Rohit Sharma: ಅಶ್ವಿನ್-ಜಡೇಜಾ ಅಲ್ಲ: ಪಂದ್ಯದ ಬಳಿಕ ರೋಹಿತ್ ಶರ್ಮಾ ಹೊಗಳಿದ್ದು ಯಾರನ್ನು ಗೊತ್ತೇ?
India vs Australia 1st Test: ಪಂದ್ಯ ಮುಗಿದ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ ವೇಳೆ ಮಾತನಾಡಿದ ಭಾರತದ ನಾಯಕ ರೋಹಿತ್ ಶರ್ಮಾ ಕೆಲ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಮುಖ್ಯವಾಗಿ ತಂಡದ ಗೆಲುವಿಗೆ ಕಾರಣರಾದ ಜಡೇಜಾ-ಅಶ್ವಿನ್ರನ್ನು ಬಿಟ್ಟು ಮೊಹಮ್ಮದ್ ಶಮಿ ಹಾಗೂ ಮೊಹಮ್ಮದ್ ಸಿರಾಜ್ ಅವರನ್ನು ಹೊಗಳಿದ್ದಾರೆ.
1 / 8
ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಶನಿವಾರ ಮುಕ್ತಾಯಗೊಂಡ ಬಾರ್ಡರ್- ಗವಾಸ್ಕರ್ ಟ್ರೋಫಿಯ ಆಸ್ಟ್ರೇಲಿಯಾ ವಿರುದ್ಧದ ನಡುವಣ ಪ್ರಥಮ ಟೆಸ್ಟ್ ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ಸಾಧಿಸಿ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ. ಟೀಮ್ ಇಂಡಿಯಾ ಸ್ಪಿನ್ ದಾಳಿಗೆ ನಲುಗಿದ ಕಾಂಗರೂ ಪಡೆ ಎರಡನೇ ಇನ್ನಿಂಗ್ಸ್ನಲ್ಲಿ ಕೇವಲ 91 ರನ್ಗೆ ಅಲೌಟ್ ಆಗುವ ಮೂಲಕ ಹೀನಾಯ ಸೋಲು ಕಂಡಿತು.
2 / 8
ಮೊದಲ ಇನ್ನಿಂಗ್ಸ್ ಬೌಲಿಂಗ್ನಲ್ಲಿ ರವೀಂದ್ರ ಜಡೇಜಾ ಮಿಂಚಿದರೆ, ಎರಡನೇ ಇನ್ನಿಂಗ್ಸ್ನಲ್ಲಿ ರವಿಚಂದ್ರನ್ ಅಶ್ವಿನ್ ಮಾರಕವಾಗಿ ಪರಿಣಮಿಸಿದರು. ಇನ್ನಿಂಗ್ಸ್ ಹಾಗೂ 132 ರನ್ಗಳ ಜಯದೊಂದಿಗೆ ಟೀಮ್ ಇಂಡಿಯಾ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ 111 ಅಂಕ ಗಳಿಸಿದೆ.
3 / 8
ಪಂದ್ಯ ಮುಗಿದ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ ವೇಳೆ ಮಾತನಾಡಿದ ಭಾರತದ ನಾಯಕ ರೋಹಿತ್ ಶರ್ಮಾ ಕೆಲ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಮುಖ್ಯವಾಗಿ ತಂಡದ ಗೆಲುವಿಗೆ ಕಾರಣರಾದ ಜಡೇಜಾ-ಅಶ್ವಿನ್ರನ್ನು ಬಿಟ್ಟು ಮೊಹಮ್ಮದ್ ಶಮಿ ಹಾಗೂ ಮೊಹಮ್ಮದ್ ಸಿರಾಜ್ ಅವರನ್ನು ಹೊಗಳಿದ್ದಾರೆ.
4 / 8
ಮೊದಲ ದಿನ ಆಸ್ಟ್ರೇಲಿಯಾ ಬ್ಯಾಟರ್ಗಳ ಪತನ ಶುರುವಾಗಿದ್ದು ಟೀಮ್ ಇಂಡಿಯಾ ವೇಗಿಗಳಿಂದ. ಪಂದ್ಯ ಆರಂಭವಾಗ ಮೂರು ಓವರ್ ವಳಗೆ ಆಸೀಸ್ ಓಪನರ್ಗಳಾದ ಡೇವಿಡ್ ವಾರ್ನರ್ ಹಾಗೂ ಉಸ್ಮಾನ್ ಖ್ವಾಜಾರನ್ನು ಪೆವಿಲಿಯನ್ ಅಟ್ಟಿ ಶಮಿ ಹಾಗೂ ಸಿರಾಜ್ ಎದುರಾಳಿಯ ಮೇಲೆ ಒತ್ತಡ ಹಾಕಿದರು. ಇದು ಪ್ರಮುಖ ಪಾತ್ರವಹಿಸಿತು ಎಂಬುದು ರೋಹಿತ್ ಅಭಿಪ್ರಾಯ.
5 / 8
ಈ ಪಿಚ್ ಸ್ಪಿನ್ನರ್ಗಳಿಗೆ ಹೇಳಿ ಮಾಡಿಸಿದ್ದು ಎಂಬುದು ಗೊತ್ತಿದೆ. ಆದರೆ, ನಮ್ಮ ವೇಗಿಗಳೂ ಯಶಸ್ಸು ಸಾಧಿಸಿದರು. ಆರಂಭದಲ್ಲಿ ಬೌಲಿಂಗ್ ಮಾಡಿ ಎದುರಾಳಿಗರಿಗೆ ಭಯ ಹುಟ್ಟಿಸಿದ್ದು ಸುಳ್ಳಲ್ಲ. ನಮ್ಮ ವೇಗಿಗಳ ಕೊಡುಗೆಯನ್ನು ಮರೆಯುವಂತಿಲ್ಲ. ಅವರು ಪರಿಸ್ಥಿತಿಗೆ ತಕ್ಕಂತೆ ಬೌಲಿಂಗ್ ಪ್ರದರ್ಶನ ತೋರಿದ್ದಾರೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.
6 / 8
ಆಸ್ಟ್ರೇಲಿಯಾನ್ನರು ರನ್ ಗಳಿಸುವ ಒತ್ತಡಕ್ಕೆ ಸಿಲುಕಿದ್ದರು. ಪಂದ್ಯದಲ್ಲಿ ನಮ್ಮ ತಂಡದ ಬೌಲಿಂಗ್ ಸಂಯೋಜನೆ ಉತ್ತಮವಾಗಿತ್ತು. ನಮ್ಮ ಬ್ಯಾಟ್ಸ್‌ಮನ್‌ಗಳು ಸ್ಫೋಟಕ ಆಟ ಪ್ರದರ್ಶಿಸಿದರು. ಸ್ಪಿನ್ನರ್‌ಗಳಿಂದಲೂ ಉತ್ತಮ ಪ್ರದರ್ಶನ ಮೂಡಿಬಂತು - ರೋಹಿತ್ ಶರ್ಮಾ.
7 / 8
ಈ ಪಂದ್ಯದಲ್ಲಿ ಭಾರತ ಪರ ಅತಿ ಹೆಚ್ಚು ಓವರ್ ಬೌಲಿಂಗ್ ಮಾಡಿದ್ದೇ ಅಶ್ವಿನ್-ಜಡೇಜಾ. ಈ ಬಗ್ಗೆ ಮಾತನಾಡಿದ ರೋಹಿತ್, ಇವರಿಬ್ಬರು ಒಂದೊಂದು ದಾಖಲೆಗಾಗಿ ಪೈಪೋಟಿ ನಡೆಸುತ್ತಿದ್ದಾರೆ. ಜಡೇಜಾ ಟೆಸ್ಟ್ ಕ್ರಿಕೆಟ್ನಲ್ಲಿ 249 ವಿಕೆಟ್ ಗಳಿಸಿದ್ದರು. ಅವರು ಒಂದು ವಿಕೆಟ್ ಪಡೆದರೆ 250 ವಿಕೆಟ್ ದಾಖಲೆ ಮಾಡುತ್ತಿದ್ದರು. ಈ ದಾಖಲೆ ನಿರ್ಮಿಸಲು ನನಗೆ ಬೌಲಿಂಗ್ ಕೊಡಿ ಎಂದು ಜಡೇಜಾ ನನ್ನ ಬಳಿ ಬಂದು ಕೇಳುತ್ತಿದ್ದರು ಎಂದು ತಮಾಷೆಯಾಗಿ ಹೇಳಿದ್ದಾರೆ.
8 / 8
ಅಂತೆಯೆ ಆರ್. ಅಶ್ವಿನ್ ಕೂಡ ನನಗೆ ಬೌಲಿಂಗ್ ಕೊಡಿ ಎಂದು ಕೇಳುತ್ತಿದ್ದರು. 4 ವಿಕೆಟ್ ಪಡೆದ ತಕ್ಷಣ ನನಗೆ ಮತ್ತೊಂದು 5 ವಿಕೆಟ್ಗಳ ಗೊಂಚಲು ಪಡೆಯಲು ಅವಕಾಶ ಕೊಡಿ ಎಂದರು. ಇಬ್ಬರೂ ನನಗೆ ಬಾಲ್ ನೀಡಿ ಎಂದು ಪೈಪೋಟಿ ನಡೆಸುತ್ತಿದ್ದರು ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.
Published On - 12:02 pm, Sun, 12 February 23