AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NEP, Asia Cup 2023: ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ರೋಹಿತ್ ಶರ್ಮಾ ಆಡಿದ ಮಾತುಗಳೇನು ಕೇಳಿ

Rohit Sharma in post-match presentation, IND vs NEP: ಏಷ್ಯಾಕಪ್ 2023ರ ಐದನೇ ಪಂದ್ಯದಲ್ಲಿ ನೇಪಾಳ ವಿರುದ್ಧ 10 ವಿಕೆಟ್​ಗಳ ಅಮೋಘ ಜಯ ಸಾಧಿಸಿದ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ ಟೀಮ್ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಏನು ಹೇಳಿದ್ದಾರೆ ಕೇಳಿ.

Vinay Bhat
|

Updated on: Sep 05, 2023 | 7:21 AM

Share
ಏಷ್ಯಾಕಪ್ 2023 ಟೂರ್ನಿಯಲ್ಲಿ ಭಾರತ ಕ್ರಿಕೆಟ್ ತಂಡ ಸೂಪರ್-4 ಹಂತಕ್ಕೆ ಪ್ರವೇಶ ಪಡೆದಿದೆ. ಸೋಮವಾರ ಪಲ್ಲಕೆಲೆ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ನೇಪಾಳ ವಿರುದ್ಧದ ಪಂದ್ಯದಲ್ಲಿ ಡಕ್ವರ್ತ್ ಲೂಯಿಸ್ ನಿಯಮದ ಅನ್ವಯ ಟೀಮ್ ಇಂಡಿಯಾ 10 ವಿಕೆಟ್​ಗಳ ಅಮೋಘ ಗೆಲುವು ಕಂಡಿತು. ಪಂದ್ಯ ಮುಗಿದ ಬಳಿಕ ಮಾತನಾಡಿದ ಭಾರತದ ನಾಯಕ ರೋಹಿತ್ ಶರ್ಮಾ ಏನು ಹೇಳಿದರು ನೋಡಿ.

1 / 9
ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ ಟೀಮ್ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ, ನನ್ನ ಅರ್ಧಶತಕ ನನಗೆ ಖುಷಿ ನೀಡಿದೆ ಎಂದು ಹೇಳಲು ಸಾಧ್ಯವಿಲ್ಲ. ಆರಂಭದಲ್ಲಿ ಕೊಂಚ ಹಿಂಜರಿದೆ, ಆದರೆ ಲಯ ಕಂಡುಕೊಂಡ ನಂತರ ತಂಡಕ್ಕೆ ಜಯ ತಂದುಕೊಡುವ ನಂಬಿಕೆ ಬಂತು ಎಂದು ಹಿಟ್​ಮ್ಯಾನ್ ಹೇಳಿದ್ದಾರೆ.

2 / 9
ಈ ಪಂದ್ಯದಲ್ಲಿ ರೋಹಿತ್ ಅವರ ಫ್ಲಿಕ್-ಸ್ವೀಪ್ ಎಲ್ಲರ ಗಮನ ಸೆಳೆಯಿತು. ಈ ಬಗ್ಗೆ ಮಾತನಾಡಿದ ಅವರು, ಅದು ನಾನು ಬೇಕೆಂದು ಹೊಡೆದ ಶಾಟ್ ಅಲ್ಲ. ಶಾರ್ಟ್ ಫೈನ್ ಮೂಲಕ ಚೆಂಡನ್ನು ಅಟ್ಟುವ ಪ್ರಯತ್ನ ಮಾಡಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ನನ್ನ ಬ್ಯಾಟ್ ಬಹಳಷ್ಟು ಉತ್ತಮವಾಗಿದೆ ಎಂದು ತಮಾಷೆಯಾಗಿ ಉತ್ತರಿಸಿದರು.

3 / 9
ನಾವು ಇಲ್ಲಿಗೆ ಬಂದಾಗ ನಮ್ಮ 15 ಮಂದಿಯ ವಿಶ್ವಕಪ್ ತಂಡ ಹೇಗಿರುತ್ತದೆ ಎಂದು ನಮಗೆ ತಿಳಿದಿತ್ತು, ಏಷ್ಯಾಕಪ್​ನಲ್ಲಿ ನಮಗೆ ಸಮಸ್ಯೆಗಳನ್ನು ಬಗೆ ಹರಿಸಲು ಸಾಧ್ಯವಾಗುವುದಿಲ್ಲ. ಏಕೆಂದರೆ ಇಲ್ಲಿ ಇರುವುದು ಕೇವಲ ಎರಡು ಪಂದ್ಯಗಳು ಮಾತ್ರ. ಆದರೆ ಅದೃಷ್ಟವಶಾತ್ ನಾವು ಮೊದಲ ಪಂದ್ಯದಲ್ಲಿ ಬ್ಯಾಟಿಂಗ್ ಮತ್ತು ಈ ಪಂದ್ಯದಲ್ಲಿ ಬೌಲಿಂಗ್ ಮಾಡಿದ್ದೇವೆ, ಆದ್ದರಿಂದ ಇದು ನಮಗೆ ಸಂಪೂರ್ಣ ಆಟವಾಯಿತು - ರೋಹಿತ್ ಶರ್ಮಾ.

4 / 9
ನಮ್ಮ ತಂಡದಲ್ಲಿ ಇನ್ನೂ ಸಾಕಷ್ಟು ಕೆಲಸ ಮಾಡಬೇಕಿದೆ. ಬಹಳಷ್ಟು ಆಟಗಾರರು ಗಾಯಗಳಿಂದ ಹಿಂತಿರುಗುತ್ತಿದ್ದಾರೆ ಮತ್ತು ಅವರು ಲಯ ಕಂಡುಕೊಳ್ಳಲು ಸಮಯ ಬೇಕಾಗುತ್ತದೆ. ಕಳೆದ ಪಂದ್ಯದಲ್ಲಿ ಹಾರ್ದಿಕ್ ಮತ್ತು ಇಶಾನ್ ಉತ್ತಮ ಪ್ರದರ್ಶನ ನೀಡಿದರು. ಇಂದು ಬೌಲಿಂಗ್ ಸರಿಯಾಗಿದೆ, ಆದರೆ ಫೀಲ್ಡಿಂಗ್ ಕೆಟ್ಟದಾಗಿದೆ, ನಾವು ಇದನ್ನು ಸುಧಾರಿಸಬೇಕಾಗಿದೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

5 / 9
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನೇಪಾಳ ತಂಡವು ಉತ್ತಮ ಆರಂಭ ಪಡೆಯಿತು. ಆರಂಭದಲ್ಲೇ ಭಾರತೀಯರು ತೋರಿದ ಕಳಪೆ ಫೀಲ್ಡಿಂಗ್​ನ ಸಂಪೂರ್ಣ ಲಾಭ ಪಡೆದ ಕುಶಾಲ್ ಭುರ್ಟೆಲ್ (38) ಹಾಗೂ ಆಸಿಫ್ ಶೇಖ್ (58) ಮೊದಲ ವಿಕೆಟ್​ಗೆ 65 ರನ್​ಗಳ ಜೊತೆಯಾಟವಾಡಿದರು. ಈ ಹಂತದಲ್ಲಿ ಸ್ಪಿನ್ ಮೋಡಿ ಮಾಡಿದ ರವೀಂದ್ರ ಜಡೇಜಾ ಮೂರು ವಿಕೆಟ್​ಗಳನ್ನು ಪಡೆದು ನೇಪಾಳ ತಂಡಕ್ಕೆ ಶಾಕ್ ನೀಡಿದರು.

6 / 9
ಆದರೆ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸೋಂಪಾಲ್ ಕಮಿ 56 ಎಸೆತಗಳಲ್ಲಿ 48 ರನ್ ಬಾರಿಸುವ ಮೂಲಕ ತಂಡದ ಮೊತ್ತವನ್ನು 200 ರ ಗಡಿದಾಟಿಸಿದರು. ಅಂತಿಮವಾಗಿ ನೇಪಾಳ 48.2 ಓವರ್​ಗಳಲ್ಲಿ 230 ರನ್​ಗಳಿಗೆ ಆಲೌಟ್ ಆಯಿತು. ಟೀಮ್ ಇಂಡಿಯಾ ಪರ ಜಡೇಜಾ ಹಾಗೂ ಸಿರಾಜ್ ತಲಾ 3 ವಿಕೆಟ್ ಪಡೆದರೆ, ಶಮಿ, ಹಾರ್ದಿಕ್ ಪಾಂಡ್ಯ ಹಾಗೂ ಶಾರ್ದೂಲ್ ಒಂದೊಂದು ವಿಕೆಟ್ ಕಬಳಿಸಿದರು.

7 / 9
231 ರನ್​ಗಳ ಗುರಿ ಪಡೆದ ಟೀಮ್ ಇಂಡಿಯಾ ಬ್ಯಾಟಿಂಗ್ ವೇಳೆ ಮಳೆ ಬಂದಿದ್ದರಿಂದ ಕೆಲ ಕಾಲ ಪಂದ್ಯವು ಸ್ಥಗಿತಗೊಂಡಿತು. ಮಳೆ ನಿಂತ ಬಳಿಕ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ 23 ಓವರ್​ಗಳಲ್ಲಿ ಟೀಮ್ ಇಂಡಿಯಾ 145 ರನ್​ಗಳ ಗುರಿ ನೀಡಲಾಯಿತು. ಈ ಸುಲಭ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾಗೆ  ಶುಭ್​ಮನ್ ಗಿಲ್ ಹಾಗೂ ರೋಹಿತ್ ಶರ್ಮಾ ಉತ್ತಮ ಆರಂಭ ಒದಗಿಸಿದರು.

8 / 9
ಅಂತಿಮ ಹಂತದವರೆಗೆ ಅಜೇಯರಾಗಿ ಉಳಿದ ರೋಹಿತ್ ಶರ್ಮಾ (74) ಹಾಗೂ ಶುಭ್​ಮನ್ ಗಿಲ್ (67) 20.1 ಓವರ್​ಗಳಲ್ಲಿ ತಂಡವನ್ನು ಗುರಿ ಮುಟ್ಟಿಸುವ ಮೂಲಕ ಟೀಮ್ ಇಂಡಿಯಾಗೆ 10 ವಿಕೆಟ್​ಗಳ ಭರ್ಜರಿ ಜಯ ತಂದುಕೊಟ್ಟರು. ಈ ಗೆಲುವಿನ ಮೂಲಕ ಭಾರತ ತಂಡವು ಸೂಪರ್-4 ಹಂತಕ್ಕೆ ತೇರ್ಗಡೆ ಆಗಿದೆ.

9 / 9