Rohit Sharma: ಹೊಸ ವಿಶ್ವ ದಾಖಲೆ ಬರೆದ ಹಿಟ್​ಮ್ಯಾನ್ ರೋಹಿತ್ ಶರ್ಮಾ

| Updated By: ಝಾಹಿರ್ ಯೂಸುಫ್

Updated on: Jan 18, 2024 | 6:21 AM

Rohit Sharma Records: ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ರೋಹಿತ್ ಶರ್ಮಾ 69 ಎಸೆತಗಳಲ್ಲಿ 8 ಭರ್ಜರಿ ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ ಅಜೇಯ 121 ರನ್​ ಬಾರಿಸಿದ್ದರು. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 5 ಶತಕ ಬಾರಿಸಿದ ಮೊದಲ ಬ್ಯಾಟರ್ ಎನಿಸಿಕೊಂಡರು.

1 / 7
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಅಫ್ಘಾನಿಸ್ತಾನ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಭರ್ಜರಿ ಸೆಂಚುರಿ ಸಿಡಿಸಿ ಮಿಂಚಿದ್ದರು. ಈ ಶತಕದೊಂದಿಗೆ ಕ್ರಿಕೆಟ್​ ಇತಿಹಾಸದಲ್ಲೇ ಯಾರೂ ಕೂಡ ಮಾಡದ ವಿಶೇಷ ದಾಖಲೆಯೊಂದನ್ನು ಹಿಟ್​ಮ್ಯಾನ್ ತಮ್ಮದಾಗಿಸಿಕೊಂಡಿದ್ದಾರೆ.

2 / 7
ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ರೋಹಿತ್ ಶರ್ಮಾ 69 ಎಸೆತಗಳಲ್ಲಿ 8 ಭರ್ಜರಿ ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ ಅಜೇಯ 121 ರನ್​ ಬಾರಿಸಿದ್ದರು. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 5 ಶತಕ ಬಾರಿಸಿದ ಮೊದಲ ಬ್ಯಾಟರ್ ಎನಿಸಿಕೊಂಡರು.

3 / 7
ಹಾಗೆಯೇ ಮೂರು ಮಾದರಿಯ ಕ್ರಿಕೆಟ್​ನಲ್ಲಿ ಕನಿಷ್ಠ 5 ಶತಕಗಳನ್ನು ಬಾರಿಸಿದ ವಿಶ್ವದ ಮೊದಲ ಬ್ಯಾಟ್ಸ್​ಮನ್ ಎಂಬ ವಿಶ್ವ ದಾಖಲೆಯನ್ನೂ ಕೂಡ ಬರೆದರು. ಅಂದರೆ ರೋಹಿತ್ ಶರ್ಮಾ ಅವರನ್ನು ಹೊರತುಪಡಿಸಿ ವಿಶ್ವದ ಯಾವುದೇ ಬ್ಯಾಟರ್ ಮೂರು ಮಾದರಿಯಲ್ಲಿ ಕನಿಷ್ಠ 5 ಶತಕಗಳನ್ನು ಬಾರಿಸಿಲ್ಲ.

4 / 7
ಹಿಟ್​ಮ್ಯಾನ್ ಏಕದಿನ ಕ್ರಿಕೆಟ್​ನಲ್ಲಿ 31 ಶತಕಗಳನ್ನು ಬಾರಿಸಿದ್ದರೆ, ಟೆಸ್ಟ್ ಕ್ರಿಕೆಟ್​ನಲ್ಲಿ 10 ಸೆಂಚುರಿ ಸಿಡಿಸಿದ್ದಾರೆ. ಇದೀಗ ಟಿ20 ಯಲ್ಲೂ 5 ಶತಕಗಳನ್ನು ಬಾರಿಸಿ ಮೂರು ಮಾದರಿ ಕ್ರಿಕೆಟ್​ನಲ್ಲಿ ಕನಿಷ್ಠ 5 ಶತಕಗಳನ್ನು ಬಾರಿಸಿದ ವಿಶ್ವದ ಏಕೈಕ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

5 / 7
ಇದಲ್ಲದೆ ಈ ಶತಕದೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ನಾಯಕ ಎಂಬ ವಿಶ್ವ ದಾಖಲೆಯನ್ನೂ ಕೂಡ ಹಿಟ್​ಮ್ಯಾನ್ ತಮ್ಮದಾಗಿಸಿಕೊಂಡಿದ್ದಾರೆ. ಅದು ಕೂಡ ಮಾಜಿ ನಾಯಕ ವಿರಾಟ್ ಕೊಹ್ಲಿಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

6 / 7
ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ 50 ಪಂದ್ಯಗಳಲ್ಲಿ ನಾಯಕನಾಗಿ ಕಣಕ್ಕಿಳಿದಿದ್ದಾರೆ. ಈ ವೇಳೆ 1570 ರನ್​ ಕಲೆಹಾಕಿ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ 54 ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸುವ ಮೂಲಕ ರೋಹಿತ್ ಶರ್ಮಾ 1647 ರನ್ ಕಲೆಹಾಕಿ ಟಿ20 ಕ್ರಿಕೆಟ್​​ನಲ್ಲಿ ಅತ್ಯಧಿಕ ರನ್ ಬಾರಿಸಿದ ಕ್ಯಾಪ್ಟನ್ ಎನಿಸಿಕೊಂಡಿದ್ದಾರೆ.

7 / 7
ಒಟ್ಟಿನಲ್ಲಿ ರಣರೋಚಕ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ರೋಹಿತ್ ಶರ್ಮಾ ತಮ್ಮ ಫಾರ್ಮ್​ಗೆ ಮರಳಿದ್ದಾರೆ. ಈ ಮರಳುವಿಕೆಯೊಂದಿಗೆ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿರುವುದು ವಿಶೇಷ.