AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾ ಅಂಗಳದಲ್ಲಿ ಭರ್ಜರಿ ದಾಖಲೆ ಬರೆದ ರೋಹಿತ್ ಶರ್ಮಾ

Rohit Sharma Records: ಏಕದಿನ ಕ್ರಿಕೆಟ್​ನಲ್ಲಿ ರೋಹಿತ್ ಶರ್ಮಾ ಸಿಡಿಲಬ್ಬರ ಮುಂದುವರೆದಿದೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ಹಿಟ್​ಮ್ಯಾನ್ ಇದೀಗ ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸಿದ್ದಾರೆ. ಈ ಅರ್ಧಶತಕದೊಂದಿಗೆ ಭರ್ಜರಿ ದಾಖಲೆಯೊಂದನ್ನು ಸಹ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on:Oct 23, 2025 | 12:26 PM

Share
ಅಡಿಲೇಡ್​ನ ಓವಲ್ ಮೈದಾನದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ (Rohit Sharma) ಆಕರ್ಷಕ ಅರ್ಧಶತಕ ಬಾರಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಬೌಲಿಂಗ್ ಆಯ್ದುಕೊಂಡಿದ್ದರು.

1 / 5
ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ರೋಹಿತ್ ಶರ್ಮಾ 97 ಎಸೆತಗಳಲ್ಲಿ 2 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 73 ರನ್ ಬಾರಿಸಿದರು. ಈ 73 ರನ್​ಗಳೊಂದಿಗೆ ಆಸ್ಟ್ರೇಲಿಯಾದಲ್ಲಿ ಆಸೀಸ್ ವಿರುದ್ಧ ಏಕದಿನ ಕ್ರಿಕೆಟ್​ನಲ್ಲಿ ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ ಭಾರತದ ಮೊದಲ ಬ್ಯಾಟರ್ ಎನಿಸಿಕೊಂಡರು.

2 / 5
ಅಂದರೆ ಆಸ್ಟ್ರೇಲಿಯಾ ವಿರುದ್ಧ ಆಸ್ಟ್ರೇಲಿಯಾ ಪಿಚ್​​ನಲ್ಲಿ ಏಕದಿನ ಪಂದ್ಯಗಳ ಮೂಲಕ ಭಾರತದ ಯಾವುದೇ ಬ್ಯಾಟರ್ 1000 ರನ್ ಗಳಿಸಿರಲಿಲ್ಲ. ಆದರೆ ಇದೀಗ 73 ರನ್​ ಸಿಡಿಸುವುದರೊಂದಿಗೆ ರೋಹಿತ್ ಶರ್ಮಾ ಆಸೀಸ್​ ಪಿಚ್​ನಲ್ಲಿ ಏಕದಿನ ಪಂದ್ಯಗಳಲ್ಲಿ ಸಾವಿರ ರನ್ ಪೂರೈಸಿದ್ದಾರೆ.

3 / 5
ಆಸ್ಟ್ರೇಲಿಯಾದಲ್ಲಿ 21  ಏಕದಿನ ಪಂದ್ಯಗಳನ್ನಾಡಿರುವ ರೋಹಿತ್ ಶರ್ಮಾ 4 ಭರ್ಜರಿ ಶತಕ ಹಾಗೂ 3 ಅರ್ಧ ಶತಕಗಳೊಂದಿಗೆ ಒಟ್ಟು 1033* ರನ್ ಕಲೆಹಾಕಿದ್ದಾರೆ. ಈ ವೇಳೆ ಹಿಟ್​ಮ್ಯಾನ್ ಬ್ಯಾಟ್​ನಿಂದ 83 ಫೋರ್ ಹಾಗೂ 31 ಸಿಕ್ಸರ್​ಗಳು ಕೂಡ ಮೂಡಿಬಂದಿವೆ. 

4 / 5
ಇನ್ನು ಆಸ್ಟ್ರೇಲಿಯಾ ವಿರುದ್ಧ ಆಸೀಸ್ ಪಿಚ್​ನಲ್ಲಿ ಟೀಮ್ ಇಂಡಿಯಾ ಪರ ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ. ಕಿಂಗ್ ಕೊಹ್ಲಿ ಈವೆರೆಗೆ 20 ಪಂದ್ಯಗಳನ್ನಾಡಿದ್ದು, ಈ ವೇಳೆ 3 ಶತಕ ಹಾಗೂ 4 ಅರ್ಧಶತಕಗಳೊಂದಿಗೆ ಒಟ್ಟು 802 ರನ್​ ಕಲೆಹಾಕಿದ್ದಾರೆ.

5 / 5

Published On - 12:23 pm, Thu, 23 October 25