
ನ್ಯೂಜಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತೆರಡು ಐತಿಹಾಸಿಕ ದಾಖಲೆಗಳನ್ನು ನಿರ್ಮಿಸುವ ಹೊಸ್ತಿಲಲ್ಲಿ ಇದ್ದಾರೆ. ಈ ಸಾಧನೆ ಮಾಡಿದರೆ ಕ್ರಿಕೆಟ್ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ ವಿಶ್ವದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ರೋಹಿತ್ ಪಾತ್ರರಾಗಲಿದ್ದಾರೆ. ಅದರಲ್ಲೂ ಅವರು ನಿರ್ಮಿಸಲಿರುವ ಒಂದು ದಾಖಲೆ ಮುಂದಿನ ಹಲವು ವರ್ಷಗಳ ಕಾಲ ಮುರಿಯುವುದು ಕಷ್ಟ ಎನ್ನಲಾಗುತ್ತಿದೆ(PC-PTI).
ಹೌದು, ಏಕದಿನ ಕ್ರಿಕೆಟ್‌ನಲ್ಲಿ 400 ಸಿಕ್ಸರ್‌ಗಳ ಗಡಿ ತಲುಪಲು ರೋಹಿತ್ ಶರ್ಮಾ ಅವರಿಗೆ ಇನ್ನು ಕೇವಲ 17 ಸಿಕ್ಸರ್‌ಗಳ ಅಗತ್ಯವಿದೆ. ಸದ್ಯ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಏಕದಿನ ಸರಣಿಯ ಉಳಿದ ಪಂದ್ಯಗಳಲ್ಲಿ ಅಥವಾ ನಂತರ ಶ್ರೀಲಂಕಾ ವಿರುದ್ಧ ತವರಿನಲ್ಲಿ ನಡೆಯಲಿರುವ ಸರಣಿಯಲ್ಲಿ ರೋಹಿತ್ ಈ ಸಾಧನೆ ಮಾಡಿದರೆ, ಏಕದಿನ ಕ್ರಿಕೆಟ್ ಇತಿಹಾಸದಲ್ಲಿ 400 ಸಿಕ್ಸರ್‌ಗಳನ್ನು ಬಾರಿಸಿದ ವಿಶ್ವದ ಮೊದಲ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ(PC-PTI).
ರೋಹಿತ್ ಶರ್ಮಾ ಅವರಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲೂ ಮತ್ತೊಂದು ದೊಡ್ಡ ದಾಖಲೆ ನಿರ್ಮಿಸುವ ಅವಕಾಶವಿದೆ. ಟೆಸ್ಟ್, ಏಕದಿನ ಹಾಗೂ ಟಿ20 ಸೇರಿದಂತೆ ಮೂರು ಮಾದರಿಗಳಲ್ಲಿ ಒಟ್ಟಾರೆ 700 ಸಿಕ್ಸರ್‌ಗಳನ್ನು ಪೂರೈಸಲು ಅವರಿಗೆ ಕೇವಲ 24 ಸಿಕ್ಸರ್‌ಗಳ ಅಗತ್ಯವಿದೆ(PC-PTI).
ಈ ಸಾಧನೆ ಮಾಡಿದರೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 700 ಸಿಕ್ಸರ್‌ಗಳನ್ನು ಬಾರಿಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ಕೀರ್ತಿ ರೋಹಿತ್ ಪಾಲಾಗಲಿದೆ. ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್ ಹಾಗೂ ಏಕದಿನ ಮಾದರಿಯಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ದಾಖಲೆ ಹಿಟ್‌ಮ್ಯಾನ್ ಹೆಸರಿನಲ್ಲಿದೆ. ಇದೀಗ ಮತ್ತೊಂದು ಐತಿಹಾಸಿಕ ಸಾಧನೆ ಅವರ ಸನಿಹದಲ್ಲಿದೆ(PC-PTI).
ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈಗ ತಂಡಗಳು ಆಡುವ ಏಕದಿನ ಪಂದ್ಯಗಳ ಸಂಖ್ಯೆ ಕಡಿಮೆಯಾಗಿದೆ. ಹೀಗಾಗಿ ಏಕದಿನ ಕ್ರಿಕೆಟ್‌ನಲ್ಲಿ 400 ಸಿಕ್ಸರ್‌ಗಳನ್ನು ಬಾರಿಸುವುದು ಯಾವುದೇ ಬ್ಯಾಟರ್‌ಗೆ ದೊಡ್ಡ ಸವಾಲಾಗಲಿದೆ. ಇದರ ಜೊತೆಗೆ ಇತ್ತೀಚಿನ ದಿನಗಳಲ್ಲಿ ಬಹುತೇಕ ಆಟಗಾರರು ಟಿ20 ಕ್ರಿಕೆಟ್‌ಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ(PC-PTI).
ಹೀಗಿರುವಾಗ ದೀರ್ಘಕಾಲ ಏಕದಿನ ಕ್ರಿಕೆಟ್ ಆಡುವುದರ ಜೊತೆಗೆ ನಿರಂತರವಾಗಿ ಸಿಕ್ಸರ್‌ಗಳನ್ನು ಬಾರಿಸುವುದು ಸುಲಭದ ಮಾತಲ್ಲ. ಇದೇ ಕಾರಣಕ್ಕೆ ರೋಹಿತ್ ನಿರ್ಮಿಸಲಿರುವ ಈ ದಾಖಲೆ ಮುಂದಿನ ಹಲವು ವರ್ಷಗಳ ಕಾಲ ಅಜೇಯವಾಗಿ ಉಳಿಯುವ ಸಾಧ್ಯತೆಯಿದೆ(PC-PTI).
Published On - 8:30 pm, Sun, 8 November 26