ಸಚಿನ್ ವಿಶ್ವ ದಾಖಲೆ ಮುರಿದ ರೋಹಿತ್ ಶರ್ಮಾ: ಇಲ್ಲೂ ಕೊಹ್ಲಿಯೇ ನಂಬರ್ 1

Rohit Sharma Records: ಏಕದಿನ ಕ್ರಿಕೆಟ್​ನಲ್ಲಿ ವೇಗವಾಗಿ 10 ಸಾವಿರ ರನ್ ಪೂರೈಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಅಗ್ರ-ನಾಲ್ಕರಲ್ಲಿ ಭಾರತೀಯ ಬ್ಯಾಟರ್​ಗಳೇ ಕಾಣಿಸಿಕೊಂಡಿರುವುದು ವಿಶೇಷ. ಈ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಟಾಪ್-3 ನಲ್ಲಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Sep 12, 2023 | 4:19 PM

ಕೊಲಂಬೊದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸುವ ಮೂಲಕ ರೋಹಿತ್ ಶರ್ಮಾ (53) ಏಕದಿನ ಕ್ರಿಕೆಟ್​ನಲ್ಲಿ 10 ಸಾವಿರ ರನ್ ಪೂರೈಸಿದ್ದಾರೆ. ಈ ಮೂಲಕ ವೇಗವಾಗಿ 10 ಸಾವಿರ ರನ್ ಕಲೆಹಾಕಿದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

1 / 6
ಇದಕ್ಕೂ ಮುನ್ನ ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಕಾಣಿಸಿಕೊಂಡಿದ್ದರು. ತೆಂಡೂಲ್ಕರ್ 259 ಏಕದಿನ ಇನಿಂಗ್ಸ್​ಗಳ ಮೂಲಕ 10000 ರನ್​ ಪೂರೈಸಿದ್ದರು.

2 / 6
ಇದೀಗ ಕೇವಲ 241 ಏಕದಿನ ಇನಿಂಗ್ಸ್​ಗಳ ಮೂಲಕ ರೋಹಿತ್ ಶರ್ಮಾ 10 ಸಾವಿರ ರನ್ ಪೂರೈಸಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ವೇಗವಾಗಿ 10 ಸಾವಿರ ರನ್ ಕಲೆಹಾಕಿದ ವಿಶ್ವದ 2ನೇ ಬ್ಯಾಟರ್ ಎಂಬ ವಿಶ್ವ ದಾಖಲೆ ಬರೆದಿದ್ದಾರೆ.

3 / 6
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ವಿರಾಟ್ ಕೊಹ್ಲಿ ಎಂಬುದು ವಿಶೇಷ. ಕಿಂಗ್ ಕೊಹ್ಲಿ ಕೇವಲ 205 ಇನಿಂಗ್ಸ್​ಗಳ ಮೂಲಕ ಏಕದಿನ ಕ್ರಿಕೆಟ್​ನಲ್ಲಿ 10 ಸಾವಿರ ರನ್ ಪೂರೈಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಇದೀಗ ಹಿಟ್​ಮ್ಯಾನ್ ಈ ಪಟ್ಟಿಯಲ್ಲಿ 2ನೇ ಸ್ಥಾನ ಪಡೆದಿದ್ದಾರೆ.

4 / 6
ಹಾಗೆಯೇ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿರುವುದು ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ. ದಾದಾ 263 ಏಕದಿನ ಇನಿಂಗ್ಸ್​ಗಳ ಮೂಲಕ ಈ ಸಾಧನೆ ಮಾಡಿದ್ದಾರೆ.

5 / 6
ಅಂದರೆ ಏಕದಿನ ಕ್ರಿಕೆಟ್​ನಲ್ಲಿ ವೇಗವಾಗಿ 10 ಸಾವಿರ ರನ್ ಪೂರೈಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಅಗ್ರ-ನಾಲ್ಕರಲ್ಲಿ ಭಾರತೀಯ ಬ್ಯಾಟರ್​ಗಳೇ ಇರುವುದು ವಿಶೇಷ.

6 / 6
Follow us