- Kannada News Photo gallery Cricket photos Rohit Sharma has the most international sixes in a country
ಸಿಕ್ಸ್ ಸಿಡಿಸಿಯೇ ವಿಶ್ವ ದಾಖಲೆ ನಿರ್ಮಿಸಿದ ಹಿಟ್ಮ್ಯಾನ್
Rohit Sharma Records: ಈ ಪಂದ್ಯದಲ್ಲಿ 57 ಎಸೆತಗಳನ್ನು ಎದುರಿಸಿದ ಹಿಟ್ಮ್ಯಾನ್ 5 ಫೋರ್ ಹಾಗೂ 6 ಸಿಕ್ಸ್ಗಳೊಂದಿಗೆ 81 ರನ್ ಬಾರಿಸಿದ್ದರು. ಈ ಆರು ಸಿಕ್ಸ್ಗಳೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ಮತ್ತೊಂದು ಮೈಲುಗಲ್ಲನ್ನು ದಾಟಿದ್ದಾರೆ.
Updated on: Sep 27, 2023 | 10:10 PM

ಅಫ್ಘಾನಿಸ್ತಾನ್ ವಿರುದ್ಧ ನಡೆದ ಏಕದಿನ ವಿಶ್ವಕಪ್ನ 9ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಹಿಟ್ಮ್ಯಾನ್ ಈ ಪಂದ್ಯದಲ್ಲಿ ಸಿಕ್ಸ್-ಫೋರ್ಗಳ ಸುರಿಮಳೆಗೈದರು.

ವಿಶೇಷ ಎಂದರೆ ಈ 5 ಸಿಕ್ಸ್ಗಳೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ವಿಶ್ವ ದಾಖಲೆಯನ್ನು ರೋಹಿತ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಈ ದಾಖಲೆ ಯುನಿವರ್ಸ್ ಬಾಸ್ ಕ್ರಿಸ್ ಗೇಲ್ ಹೆಸರಿನಲ್ಲಿತ್ತು. ವೆಸ್ಟ್ ಇಂಡೀಸ್ನ ಸ್ಪೋಟಕ ದಾಂಡಿಗ ಕ್ರಿಸ್ ಗೇಲ್ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಒಟ್ಟು 553 ಸಿಕ್ಸ್ ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು.

ಪರಿಣಾಮ ಕೇವಲ 63 ಎಸೆತಗಳಲ್ಲಿ ಭರ್ಜರಿ ಶತಕ ಪೂರೈಸಿದರು. ಅಷ್ಟೇ ಅಲ್ಲದೆ 84 ಎಸೆತಗಳನ್ನು ಎದುರಿಸಿದ ಹಿಟ್ಮ್ಯಾನ್ ಅಂತಿಮವಾಗಿ 5 ಭರ್ಜರಿ ಸಿಕ್ಸ್ ಹಾಗೂ 16 ಫೋರ್ಗಳೊಂದಿಗೆ 131 ರನ್ ಬಾರಿಸಿ ವಿಕೆಟ್ ಒಪ್ಪಿಸಿದ್ದರು.

ಇದೀಗ ಈ ದಾಖಲೆಯನ್ನು ಉಡೀಸ್ ಮಾಡಿರುವ ರೋಹಿತ್ ಶರ್ಮಾ ಒಟ್ಟು 556 ಅಂತಾರಾಷ್ಟ್ರೀಯ ಸಿಕ್ಸ್ಗಳನ್ನು ಸಿಡಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಕ್ರಿಕೆಟ್ ಅಂಗಳದ ಹೊಸ ಸಿಕ್ಸರ್ ಕಿಂಗ್ ಪಟ್ಟವನ್ನು ಅಲಂಕರಿಸಿದ್ದಾರೆ.

ಇದಕ್ಕೂ ಮುನ್ನ ಈ ದಾಖಲೆ ನ್ಯೂಝಿಲೆಂಡ್ನ ಮಾರ್ಟಿನ್ ಗಪ್ಟಿಲ್ ಹೆಸರಿನಲ್ಲಿತ್ತು. ಗಪ್ಟಿಲ್ ತವರು ಮೈದಾನದಲ್ಲಿ ಒಟ್ಟು 256 ಸಿಕ್ಸ್ಗಳನ್ನು ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು.

ಇದೀಗ ಭಾರತದಲ್ಲೇ 262 ಸಿಕ್ಸ್ ಸಿಡಿಸುವ ಮೂಲಕ ರೋಹಿತ್ ಶರ್ಮಾ ತವರಿನಲ್ಲಿ ಅತ್ಯಧಿಕ ಸಿಕ್ಸರ್ ಬಾರಿಸಿದ ವಿಶ್ವದ ನಂಬರ್ 1 ಬ್ಯಾಟರ್ ಎನಿಸಿಕೊಂಡಿದ್ದಾರೆ.



















