- Kannada News Photo gallery Cricket photos Rohit Sharma Equals Virat Kohli, MS Dhoni's unwanted Record
Rohit Sharma: ಧೋನಿ, ಕೊಹ್ಲಿಯ ಬೇಡದ ದಾಖಲೆ ಸರಿಗಟ್ಟಿದ ರೋಹಿತ್ ಶರ್ಮಾ
Rohit Sharma: ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್ನಲ್ಲಿ ಅತೀ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಬ್ಯಾಟರ್ಗಳ ಪಟ್ಟಿಯಲ್ಲೂ ರೋಹಿತ್ ಶರ್ಮಾ ಅಗ್ರಸ್ಥಾನ ಅಲಂಕರಿಸಿದ್ದಾರೆ. ಅದು ಕೂಡ ಮಾಜಿ ನಾಯಕರುಗಳಾದ ಮಹೇಂದ್ರ ಸಿಂಗ್ ಧೋನಿ ಹಾಗೂ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ಬೇಡ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.
Updated on: Jan 13, 2024 | 8:10 AM

ಅಫ್ಘಾನಿಸ್ತಾನ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ (0) ಶೂನ್ಯಕ್ಕೆ ರನೌಟ್ ಆಗಿದ್ದರು. ಇದರೊಂದಿಗೆ ಟಿ20 ಕ್ರಿಕೆಟ್ನಲ್ಲಿ ಸೊನ್ನೆಗೆ ಔಟಾದ ಭಾರತದ ಮೊದಲ ನಾಯಕ ಎಂಬ ಅನಗತ್ಯ ದಾಖಲೆ ಹಿಟ್ಮ್ಯಾನ್ ಪಾಲಾಯಿತು.

ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್ನಲ್ಲಿ ಅತೀ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಬ್ಯಾಟರ್ಗಳ ಪಟ್ಟಿಯಲ್ಲೂ ರೋಹಿತ್ ಶರ್ಮಾ ಅಗ್ರಸ್ಥಾನ ಅಲಂಕರಿಸಿದ್ದಾರೆ. ಅದು ಕೂಡ ಮಾಜಿ ನಾಯಕರುಗಳಾದ ಮಹೇಂದ್ರ ಸಿಂಗ್ ಧೋನಿ ಹಾಗೂ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ಬೇಡ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

ಟೀಮ್ ಇಂಡಿಯಾ ಪರ 85 ಟಿ20 ಇನಿಂಗ್ಸ್ ಆಡಿರುವ ಮಹೇಂದ್ರ ಸಿಂಗ್ ಧೋನಿ ಒಟ್ಟು 6 ಬಾರಿ ಶೂನ್ಯಕ್ಕೆ ಔಟಾಗಿದ್ದರು. ಈ ಮೂಲಕ ಚುಟುಕು ಕ್ರಿಕೆಟ್ನಲ್ಲಿ ಭಾರತದ ಪರ ಅತ್ಯಧಿಕ ಬಾರಿ ರನೌಟ್ ಆದ ಬ್ಯಾಟರ್ ಎನಿಸಿಕೊಂಡಿದ್ದರು.

ಇದಾದ ಬಳಿಕ ಈ ಕಳಪೆ ದಾಖಲೆಯನ್ನು ವಿರಾಟ್ ಕೊಹ್ಲಿ ಸರಿಗಟ್ಟಿದ್ದರು. ಭಾರತದ ಪರ 107 ಟಿ20 ಇನಿಂಗ್ಸ್ಗಳಲ್ಲಿ ಕಣಕ್ಕಿಳಿದಿರುವ ವಿರಾಟ್ ಕೊಹ್ಲಿ ಕೂಡ 6 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಈ ಮೂಲಕ ಸೊನ್ನೆ ಸಾಧನೆಯಲ್ಲಿ ಧೋನಿ ಜೊತೆ ಜಂಟಿಯಾಗಿ ಅಗ್ರಸ್ಥಾನ ಅಲಂಕರಿಸಿದ್ದರು.

ಇದೀಗ ಅಫ್ಘಾನಿಸ್ತಾನ್ ವಿರುದ್ಧದ ಮೊದಲ ಪಂದ್ಯದಲ್ಲಿ ಸೊನ್ನೆ ಸುತ್ತುವ ಮೂಲಕ ರೋಹಿತ್ ಶರ್ಮಾ ಕೂಡ ಈ ದಾಖಲೆಯನ್ನು ಸರಿಗಟ್ಟಿದ್ದಾರೆ. ಟೀಮ್ ಇಂಡಿಯಾ ಪರ 141 ಟಿ20 ಇನಿಂಗ್ಸ್ ಆಡಿರುವ ಹಿಟ್ಮ್ಯಾನ್ 6ನೇ ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಈ ಮೂಲಕ ಧೋನಿ, ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ಅನಗತ್ಯ ದಾಖಲೆಯನ್ನು ರೋಹಿತ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ.
