ಇದೀಗ ಅಫ್ಘಾನಿಸ್ತಾನ್ ವಿರುದ್ಧದ ಗೆಲುವಿನೊಂದಿಗೆ ರೋಹಿತ್ ಶರ್ಮಾ ಕೂಡ 41 ಬಾರಿ ಭಾರತ ತಂಡವನ್ನು ಗೆಲುವಿನ ದಡ ಸೇರಿಸಿದ್ದಾರೆ. ಅದು ಕೂಡ ಕೇವಲ 53 ಪಂದ್ಯಗಳ ಮೂಲಕ ಎಂಬುದು ವಿಶೇಷ. ಅಂದರೆ ಹಿಟ್ಮ್ಯಾನ್ ನಾಯಕತ್ವದಲ್ಲಿ ಭಾರತ ತಂಡವು 53 ಟಿ20 ಪಂದ್ಯಗಳನ್ನಾಡಿದ್ದು, ಈ ವೇಳೆ 41 ಪಂದ್ಯಗಳಲ್ಲಿ ಜಯ ಸಾಧಿಸಿದೆ.