Rohit Sharma: ಧೋನಿಯ ದಾಖಲೆ ಮುರಿಯುವ ಹೊಸ್ತಿಲಲ್ಲಿ ರೋಹಿತ್ ಶರ್ಮಾ
TV9 Web | Updated By: ಝಾಹಿರ್ ಯೂಸುಫ್
Updated on:
Dec 26, 2023 | 7:59 AM
Test Cricket Records: ಟೆಸ್ಟ್ ಕ್ರಿಕೆಟ್ನಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ವಿಶ್ವ ದಾಖಲೆ ಇಂಗ್ಲೆಂಡ್ ತಂಡದ ಬೆನ್ ಸ್ಟೋಕ್ಸ್ ಹೆಸರಿನಲ್ಲಿದೆ. 175 ಇನಿಂಗ್ಸ್ಗಳಲ್ಲಿ ಸ್ಟೋಕ್ಸ್ ಒಟ್ಟು 124 ಸಿಕ್ಸ್ ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ದಾಖಲೆಯನ್ನು ಮುಂಬರುವ ದಿನಗಳಲ್ಲಿ ರೋಹಿತ್ ಶರ್ಮಾ ಮುರಿಯಲಿದ್ದಾರಾ ಕಾದು ನೋಡಬೇಕಿದೆ.
1 / 7
ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಟೆಸ್ಟ್ ಸರಣಿಯು ಇಂದಿನಿಂದ (ಡಿ.26) ಪ್ರಾರಂಭವಾಗಲಿದೆ. ಸೆಂಚುರಿಯನ್ನ ಸೂಪರ್ಸ್ಪೋರ್ಟ್ ಪಾರ್ಕ್ನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಹೊಸ ದಾಖಲೆ ಬರೆಯುವ ಅವಕಾಶ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮುಂದಿದೆ.
2 / 7
ಅದು ಕೂಡ ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಅಂದರೆ ಟೆಸ್ಟ್ ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ಸಿಕ್ಸ್ ಬಾರಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ಧೋನಿ 2ನೇ ಸ್ಥಾನದಲ್ಲಿದ್ದಾರೆ.
3 / 7
ಮಹೇಂದ್ರ ಸಿಂಗ್ ಧೋನಿ 144 ಇನಿಂಗ್ಸ್ಗಳಲ್ಲಿ ಒಟ್ಟು 78 ಸಿಕ್ಸ್ಗಳನ್ನು ಬಾರಿಸಿದ್ದಾರೆ. ಈ ಮೂಲಕ ಭಾರತದ ಪರ ಟೆಸ್ಟ್ ಕ್ರಿಕೆಟ್ನಲ್ಲಿ ಅತೀ ಹೆಚ್ಚು ಸಿಕ್ಸರ್ ಸಿಡಿಸಿದ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಎಂಎಸ್ಡಿ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.
4 / 7
ಧೋನಿಯ ಹೆಸರಿನಲ್ಲಿರುವ ಈ ದಾಖಲೆಯನ್ನು ಮುರಿಯಲು ಹಿಟ್ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾಗೆ ಕೇವಲ 2 ಸಿಕ್ಸ್ಗಳ ಅಗತ್ಯತೆಯಿದೆ. ಇದುವರೆಗೆ 88 ಟೆಸ್ಟ್ ಇನಿಂಗ್ಸ್ ಆಡಿರುವ ರೋಹಿತ್ ಶರ್ಮಾ ಒಟ್ಟು 77 ಸಿಕ್ಸ್ಗಳನ್ನು ಬಾರಿಸಿದ್ದಾರೆ.
5 / 7
ಇದೀಗ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಹಿಟ್ಮ್ಯಾನ್ ಬ್ಯಾಟ್ನಿಂದ 2 ಸಿಕ್ಸ್ಗಳು ಮೂಡಿಬಂದರೆ, ಟೀಮ್ ಇಂಡಿಯಾ ಪರ ಟೆಸ್ಟ್ನಲ್ಲಿ ಅತೀ ಹೆಚ್ಚು ಬಾರಿಸಿದ 2ನೇ ಬ್ಯಾಟರ್ ಎಂಬ ದಾಖಲೆ ರೋಹಿತ್ ಶರ್ಮಾ ಪಾಲಾಗಲಿದೆ.
6 / 7
ಇನ್ನು ಟೆಸ್ಟ್ ಕ್ರಿಕೆಟ್ನಲ್ಲಿ ಭಾರತದ ಪರ ಅತ್ಯಧಿಕ ಸಿಕ್ಸರ್ ಸಿಡಿಸಿದ ದಾಖಲೆ ಇರುವುದು ವೀರೇಂದ್ರ ಸೆಹ್ವಾಗ್ ಹೆಸರಿನಲ್ಲಿ. ಸಿಡಿಲಮರಿ ಖ್ಯಾತಿಯ ಸೆಹ್ವಾಗ್ 178 ಇನಿಂಗ್ಸ್ಗಳಲ್ಲಿ ಒಟ್ಟು 90 ಸಿಕ್ಸ್ಗಳನ್ನು ಸಿಡಿಸಿದ್ದಾರೆ. ಈ ದಾಖಲೆ ಮುರಿಯಲು ಹಿಟ್ಮ್ಯಾನ್ಗೆ ಇನ್ನೂ 14 ಸಿಕ್ಸ್ಗಳ ಅವಶ್ಯಕತೆಯಿದೆ.
7 / 7
ಹಾಗೆಯೇ ಟೆಸ್ಟ್ ಕ್ರಿಕೆಟ್ನಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ವಿಶ್ವ ದಾಖಲೆ ಇಂಗ್ಲೆಂಡ್ ತಂಡದ ಬೆನ್ ಸ್ಟೋಕ್ಸ್ ಹೆಸರಿನಲ್ಲಿದೆ. 175 ಇನಿಂಗ್ಸ್ಗಳಲ್ಲಿ ಸ್ಟೋಕ್ಸ್ ಒಟ್ಟು 124 ಸಿಕ್ಸ್ ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.