- Kannada News Photo gallery Cricket photos Rohit Sharma Fastest to 1,000 runs in the ICC Cricket World Cup
ಹಳೆಯ ದಾಖಲೆಗಳು ಉಡೀಸ್: ಹೊಸ ವಿಶ್ವ ದಾಖಲೆ ಬರೆದ ರೋಹಿತ್ ಶರ್ಮಾ
Rohit Sharma Records: ಏಕದಿನ ವಿಶ್ವಕಪ್ನಲ್ಲಿ ಅತ್ಯಂತ ವೇಗವಾಗಿ ಸಾವಿರ ರನ್ ಪೂರೈಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ರೋಹಿತ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು.
Updated on: Oct 11, 2023 | 9:01 PM

ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ರೋಹಿತ್ ಶರ್ಮಾ ಏಕದಿನ ವಿಶ್ವಕಪ್ನಲ್ಲಿ ಸಾವಿರ ರನ್ ಪೂರೈಸಿದ್ದಾರೆ.

ಇದರೊಂದಿಗೆ ಏಕದಿನ ವಿಶ್ವಕಪ್ನಲ್ಲಿ ಅತ್ಯಂತ ವೇಗವಾಗಿ ಸಾವಿರ ರನ್ ಪೂರೈಸಿದ ವಿಶ್ವ ದಾಖಲೆಯನ್ನು ಹಿಟ್ಮ್ಯಾನ್ ಸರಿಗಟ್ಟಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಡೇವಿಡ್ ವಾರ್ನರ್ ಹೆಸರಿನಲ್ಲಿತ್ತು.

ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ 19 ಇನಿಂಗ್ಸ್ಗಳ ಮೂಲಕ ಏಕದಿನ ವಿಶ್ವಕಪ್ನಲ್ಲಿ 1000 ರನ್ ಪೂರೈಸಿ ವಿಶ್ವ ದಾಖಲೆ ನಿರ್ಮಿಸಿದ್ದರು.

ಇದೀಗ ಹಿಟ್ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಕೂಡ ಕೇವಲ 19 ಇನಿಂಗ್ಸ್ಗಳ ಮೂಲಕ ಈ ಸಾಧನೆ ಮಾಡಿದ್ದಾರೆ. ಈ ಮೂಲಕ ವರ್ಲ್ಡ್ ಕಪ್ನಲ್ಲಿ ಅತ್ಯಂತ ವೇಗವಾಗಿ ಸಾವಿರ ರನ್ ಪೂರೈಸಿದ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ.

ಇದರ ಜೊತೆಗೆ ಏಕದಿನ ವಿಶ್ವಕಪ್ನಲ್ಲಿ ಅತ್ಯಂತ ವೇಗವಾಗಿ ಸಾವಿರ ರನ್ ಪೂರೈಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ರೋಹಿತ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಈ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. ಸಚಿನ್ 20 ಇನಿಂಗ್ಸ್ಗಳ ಮೂಲಕ 1000 ರನ್ ಪೂರೈಸಿ ದಾಖಲೆ ನಿರ್ಮಿಸಿದ್ದರು.

ಇದೀಗ ರೋಹಿತ್ ಶರ್ಮಾ 19 ಇನಿಂಗ್ಸ್ಗಳ ಮೂಲಕ ಸಾವಿರ ರನ್ ಕಲೆಹಾಕಿ ಏಕದಿನ ವಿಶ್ವಕಪ್ನಲ್ಲಿ ಅತೀ ವೇಗವಾಗಿ ಈ ಸಾಧನೆ ಮಾಡಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.
