IND vs NZ: 650 ಆರು..! ಕ್ರಿಕೆಟ್ ಜಗತ್ತಿನಲ್ಲಿ ಈ ಸಾಧನೆ ಮಾಡಿದ ಏಕೈಕ ಆಟಗಾರ ರೋಹಿತ್ ಶರ್ಮಾ

Updated on: Jan 11, 2026 | 7:56 PM

Rohit Sharma Sixes Record: ನ್ಯೂಜಿಲೆಂಡ್ ವಿರುದ್ಧ ರೋಹಿತ್ ಶರ್ಮಾ ಉತ್ತಮ ಆರಂಭ ಪಡೆದರೂ, ದೊಡ್ಡ ಇನ್ನಿಂಗ್ಸ್ ಆಡಲಿಲ್ಲ. ಆದರೆ ಇದೇ ಪಂದ್ಯದಲ್ಲಿ ಎರಡು ಸಿಕ್ಸರ್ ಸಿಡಿಸಿ, ಏಕದಿನದಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಆಗಿ ಕ್ರಿಸ್ ಗೇಲ್ ಅವರ ವಿಶ್ವ ದಾಖಲೆಯನ್ನು ಮುರಿದರು. ಅಲ್ಲದೆ, ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 650 ಸಿಕ್ಸರ್‌ಗಳನ್ನು ಪೂರೈಸಿದ ಮೊದಲ ಆಟಗಾರ ಎಂಬ ಐತಿಹಾಸಿಕ ಸಾಧನೆಗೆ ಪಾತ್ರರಾದರು.

1 / 6
ವಡೋದರಾದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ರೋಹಿತ್ ಶರ್ಮಾಗೆ ಉತ್ತಮ ಆರಂಭ ಸಿಕ್ಕಿತು. ಆದರೆ ಅದನ್ನು ದೊಡ್ಡ ಇನ್ನಿಂಗ್ಸ್ ಆಗಿ ಪರಿವರ್ತಿಸುವಲ್ಲಿ ಎಡವಿದರು. ಎಂದಿನಂತೆ ಆರಂಭಿಕನಾಗಿ ಕಣಕ್ಕಿಳಿದ ರೋಹಿತ್, ಆರಂಭದಲ್ಲಿ ರನ್​ಗಾಗಿ ಪರದಾಡಿದರೂ, ಆ ಬಳಿಕ ಹೊಡಿಬಡಿ ಆಟಕ್ಕೆ ಮುಂದಾದರು.

2 / 6
ಈ ಮೂಲಕ ರೋಹಿತ್ 29 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಸಹಿತ 26 ರನ್ ಬಾರಿಸಿ ಔಟಾದರು. ಈ ಪಂದ್ಯದಲ್ಲಿ ರೋಹಿತ್ ಬಿಗ್ ಇನ್ನಿಂಗ್ಸ್ ಆಡಲು ಸಾಧ್ಯವಾಗದಿದ್ದರೂ ತಾವು ಬಾರಿಸಿದ ಎರಡು ಸಿಕ್ಸರ್‌ಗಳ ಮೂಲಕ ಏಕದಿನ ಕ್ರಿಕೆಟ್​ನ ನೂತನ ಸಿಕ್ಸರ್ ಕಿಂಗ್ ಎಂಬ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ.

3 / 6
ವಾಸ್ತವವಾಗಿ ರೋಹಿತ್ ಶರ್ಮಾ ಏಕದಿನ ಕ್ರಿಕೆಟ್​ನಲ್ಲಿ ಆರಂಭಿಕನಾಗಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಯೂನಿವರ್ಸಲ್ ಬಾಸ್ ಕ್ರಿಸ್ ಗೇಲ್ ಅವರ ದಾಖಲೆಯನ್ನು ಮುರಿದು ಅಗ್ರಸ್ಥಾನಕ್ಕೇರಿದ್ದಾರೆ. ಗೇಲ್ ತಮ್ಮ ಏಕದಿನ ವೃತ್ತಿಜೀವನದಲ್ಲಿ ಆರಂಭಿಕನಾಗಿ 328 ಸಿಕ್ಸರ್‌ಗಳನ್ನು ಬಾರಿಸಿದ್ದರು.

4 / 6
ಕಿವೀಸ್ ವಿರುದ್ಧದ ಏಕದಿನ ಸರಣಿಗೂ ಮುನ್ನ ರೋಹಿತ್ ಶರ್ಮಾ 327 ಸಿಕ್ಸರ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರು. ಇದೀಗ ಸರಣಿಯ ಮೊದಲ ಪಂದ್ಯದಲ್ಲಿ ಎರಡು ಸಿಕ್ಸರ್‌ಗಳನ್ನು ಬಾರಿಸಿದ ಹಿಟ್​ಮ್ಯಾನ್ ಏಕದಿನ ಕ್ರಿಕೆಟ್​ನಲ್ಲಿ ಆರಂಭಿಕನಾಗಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ರೋಹಿತ್ ಖಾತೆಯಲ್ಲಿ ಇದುವರೆಗೆ 329 ಸಿಕ್ಸರ್‌ಗಳು ದಾಖಲಾಗಿವೆ.

5 / 6
ಈ ಸರಣಿಗೂ ಮುನ್ನ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಏಕದಿನ ಕ್ರಿಕೆಟ್​ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಪಾಕಿಸ್ತಾನದ ಮಾಜಿ ನಾಯಕ ಶಾಹೀದ್ ಅಫ್ರಿದಿ ದಾಖಲೆಯನ್ನು ರೋಹಿತ್ ಶರ್ಮಾ ಮುರಿದು ಅಗ್ರಸ್ಥಾನಕ್ಕೇರಿದ್ದರು. ಅಫ್ರಿದಿ ತಮ್ಮ ಏಕದಿನ ವೃತ್ತಿಜೀವನದಲ್ಲಿ 351 ಸಿಕ್ಸರ್‌ಗಳನ್ನು ಬಾರಿಸಿದ್ದರು. ರೋಹಿತ್ ಈ ಅಂಕಿಗಳನ್ನು ದಾಟುವ ಮೂಲಕ ಆ ದಾಖಲೆಯನ್ನೂ ತಮ್ಮ ಖಾತೆಗೆ ಹಾಕಿಕೊಂಡಿದ್ದರು.

6 / 6
ಇದು ಮಾತ್ರವಲ್ಲದೆ ಈ ಎರಡು ಸಿಕ್ಸರ್‌ಗಳೊಂದಿಗೆ ರೋಹಿತ್ ಶರ್ಮಾ ಅಂತರರಾಷ್ಟ್ರೀಯ ಕ್ರಿಕೆಟ್​ನಲ್ಲಿ 650 ಸಿಕ್ಸರ್‌ಗಳನ್ನು ಪೂರೈಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ ಮೊದಲ ಹಾಗೂ ಏಕೈಕ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.