ಹಿಟ್ ಆಗದ ಹಿಟ್ಮ್ಯಾನ್, ಆದರೂ ರೋಹಿತ್ ಶರ್ಮಾ ಹೆಸರಿಗೆ ವಿಶ್ವ ದಾಖಲೆ
Rohit Sharma Records: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2025) 9ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ತಂಡವು 196 ರನ್ ಕಲೆಹಾಕಿದರೆ, ಮುಂಬೈ ಇಂಡಿಯನ್ಸ್ 160 ರನ್ಗಳಿಸಲಷ್ಟೇ ಶಕ್ತರಾದರು. ಇನ್ನು ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ರೋಹಿತ್ ಶರ್ಮಾ ಟಿ20 ಕ್ರಿಕೆಟ್ನಲ್ಲಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
Updated on: Mar 30, 2025 | 10:55 AM

ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ (Rohit Sharma) ಟಿ20 ಕ್ರಿಕೆಟ್ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಹಿಟ್ಮ್ಯಾನ್ ಕೇವಲ 8 ರನ್ಗಳಿಸಿ ಔಟಾಗಿದ್ದರು. ಇದಾಗ್ಯೂ ಈ ಪಂದ್ಯದ ಮೂಲಕ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ದಾಖಲೆಯೊಂದಿಗೆ ಈ ಸಾಧನೆ ಮಾಡಿದ ಭಾರತದ ಏಕೈಕ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ (Rohit Sharma) ಟಿ20 ಕ್ರಿಕೆಟ್ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಬರೆದಿರುವ ಈ ದಾಖಲೆಯೊಂದಿಗೆ ಈ ಸಾಧನೆ ಮಾಡಿದ ಭಾರತದ ಏಕೈಕ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಅಹದಾಬಾದ್ನಲ್ಲಿ ನಡೆದ ಐಪಿಎಲ್ನ 9ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ರೋಹಿತ್ ಶರ್ಮಾ ಟಿ20 ಕ್ರಿಕೆಟ್ನಲ್ಲಿ 450 ಪಂದ್ಯಗಳನ್ನಾಡಿದ ವಿಶೇಷ ದಾಖಲೆ ಬರೆದಿದ್ದಾರೆ. ಅಲ್ಲದೆ ಈ ವಿಶ್ವ ದಾಖಲೆ ಬರೆದ ಮೊದಲ ಭಾರತೀಯ ಹಾಗೂ ವಿಶ್ವದ 12ನೇ ಆಟಗಾರ ಎನಿಸಿಕೊಂಡಿದ್ದಾರೆ.

ಟಿ20 ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾ, ಡೆಕ್ಕನ್ ಚಾರ್ಜಸ್ ಹಾಗೂ ಮುಂಬೈ ಇಂಡಿಯನ್ಸ್ ಪರ 450 ಪಂದ್ಯಗಳನ್ನಾಡಿರುವ ರೋಹಿತ್ ಶರ್ಮಾ ಈವರೆಗೆ 11838 ರನ್ ಕಲೆಹಾಕಿದ್ದಾರೆ. ಈ ವೇಳೆ ಹಿಟ್ಮ್ಯಾನ್ ಬ್ಯಾಟ್ನಿಂದ 8 ಶತಕ ಮೂಡಿಬಂದಿವೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ 450 ಪಂದ್ಯಗಳನ್ನಾಡಿ 11 ಸಾವಿರ ರನ್ ಕಲೆಹಾಕಿದ ಭಾರತದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇನ್ನು ಈ ಪಟ್ಟಿಯಲ್ಲಿ ದಿನೇಶ್ ಕಾರ್ತಿಕ್ ದ್ವಿತೀಯ ಸ್ಥಾನದಲ್ಲಿದ್ದಾರೆ. ಟೀಮ್ ಇಂಡಿಯಾ, ಆರ್ಸಿಬಿ, ಮುಂಬೈ ಇಂಡಿಯನ್ಸ್, ಕೆಕೆಆರ್ ಸೇರಿದಂತೆ ಹಲವು ತಂಡಗಳ ಪರ ಕಣಕ್ಕಿಳಿದಿರುವ ಡಿಕೆ ಒಟ್ಟು 412 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ದಿನೇಶ್ ಕಾರ್ತಿಕ್ ಒಟ್ಟು 7537 ರನ್ಗಳನ್ನು ಕಲೆಹಾಕಿದ್ದಾರೆ.

ಹಾಗೆಯೇ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಅತೀ ಹೆಚ್ಚು ಪಂದ್ಯಗಳನ್ನಾಡಿದ ವಿಶ್ವ ದಾಖಲೆ ವೆಸ್ಟ್ ಇಂಡೀಸ್ನ ಕೀರನ್ ಪೊಲಾರ್ಡ್ ಹೆಸರಿನಲ್ಲಿದೆ. ವೆಸ್ಟ್ ಇಂಡೀಸ್, ಮುಂಬೈ ಇಂಡಿಯನ್ಸ್, ಟಿಕೆಆರ್ ಸೇರಿದಂತೆ ಹಲವು ತಂಡಗಳ ಪರ ಪೊಲಾರ್ಡ್ ಒಟ್ಟು 695 ಪಂದ್ಯಗಳನ್ನಾಡಿ ಟಿ20 ಕ್ರಿಕೆಟ್ನಲ್ಲಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
























