Virat Kohli RCB: ಮುಂಬೈ ಸೋತ ತಕ್ಷಣ ವಿರಾಟ್ ಕೊಹ್ಲಿ ಬಳಿ ಬಂದು ರೋಹಿತ್ ಶರ್ಮಾ ಮಾಡಿದ್ದೇನು ನೋಡಿ

Rohit Sharma, RCB vs MI: ಐಪಿಎಲ್ 2023 ರ ಪಂದ್ಯದಲ್ಲಿ ಆರ್​ಸಿಬಿ ಗೆಲುವು ಸಾಧಿಸುತ್ತಿದ್ದಂತೆ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಅವರು ವಿರಾಟ್ ಕೊಹ್ಲಿ ಬಳಿ ಬಂದಿದ್ದಾರೆ. ಈ ಸಂದರ್ಭ ಏನಾಯಿತು ನೋಡಿ.

|

Updated on:Apr 03, 2023 | 8:19 AM

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಉತ್ತಮ ಆರಂಭ ಪಡೆದುಕೊಳ್ಳುವಲ್ಲಿ ಎಡವುದು ಮುಂಬೈ ಇಂಡಿಯನ್ಸ್​ಗೆ ಹೊಸದೇನು ಅಲ್ಲ. ಕಳೆದ 11 ಸೀಸನ್​ಗಳಲ್ಲಿ ತಾನು ಆಡಿದ ಮೊದಲ ಪಂದ್ಯದಲ್ಲಿ ಮುಂಬೈ ಸತತವಾಗಿ ಸೋಲುತ್ತಲೇ ಬಂದಿದೆ. ಐಪಿಎಲ್ 2023 ರಲ್ಲಿ ಕೂಡ ಅದು ಮುಂದುವರೆಯಿತು. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ರೋಹಿತ್ ಪಡೆ ಸೋಲುಂಡಿತು.

1 / 8
ವಿರಾಟ್ ಕೊಹ್ಲಿ ಹಾಗೂ ನಾಯಕ ಫಾಫ್ ಡುಪ್ಲೆಸಿಸ್ ಅವರ ಅಮೋಘ ಬ್ಯಾಟಿಂಗ್ ವೈಭವದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ವಿಕೆಟ್​ಗಳ ಜಯ ಸಾಧಿಸುವ ಮೂಲಕ ಟೂರ್ನಿಯಲ್ಲಿ ಮೊದಲ ಪಂದ್ಯ ಗೆದ್ದು ಶುಭಾರಂಭ ಮಾಡಿತು.

2 / 8
ಮುಂಬೈ ನೀಡಿದ್ದ 172 ರನ್​ಗಳ ಟಾರ್ಗೆಟ್ ಬೆನ್ನಟ್ಟಲು ಬಂದ ವಿರಾಟ್ ಕೊಹ್ಲಿ ಹಾಗೂ ಡುಪ್ಲೆಸಿಸ್ ಭರ್ಜರಿ ಬ್ಯಾಟಿಂಗ್ ನಡೆಸಿದರು. ಆರಂಭದಲ್ಲಿ ಫಾಫ್ ಅಬ್ಬರಿಸಿದರೆ ನಂತರ ವಿರಾಟ್ ಸ್ಫೋಟಕ ಬ್ಯಾಟಿಂಗ್ ನಡೆಸಿದರು. ಅದರಲ್ಲೂ ಸಿಕ್ಸರ್ ಮೂಲಕ ಕೊಹ್ಲಿ ವಿನ್ನಿಂಗ್ ಶಾಟ್ ಹೊಡೆದಿದ್ದು ಅದ್ಭುತವಾಗಿತ್ತು.

3 / 8
49 ಎಸೆತಗಳನ್ನು ಎದುರಿಸಿದ ಕೊಹ್ಲಿ 6 ಫೋರ್ ಹಾಗೂ 5 ಸಿಕ್ಸರ್​ಗಳ ಮೂಲಕ ಅಜೇಯ 82 ರನ್ ಚಚ್ಚಿದರು. ಕೊಹ್ಲಿ ಅವರ ಈ ಆಟಕ್ಕೆ ಮನಸೋತ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಆರ್​ಸಿಬಿ ಗೆಲುವು ಸಾಧಿಸುತ್ತಿದ್ದಂತೆ ಅವರ ಬಳಿ ಬಂದು ತಬ್ಬಿಕೊಂಡಿದ್ದಾರೆ. ನಿಮ್ಮ ಆಟ ಅತ್ಯುತ್ತಮವಾಗಿತ್ತು ಎಂದು ಹೇಳಿದ್ದಾರೆ.

4 / 8
ಎದುರಾಳಿ ನಾಯಕ ರೋಹಿತ್ ಶರ್ಮಾ ಅವರು ವಿರಾಟ್ ಕೊಹ್ಲಿ ಬಳಿ ಬಂದು ತಬ್ಬಿಕೊಳ್ಳುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

5 / 8
ಪಂದ್ಯ ಮುಗಿದ ಬಳಿಕ ಮಾತನಾಡಿದ ವಿರಾಟ್ ಕೊಹ್ಲಿ, 4 ವರ್ಷಗಳ ಬಳಿಕ ತವರಿನಲ್ಲಿ ಆಡಿ ಜಯ ಸಾಧಿಸಿದ್ದು ತುಂಬಾ ಖುಷಿ ನೀಡಿದೆ. ಇದಕ್ಕಿಂತ ಉತ್ತಮ ಪಂದ್ಯ ಇದೆಯೇ ಎಂದು ಹೇಳಲು ಸಾಧ್ಯವಿಲ್ಲ. ಮೊದಲು 17 ಓವರ್ ನಮ್ಮ ಬೌಲಿಂಗ್ ಅದ್ಭುತವಾಗಿತ್ತು. ಕೊನೆಯ 3 ಓವರ್​ನ ಕ್ರೆಡಿಟ್ ತಿಲಕ್ ವರ್ಮಾಗೆ ಸಲ್ಲಬೇಕು ಎಂದು ಹೇಳಿದ್ದಾರೆ.

6 / 8
ಚಿನ್ನಸ್ವಾಮಿಯಲ್ಲಿ ಕ್ರೌಡ್ ಮಾತ್ರ ಅದ್ಭುತವಾಗಿತ್ತು. ಸ್ಟೇಡಿಯಂ ಸಂಪೂರ್ಣ ಭರ್ತಿ ಆಗಿದೆ. ನಾವು ಉತ್ತಮ ಆರಂಭ ಪಡೆದುಕೊಳ್ಳುವುದು ಮುಖ್ಯವಾಗಿತ್ತು. ಇದಕ್ಕೆ ಅಭಿಮಾನಿಗಳ ಬೆಂಬಲ ಬೇಕು. ಅದು ಸಿಕ್ಕಿದೆ. ಕರ್ಣ್ ಶರ್ಮಾ ಚೆನ್ನಾಗಿ ಬೌಲಿಂಗ್ ಮಾಡಿದ್ದಾರೆ. ನೆಟ್​ನಲ್ಲಿ ಕೂಡ ಅವರು ನಮಗೆ ಸಿಕ್ಸರ್ ಹೊಡೆಯುವಂತಹ ಬಾಲ್ ಹಾಕುವುದಿಲ್ಲ -  ಕೊಹ್ಲಿ.

7 / 8
8 ವಿಕೆಟ್​ಗಳ ಜಯದೊಂದಿಗೆ ಮುಂಬೈ ಇಂಡಿಯನ್ಸ್ ವಿರುದ್ಧ ಆರ್​ಸಿಬಿ ಆಡಿದ ಕಳೆದ ಆರು ಪಂದ್ಯಗಳ ಪೈಕಿ ಐದರಲ್ಲಿ ಗೆಲುವು ಸಾಧಿಸಿದ ಸಾಧನೆ ಮಾಡಿತು. ಅಲ್ಲದೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮುಂಬೈ ವಿರುದ್ಧ ಮೂರನೇ ಜಯ ತನ್ನದಾಗಿಸಿತು.

8 / 8

Published On - 8:19 am, Mon, 3 April 23

Follow us
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ

Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ

ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?

ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್

ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ

ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ

ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ

ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು

ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ