AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: 2 ಫೋರ್ ಬಾರಿಸಿ ಹೊಸ ದಾಖಲೆ ನಿರ್ಮಿಸಿದ ರೋಹಿತ್ ಶರ್ಮಾ

Rohit Sharma Records: ವಿಶೇಷ ಎಂದರೆ ಏಕದಿನ ಕ್ರಿಕೆಟ್​ನಲ್ಲಿ ಕೇವಲ 20 ಆಟಗಾರರು ಮಾತ್ರ 900 ಹಾಗೂ ಅದಕ್ಕಿಂತ ಹೆಚ್ಚು ಫೋರ್ ಬಾರಿಸಿದ್ದಾರೆ.

TV9 Web
| Edited By: |

Updated on: Mar 22, 2023 | 10:08 PM

Share
ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ಹಿಟ್​ಮ್ಯಾನ್ 17 ಎಸೆತಗಳಲ್ಲಿ 2 ಸಿಡಿಲಬ್ಬರದ ಸಿಕ್ಸರ್ ಹಾಗೂ 2 ಫೋರ್​ನೊಂದಿಗೆ 30 ರನ್​ ಬಾರಿಸಿದ್ದರು.

1 / 9
ಈ ಪಂದ್ಯದಲ್ಲಿ ಬಾರಿಸಿದ 2 ಫೋರ್​ನೊಂದಿಗೆ ಏಕದಿನ ಕ್ರಿಕೆಟ್​ನಲ್ಲಿ 900 ಫೋರ್​ಗಳನ್ನು ಸಿಡಿಸಿದ ವಿಶೇಷ ಸಾಧಕರ ಪಟ್ಟಿಗೆ ರೋಹಿತ್ ಶರ್ಮಾ ಕೂಡ ಸೇರ್ಪಡೆಯಾದರು. ಅಲ್ಲದೆ ಈ ಸಾಧನೆ ಮಾಡಿದ ಏಳನೇ ಭಾರತೀಯ ಬ್ಯಾಟ್ಸ್​ಮನ್ ಎನಿಸಿಕೊಂಡರು.

2 / 9
ಇದಕ್ಕೂ ಮುನ್ನ ಏಕದಿನ ಕ್ರಿಕೆಟ್​ನಲ್ಲಿ ಭಾರತದ ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ಸೌರವ್ ಗಂಗೂಲಿ, ರಾಹುಲ್ ದ್ರಾವಿಡ್, ಯುವರಾಜ್ ಸಿಂಗ್ ಹಾಗೂ ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದ್ದರು. ಇದೀಗ ಈ ಪಟ್ಟಿಗೆ ಹೊಸ ಸೇರ್ಪಡೆ ರೋಹಿತ್ ಶರ್ಮಾ.

3 / 9
ಇನ್ನು ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ಫೋರ್ ಬಾರಿಸಿದ ವಿಶ್ವ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಸಚಿನ್ 452 ಏಕದಿನ ಇನಿಂಗ್ಸ್​ಗಳಲ್ಲಿ ಒಟ್ಟು 2016 ಫೋರ್​ಗಳನ್ನು ಬಾರಿಸಿದ್ದಾರೆ. ವಿಶೇಷ ಎಂದರೆ ಸಚಿನ್ ತೆಂಡೂಲ್ಕರ್ ಅವರನ್ನು ಹೊರತುಪಡಿಸಿ ವಿಶ್ವದ ಯಾವುದೇ ಬ್ಯಾಟರ್ ಏಕದಿನ ಕ್ರಿಕೆಟ್​ನಲ್ಲಿ 2 ಸಾವಿರ ಫೋರ್ ಬಾರಿಸಿಲ್ಲ.

4 / 9
ಅದೇ ರೀತಿ ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿ ಶ್ರೀಲಂಕಾದ ಸನತ್ ಜಯಸೂರ್ಯ ಇದ್ದಾರೆ. ಲಂಕಾದ ಮಾಜಿ ಎಡಗೈ ಬ್ಯಾಟರ್​ 433 ಇನಿಂಗ್ಸ್​ನಲ್ಲಿ ಒಟ್ಟು 1500 ಫೋರ್ ಬಾರಿಸಿದ್ದಾರೆ.

5 / 9
ಹಾಗೆಯೇ ಮೂರನೇ ಸ್ಥಾನದಲ್ಲಿ ಶ್ರೀಲಂಕಾದ ಮಾಜಿ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಕುಮಾರ್ ಸಂಗಾಕ್ಕರ್ ಇದ್ದು, ಸಂಗಾಕ್ಕರ 380 ಇನಿಂಗ್ಸ್​ನಲ್ಲಿ 1385 ಫೋರ್ ಬಾರಿಸಿದ್ದಾರೆ.

6 / 9
ನಾಲ್ಕನೇ ಸ್ಥಾನದಲ್ಲಿ ರಿಕಿ ಪಾಂಟಿಂಗ್ ಇದ್ದು, ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ 365 ಏಕದಿನ ಇನಿಂಗ್ಸ್​ನಲ್ಲಿ 1231 ಫೋರ್ ಬಾರಿಸಿದ್ದಾರೆ.

7 / 9
ಇನ್ನು ಐದನೇ ಸ್ಥಾನದಲ್ಲಿರುವುದು ಟೀಮ್ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಎಂಬುದು ವಿಶೇಷ. ಕಿಂಗ್ ಕೊಹ್ಲಿ 265 ಏಕದಿನ ಇನಿಂಗ್ಸ್​ನಲ್ಲಿ ಇದುವರೆಗೆ ಒಟ್ಟು 1211 ಫೋರ್ ಸಿಡಿಸಿದ್ದಾರೆ.

8 / 9
ವಿಶೇಷ ಎಂದರೆ ಏಕದಿನ ಕ್ರಿಕೆಟ್​ನಲ್ಲಿ ಕೇವಲ 20 ಆಟಗಾರರು ಮಾತ್ರ 900 ಹಾಗೂ ಅದಕ್ಕಿಂತ ಹೆಚ್ಚು ಫೋರ್ ಬಾರಿಸಿದ್ದು, ಇದೀಗ ಈ ಪಟ್ಟಿಯಲ್ಲಿ ರೋಹಿತ್ ಶರ್ಮಾ 20ನೇ ಸ್ಥಾನ ಅಲಂಕರಿಸಿದ್ದಾರೆ.

9 / 9
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್