Rohit Sharma: ಯಶಸ್ವಿ ನಾಯಕ ಧೋನಿಯ ದಾಖಲೆ ಸರಿಗಟ್ಟಿದ ರೋಹಿತ್ ಶರ್ಮಾ

| Updated By: ಝಾಹಿರ್ ಯೂಸುಫ್

Updated on: Jan 15, 2024 | 6:42 AM

Rohit Sharma Records: ಧೋನಿ ದಾಖಲೆ ಸರಿಗಟ್ಟಿರುವ ರೋಹಿತ್ ಶರ್ಮಾಗೆ ಹೊಸ ಇತಿಹಾಸ ಬರೆಯುವ ಅವಕಾಶವಿದೆ. ಅಫ್ಘಾನಿಸ್ತಾನ್ ವಿರುದ್ಧದ ಕೊನೆಯ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ, ರೋಹಿತ್ ಶರ್ಮಾ ಭಾರತ ಟಿ20 ತಂಡದ ಯಶಸ್ವಿ ನಾಯಕನಾಗಿ ಹೊರಹೊಮ್ಮಲಿದ್ದಾರೆ.

1 / 6
ಅಫ್ಘಾನಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡದ ನಾಯಕ ರೋಹಿತ್ ಶರ್ಮಾ (Rohit Sharma) ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಭಾರತ ತಂಡ ಕಂಡಂತಹ ಅತ್ಯಂತ ಯಶಸ್ವಿ ನಾಯಕ ಮಹೇಂದ್ರ ಸಿಂಗ್ ಧೋನಿಯ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

2 / 6
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು 20 ಓವರ್​ಗಳಲ್ಲಿ 172 ರನ್ ಕಲೆಹಾಕಿತು. 173 ರನ್​ಗಳ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ (68) ಹಾಗೂ ಶಿವಂ ದುಬೆ (63) ಅರ್ಧಶತಕ ಬಾರಿಸಿ ಮಿಂಚಿದರು. ಪರಿಣಾಮ 15.4 ಓವರ್​ಗಳಲ್ಲಿ ಅಫ್ಘಾನ್ ನೀಡಿ ಗುರಿಯನ್ನು ಚೇಸ್ ಮಾಡಿ ಟೀಮ್ ಇಂಡಿಯಾ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

3 / 6
ಈ ಗೆಲುವಿನೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಭಾರತ ತಂಡವನ್ನು ಅತೀ ಹೆಚ್ಚು ಬಾರಿ ಯಶಸ್ವಿಯಾಗಿ ಮುನ್ನಡೆಸಿದ್ದ ಮಹೇಂದ್ರ ಸಿಂಗ್ ಧೋನಿಯ ದಾಖಲೆಯನ್ನು ರೋಹಿತ್ ಶರ್ಮಾ ಸರಿಗಟ್ಟಿದರು. ಚುಟುಕು ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾವನ್ನು 72 ಪಂದ್ಯಗಳಲ್ಲಿ ಮುನ್ನಡೆಸಿದ್ದ ಧೋನಿ ಭಾರತ ತಂಡಕ್ಕೆ 41 ಗೆಲುವು ತಂದುಕೊಟ್ಟಿದ್ದರು.

4 / 6
ಇದೀಗ ಅಫ್ಘಾನಿಸ್ತಾನ್ ವಿರುದ್ಧದ ಗೆಲುವಿನೊಂದಿಗೆ ರೋಹಿತ್ ಶರ್ಮಾ ಕೂಡ 41 ಬಾರಿ ಭಾರತ ತಂಡವನ್ನು ಗೆಲುವಿನ ದಡ ಸೇರಿಸಿದ್ದಾರೆ. ಅದು ಕೂಡ ಕೇವಲ 53 ಪಂದ್ಯಗಳ ಮೂಲಕ ಎಂಬುದು ವಿಶೇಷ. ಅಂದರೆ ಹಿಟ್​ಮ್ಯಾನ್ ನಾಯಕತ್ವದಲ್ಲಿ ಭಾರತ ತಂಡವು 53 ಟಿ20 ಪಂದ್ಯಗಳನ್ನಾಡಿದ್ದು, ಈ ವೇಳೆ 41 ಪಂದ್ಯಗಳಲ್ಲಿ ಜಯ ಸಾಧಿಸಿದೆ.

5 / 6
ಇನ್ನು ವಿರಾಟ್ ಕೊಹ್ಲಿ ಸಾರಥ್ಯದಲ್ಲಿ ಟೀಮ್ ಇಂಡಿಯಾ 50 ಟಿ20 ಪಂದ್ಯಗಳಲ್ಲಿ ಕಣಕ್ಕಿಳಿದಿದೆ. ಈ ವೇಳೆ ಭಾರತ ತಂಡವು 30 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಹಾಗೆಯೇ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಭಾರತ ತಂಡವು 16 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು, ಈ ವೇಳೆ 10 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ.

6 / 6
ಇದೀಗ 41 ಗೆಲುವುಗಳೊಂದಿಗೆ ಧೋನಿ ದಾಖಲೆ ಸರಿಗಟ್ಟಿರುವ ರೋಹಿತ್ ಶರ್ಮಾಗೆ ಹೊಸ ಇತಿಹಾಸ ಬರೆಯುವ ಅವಕಾಶವಿದೆ. ಅಫ್ಘಾನಿಸ್ತಾನ್ ವಿರುದ್ಧದ ಕೊನೆಯ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ, ರೋಹಿತ್ ಶರ್ಮಾ ಭಾರತ ಟಿ20 ತಂಡದ ಯಶಸ್ವಿ ನಾಯಕನಾಗಿ ಹೊರಹೊಮ್ಮಲಿದ್ದಾರೆ.