Rohit Sharma: 3ನೇ ದಿನದಾಟದಲ್ಲಿ ಮೈದಾನಕ್ಕಿಳಿಯದ ರೋಹಿತ್ ಶರ್ಮಾ

| Updated By: ಝಾಹಿರ್ ಯೂಸುಫ್

Updated on: Mar 09, 2024 | 12:49 PM

Rohit Sharma: ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟದಿಂದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊರಗುಳಿದಿದ್ದಾರೆ. ಮೊದಲ ಇನಿಂಗ್ಸ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ಹಿಟ್​ಮ್ಯಾನ್ ಶತಕ ಸಿಡಿಸಿ ಮಿಂಚಿದ್ದರು. ಆದರೆ ಮೂರನೇ ದಿನದಾಟದ ಫೀಲ್ಡಿಂಗ್ ವೇಳೆ ರೋಹಿತ್ ಶರ್ಮಾ ಕಾಣಿಸಿಕೊಂಡಿಲ್ಲ.

1 / 5
ಧರ್ಮಶಾಲಾದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದ 3ನೇ ದಿನದಾಟದಿಂದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಹೊರಗುಳಿದಿದ್ದಾರೆ. 2ನೇ ದಿನದಾಟದಲ್ಲಿ ಶತಕ ಸಿಡಿಸಿ ಮಿಂಚಿದ್ದ ಹಿಟ್​ಮ್ಯಾನ್ ಬೆನ್ನು ನೋವಿನ ಕಾರಣ ಶನಿವಾರ ಮೈದಾನಕ್ಕಿಳಿದಿಲ್ಲ.

2 / 5
ಟೀಮ್ ಇಂಡಿಯಾದ ಮೊದಲ ಇನಿಂಗ್ಸ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ರೋಹಿತ್ ಶರ್ಮಾ 162 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 13 ಫೋರ್​ಗಳೊಂದಿಗೆ 103 ರನ್ ಬಾರಿಸಿದ್ದರು. ಈ ವೇಳೆ ಬೆನ್ನು ನೋವಿನ ಸಮಸ್ಯೆಗೆ ತುತ್ತಾಗಿದ್ದರು. ಇದೇ ಕಾರಣದಿಂದಾಗಿ ಮೂರನೇ ದಿನದಾಟದಲ್ಲಿ ಟೀಮ್ ಇಂಡಿಯಾ ಫೀಲ್ಡಿಂಗ್​ ವೇಳೆ ರೋಹಿತ್ ಶರ್ಮಾ ಕಾಣಿಸಿಕೊಂಡಿಲ್ಲ.

3 / 5
ಇನ್ನು ರೋಹಿತ್ ಶರ್ಮಾ ಅವರ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾವನ್ನು ಉಪನಾಯಕ ಜಸ್​ಪ್ರೀತ್ ಬುಮ್ರಾ ಮುನ್ನಡೆಸುತ್ತಿದ್ದಾರೆ. ಅದರಂತೆ ಬುಮ್ರಾ ನಾಯಕತ್ವದಲ್ಲಿ ಭಾರತ ತಂಡ ಕಣಕ್ಕಿಳಿದಿದೆ. ಅಲ್ಲದೆ ಇಂಗ್ಲೆಂಡ್ ತಂಡದ ದ್ವಿತೀಯ ಇನಿಂಗ್ಸ್​ನಲ್ಲಿ ಭಾರತೀಯ ಬೌಲರ್​ಗಳು ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ.

4 / 5
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್  ಝಾಕ್ ಕ್ರಾಲಿ (79) ಅವರ ಅರ್ಧಶತಕದ ನೆರವಿನಿಂದ ಮೊದಲ ಇನಿಂಗ್ಸ್​ನಲ್ಲಿ 218 ರನ್​ ಕಲೆಹಾಕಿತ್ತು. ಇದಾದ ಬಳಿಕ ಮೊದಲ ಇನಿಂಗ್ಸ್​ ಆರಂಭಿಸಿದ ಟೀಮ್ ಇಂಡಿಯಾ ಪರ ರೋಹಿತ್ ಶರ್ಮಾ (103) ಹಾಗೂ ಶುಭ್​ಮನ್ ಗಿಲ್ (110) ಶತಕ ಸಿಡಿಸಿದ್ದರು.

5 / 5
ಈ ಶತಕಗಳ ನೆರವಿನಿಂದ ಭಾರತ ತಂಡವು ಮೊದಲ ಇನಿಂಗ್ಸ್​ನಲ್ಲಿ 477 ರನ್​ ಕಲೆಹಾಕಿದೆ. ಈ ಮೂಲಕ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 259 ರನ್​ಗಳ ಮುನ್ನಡೆ ಪಡೆದುಕೊಂಡಿದೆ. ಇದೀಗ ಇಂಗ್ಲೆಂಡ್ ದ್ವಿತೀಯ ಇನಿಂಗ್ಸ್​ ಬ್ಯಾಟಿಂಗ್ ಮಾಡುತ್ತಿದೆ. ಅಲ್ಲದೆ ಭೋಜನಾ ವಿರಾಮದ ಮುಕ್ತಾಯದ ವೇಳೆಗೆ ಇಂಗ್ಲೆಂಡ್ ತಂಡ 5 ವಿಕೆಟ್ ಕಳೆದುಕೊಂಡು 103 ರನ್ ಕಲೆಹಾಕಿದೆ.

Published On - 12:26 pm, Sat, 9 March 24