ಎಂಬ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಇದೀಗ ಈ ದಾಖಲೆಯನ್ನು ಮುರಿಯಲು ರೋಹಿತ್ ಶರ್ಮಾ ಕೇವಲ 44 ರನ್​ಗಳ ಅವಶ್ಯಕತೆಯಿದೆ.

2 / 5
ಟಿ20 ಕ್ರಿಕೆಟ್​ನಲ್ಲಿ ಭಾರತ ತಂಡವನ್ನು 50 ಪಂದ್ಯಗಳಲ್ಲಿ ಮುನ್ನಡೆಸಿದ್ದ ವಿರಾಟ್ ಕೊಹ್ಲಿ ನಾಯಕನಾಗಿ 46 ಇನಿಂಗ್ಸ್ ಆಡಿದ್ದರು. ಈ ವೇಳೆ 13 ಅರ್ಧಶತಕಗಳೊಂದಿಗೆ ಒಟ್ಟು 1570 ರನ್ ಕಲೆಹಾಕಿದ್ದಾರೆ. ಈ ಮೂಲಕ ಭಾರತದ ಪರ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಕ್ಯಾಪ್ಟನ್ ಎಂಬ ದಾಖಲೆ ಬರೆದಿದ್ದಾರೆ.

3 / 5
ರೋಹಿತ್ ಶರ್ಮಾ ಟಿ20 ತಂಡದ ನಾಯಕನಾಗಿ ಟೀಮ್ ಇಂಡಿಯಾ ಪರ 51 ಇನಿಂಗ್ಸ್ ಆಡಿದ್ದು, ಈ ವೇಳೆ ಹಿಟ್​ಮ್ಯಾನ್ 2 ಶತಕ ಹಾಗೂ 10 ಅರ್ಧಶತಕಗಳೊಂದಿಗೆ ಒಟ್ಟು 1527 ರನ್ ಗಳಿಸಿದ್ದಾರೆ. ಇದೀಗ ವಿರಾಟ್ ಕೊಹ್ಲಿಯನ್ನು (1570) ಹಿಂದಿಕ್ಕಲು ರೋಹಿತ್ ಶರ್ಮಾ ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದಲ್ಲಿ 44 ರನ್ ಬಾರಿಸಿದರೆ ಸಾಕು.

4 / 5
ಹೀಗಾಗಿ ಅಫ್ಘಾನಿಸ್ತಾನ್ ವಿರುದ್ಧದ ಟಿ20 ಪಂದ್ಯದ ಮೂಲಕ ಟೀಮ್ ಇಂಡಿಯಾ ಪರ ಚುಟುಕು ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆಯನ್ನು ರೋಹಿತ್ ಶರ್ಮಾ ತಮ್ಮದಾಗಿಸಿಕೊಳ್ಳಲಿದ್ದಾರಾ ಕಾದು ನೋಡಬೇಕಿದೆ.

5 / 5
Follow us