357 ರನ್ಗಳ ಕಠಿಣ ಗುರಿ ಬೆನ್ನತ್ತಿದ ಪಾಕಿಸ್ತಾನ ತಂಡದ ಪರ ಫಖರ್ ಝಮಾನ್ 27 ರನ್ ಗಳಿಸಿದ್ದು ಗರಿಷ್ಠ ಸ್ಕೋರ್ ಆಗಿತ್ತು. 128 ರನ್ಗಳಿಗೆ ಇನಿಂಗ್ಸ್ ಅಂತ್ಯಗೊಳಿಸಿತು. ಈ ಮೂಲಕ ಟೀಮ್ ಇಂಡಿಯಾ 228 ರನ್ಗಳ ಅಮೋಘ ಗೆಲುವು ದಾಖಲಿಸಿತು. ಭಾರತದ ಪರ ಕುಲ್ದೀಪ್ ಯಾದವ್ 8 ಓವರ್ಗಳಲ್ಲಿ 25 ರನ್ ನೀಡಿ 5 ವಿಕೆಟ್ ಕಬಳಿಸಿದರೆ, ಬುಮ್ರಾ, ಹಾರ್ದಿಕ್ ಹಾಗೂ ಠಾಕೂರ್ ತಲಾ ಒಂದೊಂದು ವಿಕೆಟ್ ಕಬಳಿಸಿದರು.