AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಟ್‌ಮ್ಯಾನ್ ಖಾತೆಗೆ ಮತ್ತೆರಡು ವಿಶ್ವದಾಖಲೆ; ರೋಹಿತ್ ಸಾಧನೆ ಮುರಿಯುವುದು ಅಷ್ಟು ಸುಲಭವಲ್ಲ

ರೋಹಿತ್ ಶರ್ಮಾ ಏಕದಿನ ಕ್ರಿಕೆಟ್‌ನಲ್ಲಿ 400 ಸಿಕ್ಸರ್‌ಗಳು ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 700 ಸಿಕ್ಸರ್‌ಗಳ ಐತಿಹಾಸಿಕ ದಾಖಲೆ ನಿರ್ಮಿಸುವ ಸನಿಹದಲ್ಲಿದ್ದಾರೆ. ಈ ಮೈಲಿಗಲ್ಲುಗಳನ್ನು ತಲುಪಿದರೆ, ವಿಶ್ವದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಈ ದಾಖಲೆಗಳು ಭವಿಷ್ಯದಲ್ಲಿ ಮುರಿಯುವುದು ಕಷ್ಟಕರವಾಗಿದೆ. ಇದು ಸಾಧ್ಯವಾಗಬೇಕಾದರೆ ರೋಹಿತ್ ಕಿವೀಸ್ ವಿರುದ್ಧ ಅಬ್ಬರಿಸಬೇಕಿದೆ.

ಪೃಥ್ವಿಶಂಕರ
|

Updated on:Nov 08, 2026 | 8:31 PM

Share
ನ್ಯೂಜಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತೆರಡು ಐತಿಹಾಸಿಕ ದಾಖಲೆಗಳನ್ನು ನಿರ್ಮಿಸುವ ಹೊಸ್ತಿಲಲ್ಲಿ ಇದ್ದಾರೆ. ಈ ಸಾಧನೆ ಮಾಡಿದರೆ ಕ್ರಿಕೆಟ್ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ ವಿಶ್ವದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ರೋಹಿತ್ ಪಾತ್ರರಾಗಲಿದ್ದಾರೆ. ಅದರಲ್ಲೂ ಅವರು ನಿರ್ಮಿಸಲಿರುವ ಒಂದು ದಾಖಲೆ ಮುಂದಿನ ಹಲವು ವರ್ಷಗಳ ಕಾಲ ಮುರಿಯುವುದು ಕಷ್ಟ ಎನ್ನಲಾಗುತ್ತಿದೆ(PC-PTI).

1 / 6
ಹೌದು, ಏಕದಿನ ಕ್ರಿಕೆಟ್‌ನಲ್ಲಿ 400 ಸಿಕ್ಸರ್‌ಗಳ ಗಡಿ ತಲುಪಲು ರೋಹಿತ್ ಶರ್ಮಾ ಅವರಿಗೆ ಇನ್ನು ಕೇವಲ 17 ಸಿಕ್ಸರ್‌ಗಳ ಅಗತ್ಯವಿದೆ. ಸದ್ಯ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಏಕದಿನ ಸರಣಿಯ ಉಳಿದ ಪಂದ್ಯಗಳಲ್ಲಿ ಅಥವಾ ನಂತರ ಶ್ರೀಲಂಕಾ ವಿರುದ್ಧ ತವರಿನಲ್ಲಿ ನಡೆಯಲಿರುವ ಸರಣಿಯಲ್ಲಿ ರೋಹಿತ್ ಈ ಸಾಧನೆ ಮಾಡಿದರೆ, ಏಕದಿನ ಕ್ರಿಕೆಟ್ ಇತಿಹಾಸದಲ್ಲಿ 400 ಸಿಕ್ಸರ್‌ಗಳನ್ನು ಬಾರಿಸಿದ ವಿಶ್ವದ ಮೊದಲ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ(PC-PTI).

2 / 6
ರೋಹಿತ್ ಶರ್ಮಾ ಅವರಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲೂ ಮತ್ತೊಂದು ದೊಡ್ಡ ದಾಖಲೆ ನಿರ್ಮಿಸುವ ಅವಕಾಶವಿದೆ. ಟೆಸ್ಟ್, ಏಕದಿನ ಹಾಗೂ ಟಿ20 ಸೇರಿದಂತೆ ಮೂರು ಮಾದರಿಗಳಲ್ಲಿ ಒಟ್ಟಾರೆ 700 ಸಿಕ್ಸರ್‌ಗಳನ್ನು ಪೂರೈಸಲು ಅವರಿಗೆ ಕೇವಲ 24 ಸಿಕ್ಸರ್‌ಗಳ ಅಗತ್ಯವಿದೆ(PC-PTI).

3 / 6
ಈ ಸಾಧನೆ ಮಾಡಿದರೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 700 ಸಿಕ್ಸರ್‌ಗಳನ್ನು ಬಾರಿಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ಕೀರ್ತಿ ರೋಹಿತ್ ಪಾಲಾಗಲಿದೆ. ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್ ಹಾಗೂ ಏಕದಿನ ಮಾದರಿಯಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ದಾಖಲೆ ಹಿಟ್‌ಮ್ಯಾನ್ ಹೆಸರಿನಲ್ಲಿದೆ. ಇದೀಗ ಮತ್ತೊಂದು ಐತಿಹಾಸಿಕ ಸಾಧನೆ ಅವರ ಸನಿಹದಲ್ಲಿದೆ(PC-PTI).

4 / 6
ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈಗ ತಂಡಗಳು ಆಡುವ ಏಕದಿನ ಪಂದ್ಯಗಳ ಸಂಖ್ಯೆ ಕಡಿಮೆಯಾಗಿದೆ. ಹೀಗಾಗಿ ಏಕದಿನ ಕ್ರಿಕೆಟ್‌ನಲ್ಲಿ 400 ಸಿಕ್ಸರ್‌ಗಳನ್ನು ಬಾರಿಸುವುದು ಯಾವುದೇ ಬ್ಯಾಟರ್‌ಗೆ ದೊಡ್ಡ ಸವಾಲಾಗಲಿದೆ. ಇದರ ಜೊತೆಗೆ ಇತ್ತೀಚಿನ ದಿನಗಳಲ್ಲಿ ಬಹುತೇಕ ಆಟಗಾರರು ಟಿ20 ಕ್ರಿಕೆಟ್‌ಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ(PC-PTI).

5 / 6
ಹೀಗಿರುವಾಗ ದೀರ್ಘಕಾಲ ಏಕದಿನ ಕ್ರಿಕೆಟ್ ಆಡುವುದರ ಜೊತೆಗೆ ನಿರಂತರವಾಗಿ ಸಿಕ್ಸರ್‌ಗಳನ್ನು ಬಾರಿಸುವುದು ಸುಲಭದ ಮಾತಲ್ಲ. ಇದೇ ಕಾರಣಕ್ಕೆ ರೋಹಿತ್ ನಿರ್ಮಿಸಲಿರುವ ಈ ದಾಖಲೆ ಮುಂದಿನ ಹಲವು ವರ್ಷಗಳ ಕಾಲ ಅಜೇಯವಾಗಿ ಉಳಿಯುವ ಸಾಧ್ಯತೆಯಿದೆ(PC-PTI).

6 / 6

Published On - 8:30 pm, Sun, 8 November 26

ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಹೆಚ್​​ಡಿಕೆ ಆರೋಪಕ್ಕೆ ಡಿಸಿ ತಿರುಗೇಟು! ತನಿಖೆ ಮಾಡಿಸ್ತೇನೆ ಎಂದ ಅಧಿಕಾರಿ

ಪಿತೃಕಾರ್ಯದಲ್ಲಿ ಭಾಗವಹಿಸಲು ಪ್ರದೋಷ್​ಗೆ ಸೀಮಿತ ಅನುಮತಿ ನೀಡಿದ ಕೋರ್ಟ್

ಎಥೆನಾಲ್​ ಉತ್ಪಾದಿಸಲು ಹೇಳಿ, ಇದೀಗ ಖರೀದಿಸ್ತಿಲ್ಲ: ಸಚಿವ ಎಂಬಿ ಪಾಟೀಲ್​

ದೇವಿರಮ್ಮ ದರ್ಶನಕ್ಕೆ ಭಕ್ತಸಾಗರ! ಬೆಟ್ಟದ ತುದಿಯಲ್ಲಿ ಕಂಬಿ ಮುರಿದು ದುರಂತ

ಕಿಚ್ಚ ಸುದೀಪ್ ಆಡಿಸಿದ ಆಟಕ್ಕೆ ಬಿಗ್ ಬಾಸ್ ಸ್ಪರ್ಧಿಗಳ ತಲೆ ಗಿರಗಿರ

ಹಾಸನಾಂಬೆ ದರ್ಶನ ಪಡೆದ ಹೆಚ್​ಡಿಕೆ ದಂಪತಿ
ಹಾಸನಾಂಬೆ ದರ್ಶನ ಪಡೆದ ಹೆಚ್​ಡಿಕೆ ದಂಪತಿ
ಕುಟುಂಬ ಸಮೇತ ಹಾಸನಾಂಬೆ ದೇಗುಲಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್

ಬೆಂಗಳೂರಲ್ಲಿ ವಿಮಾನ ಕ್ಯಾನ್ಸಲ್‌ಗೆ ಪ್ರಯಾಣಿಕರು ಗರಂ, ಸಿಬ್ಬಂದಿಗೆ ತರಾಟೆ

ಶಿವಮೊಗ್ಗದ ಬಿಜೆಪಿ ಕಚೇರಿ, ವಿಜಯೇಂದ್ರ ನಿವಾಸದ ಮುಂದೂ ಪೋಸ್ಟರ್​

'ಹೌದು.. ನಾನು ಬಲಿತ ದಲಿತನೇ ಸುಮಾರಣ್ಣ': JDSಗೆ ಕಾಂಗ್ರೆಸ್​​ ಕೌಂಟರ್​