Rohit Sharma: ಚಿರಋಣಿ… ಕೆನ್ಸಿಂಗ್ಟನ್ ಓವಲ್ ಪಿಚ್ನ ಹುಲ್ಲು ತಿಂದ ರೋಹಿತ್ ಶರ್ಮಾ
T20 World Cup 2024: ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 176 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು 169 ರನ್ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ 7 ರನ್ಗಳ ರೋಚಕ ಜಯ ಸಾಧಿಸಿದೆ. ಈ ಸ್ಮರಣೀಯ ಗೆಲುವು ನೀಡಿದ ಕೆನ್ಸಿಂಗ್ಟನ್ ಓವಲ್ ಮೈದಾನದ ಪಿಚ್ನ ಹುಲ್ಲು ತಿನ್ನುವ ಮೂಲಕ ರೋಹಿತ್ ಶರ್ಮಾ ಎಲ್ಲರ ಗಮನ ಸೆಳೆದಿದ್ದಾರೆ.
1 / 5
T20 World Cup 2024: ಭಾರತ ತಂಡದ ಬಹುದೊಡ್ಡ ಕನಸು ಈಡೇರಿದೆ. 2013 ರಿಂದ ಟೀಮ್ ಇಂಡಿಯಾ (Team India) ಪಾಲಿಗೆ ಮರೀಚಿಕೆಯಾಗಿದ್ದ ಐಸಿಸಿ ಟ್ರೋಫಿ ಇದೀಗ ಟಿ20 ವಿಶ್ವಕಪ್ ರೂಪದಲ್ಲಿ ಮರಳಿ ಸಿಕ್ಕಿದೆ. ಅದರಲ್ಲೂ ನಾಯಕನಾಗಿ ಒಂದೇ ಒಂದು ಟ್ರೋಫಿ ಗೆಲ್ಲಬೇಕೆಂಬ ಕನಸು ಹೊತ್ತಿದ್ದ ರೋಹಿತ್ ಶರ್ಮಾ (Rohit Sharma) ಕೊನೆಗೂ ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.
2 / 5
ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ 7 ರನ್ಗಳ ರೋಚಕ ಜಯ ಸಾಧಿಸಿತು. ಈ ರೋಚಕ ಗೆಲುವಿನ ಬೆನ್ನಲ್ಲೇ ಭಾವುಕರಾದ ರೋಹಿತ್ ಶರ್ಮಾ ಬಿಕ್ಕಿಳಿಸುತ್ತಾ ಕಣ್ಣೀರು ಹಾಕಿದರು.
3 / 5
ಈ ಕಣ್ಣೀರಿನೊಂದಿಗೆ ತನ್ನ ಬಹುಕಾಲದ ಕನಸು ಈಡೇರಿಸಿದ ಕೆನ್ಸಿಂಗ್ಟನ್ ಓವಲ್ ಮೈದಾನದ ಪಿಚ್ಗೆ ನಮಿಸಿದರು. ಅಷ್ಟೇ ಅಲ್ಲದೆ ಪಿಚ್ನಲ್ಲಿನ ಹುಲ್ಲನ್ನು ಕಿತ್ತು ತಿನ್ನುವ ಮೂಲಕ ಸ್ಮರಣೀಯ ಗೆಲುವನ್ನು ನೀಡಿದ ಕೆನ್ಸಿಂಗ್ಟನ್ ಮೈದಾನದ ಋಣವನ್ನು ದೇಹಕ್ಕೆ ಸೇರಿಸಿಕೊಂಡರು. ಇದೀಗ ರೋಹಿತ್ ಶರ್ಮಾ ಅವರ ಈ ಭಾವುಕ ಕ್ಷಣಗಳ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
4 / 5
ಇನ್ನು ಈ ಗೆಲುವಿನ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ರೋಹಿತ್ ಶರ್ಮಾ, ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ನಾನು ಟಿ20 ಸ್ವರೂಪದೊಂದಿಗೆ ವೃತ್ತಿಜೀವನ ಆರಂಭಿಸಿದ್ದೆ. ಇದೀಗ ಈ ಸ್ವರೂಪಕ್ಕೆ ವಿದಾಯ ಹೇಳಲು ಸಕಾಲ. ಹೀಗಾಗಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಹೊಂದುತ್ತಿರುವುದಾಗಿ ರೋಹಿತ್ ಶರ್ಮಾ ತಿಳಿಸಿದ್ದಾರೆ.
5 / 5
ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಪರ ವಿಶ್ವಕಪ್ ಗೆದ್ದ ಮೂರನೇ ನಾಯಕ ಎಂಬ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ. 1983 ರಲ್ಲಿ ಕಪಿಲ್ ದೇವ್ ಮೊದಲ ಬಾರಿಗೆ ಈ ಸಾಧನೆ ಮಾಡಿದರೆ, 2007 ಮತ್ತು 2011 ರಲ್ಲಿ ಭಾರತ ತಂಡ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ವಿಶ್ವಕಪ್ ಗೆದ್ದಿತ್ತು. ಇದೀಗ 2024 ರಲ್ಲಿ ಟಿ20 ವಿಶ್ವಕಪ್ ಗೆಲ್ಲುವ ಮೂಲಕ ರೋಹಿತ್ ಶರ್ಮಾ ಈ ಸಾಧನೆ ಮಾಡಿದ ಮೂರನೇ ನಾಯಕ ಎನಿಸಿಕೊಂಡಿದ್ದಾರೆ.