ಟೀಮ್ ಇಂಡಿಯಾಗೆ ಆಘಾತ: ರೋಹಿತ್ ಶರ್ಮಾ ಗಾಯಾಳು

|

Updated on: Dec 22, 2024 | 7:05 AM

India vs Australia: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 295 ರನ್​ಗಳ ಜಯ ಸಾಧಿಸಿದರೆ, ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ 10 ವಿಕೆಟ್​ಗಳ ಗೆಲುವು ಕಂಡಿದೆ. ಇನ್ನು ಮೂರನೇ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿತ್ತು. ಇದೀಗ ನಾಲ್ಕನೇ ಟೆಸ್ಟ್ ಪಂದ್ಯಕ್ಕಾಗಿ ಉಭಯ ತಂಡಗಳು ಸಿದ್ಧತೆಯಲ್ಲಿದೆ. ಈ ಸಿದ್ಧತೆಯ ನಡುವೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಗಾಯಗೊಂಡಿದ್ದಾರೆ.

1 / 5
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಗಾಯಗೊಂಡಿದ್ದಾರೆ. ಭಾನುವಾರ ಮೆಲ್ಬೋರ್ನ್​ ಮೈದಾನದಲ್ಲಿ ನಡೆದ ಅಭ್ಯಾಸದ ವೇಳೆ ಹಿಟ್​​ಮ್ಯಾನ್ ಗಾಯಗೊಂಡಿದ್ದು, ಹೀಗಾಗಿ ಅರ್ಧದಲ್ಲೇ ಪ್ರಾಕ್ಟೀಸ್ ನಿಲ್ಲಿಸಿದ್ದಾರೆ.

2 / 5
ನೆಟ್ಸ್​ನಲ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿದ್ದಾಗ ಥ್ರೋಡೌನ್ ಸ್ಪೆಷಲಿಸ್ಟ್ ದಯಾ ಅವರು ರೋಹಿತ್ ಶರ್ಮಾಗೆ ಚೆಂಡೆಸೆಯುತ್ತಿದ್ದರು. ಇದೇ ವೇಳೆ ಚೆಂಡು ಅವರ ಎಡ ಮೊಣಕಾಲಿಗೆ ತಾಗಿದೆ. ಇದರಿಂದ ನೋವಿಗೆ ಒಳಗಾದ ರೋಹಿತ್ ಶರ್ಮಾ ತಕ್ಷಣವೇ ಅಭ್ಯಾಸವನ್ನು ನಿಲ್ಲಿಸಿದ್ದಾರೆ. ಅಲ್ಲದೆ ಆ ಬಳಿಕ ಅವರಿಗೆ ಫಿಸಿಯೋ ಆರೈಕೆ ಮಾಡಿದ್ದಾರೆ.

3 / 5
ಈ ಆರೈಕೆಯ ಹೊರತಾಗಿಯೂ ನೋವಿನ ಕಾರಣ ರೋಹಿತ್ ಶರ್ಮಾ ಅಭ್ಯಾಸವನ್ನು ಮುಂದುವರೆಸಲಿಲ್ಲ. ಅಲ್ಲದೆ ನಿಲ್ಲಲು ಕೂಡ ತಡಕಾಡಿದರು. ಹೀಗಾಗಿ ಭಾನುವಾರದ 2ನೇ ಅವಧಿಯ ಅಭ್ಯಾಸದಿಂದ ರೋಹಿತ್ ಶರ್ಮಾ ಹೊರಗುಳಿದರು. ಇದೀಗ ಹಿಟ್​​ಮ್ಯಾನ್ ಗಾಯಗೊಂಡಿರುವುದು ಟೀಮ್ ಇಂಡಿಯಾದ ಚಿಂತೆಯನ್ನು ಹೆಚ್ಚಿಸಿದೆ.

4 / 5
ಏಕೆಂದರೆ ಬಾಕ್ಸಿಂಗ್ ಡೇ ಟೆಸ್ಟ್ ಶುರುವಾಗಲು ಇನ್ನು ದಿನಗಳು ಮಾತ್ರ ಉಳಿದಿವೆ. ಡಿಸೆಂಬರ್ 26 ರಿಂದ 4ನೇ ಟೆಸ್ಟ್ ಆರಂಭವಾಗಲಿದ್ದು, ಅದಕ್ಕೂ ಮುನ್ನ ರೋಹಿತ್ ಶರ್ಮಾ ಗಾಯಗೊಂಡಿರುವುದು ಆತಂಕವನ್ನುಂಟು ಮಾಡಿದೆ. ಏಕೆಂದರೆ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ತುಂಬಾ ಮಹತ್ವದ್ದು.

5 / 5
ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ಗೇರಲು ಮುಂದಿನ ಎರಡೂ ಪಂದ್ಯಗಳು ತುಂಬಾ ಮುಖ್ಯ. ಇಂತಹ ಸಂದರ್ಭದಲ್ಲಿ ಟೀಮ್ ಇಂಡಿಯಾ ನಾಯಕ ಗಾಯಗೊಂಡಿರುವುದು ಭಾರತ ತಂಡದ ಪಾಲಿಗೆ ಹಿನ್ನಡೆಯನ್ನುಂಟು ಮಾಡಬಹುದು. ಹೀಗಾಗಿ ಮುಂದಿನ ಮೂರು ದಿನಗಳ ಒಳಗೆ ರೋಹಿತ್ ಶರ್ಮಾ ಸಂಪೂರ್ಣವಾಗಿ ಚೇತರಿಸಿಕೊಂಡು ಬಾಕ್ಸಿಂಗ್ ಡೇ ಟೆಸ್ಟ್​ನಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬುದೇ ಈಗ ದೊಡ್ಡ ಪ್ರಶ್ನೆ.

Published On - 7:05 am, Sun, 22 December 24