AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ind vs Pak, ICC World Cup: ಪಾಕಿಸ್ತಾನ ನೀಡಿದ ಪ್ರದರ್ಶನಕ್ಕೆ ಬೇಸರ ವ್ಯಕ್ತಪಡಿಸಿದ ರೋಹಿತ್ ಶರ್ಮಾ: ಏನಂದ್ರು ನೋಡಿ

Rohit Sharma Post Match Presentation, India vs Pakistan ICC World Cup: ಭಾರತ-ಪಾಕಿಸ್ತಾನ ಐಸಿಸಿ ಏಕದಿನ ವಿಶ್ವಕಪ್ ಪಂದ್ಯ ಮುಗಿದ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೆಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಮುಖ್ಯವಾಗಿ ಪಾಕಿಸ್ತಾನ ತಂಡದ ಬ್ಯಾಟರ್​ಗಳು ನೀಡಿದ ಪ್ರದರ್ಶನ ಬಗ್ಗೆ ಮಾತನಾಡಿದ್ದಾರೆ.

Vinay Bhat
|

Updated on: Oct 14, 2023 | 9:57 PM

Share
ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್​ನ 12ನೇ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಬದ್ಧವೈರಿಗಳ ಕಾದಾಟದಲ್ಲಿ ಸಂಪೂರ್ಣವಾಗಿ ಮೇಲುಗೈ ಸಾಧಿಸಿದ ಟೀಮ್ ಇಂಡಿಯಾ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಿತು.

1 / 7
ಭಾರತ-ಪಾಕ್ ವಿಶ್ವಕಪ್ ಪಂದ್ಯ ಮುಗಿದ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೆಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಮುಖ್ಯವಾಗಿ ತಮ್ಮ ಬೌಲರ್​ಗಳು ನೀಡಿದ ಪ್ರದರ್ಶನ ಹಿಟ್​ಮ್ಯಾನ್ ಕೊಂಡಾಡಿದ್ದಾರೆ.

2 / 7
ನಮ್ಮ ಬೌಲರ್‌ಗಳು ಇಂದು ಕೂಡ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಇದು 190 ರನ್ ಹೊಡೆಯುವ ಪಿಚ್ ಎಂದು ನಾನು ಭಾವಿಸುವುದಿಲ್ಲ. ಒಂದು ಹಂತದಲ್ಲಿ ಪಾಕಿಸ್ತಾನ ತಂಡ 280 ರನ್ ಗಳಿಸಬಹುದು ಎಂದು ನಾವು ಅಂದುಕೊಂಡಿದ್ದೆವು. ಅವರು ಬ್ಯಾಟಿಂಗ್ ಮಾಡಿದ ರೀತಿ ಹಾಗಿತ್ತು ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

3 / 7
ಪಾಕಿಸ್ತಾನ ತಂಡವನ್ನು ಅಲ್ಪ ಮೊತ್ತಕ್ಕೆ ಕುಸಿಯುವಂತೆ ಮಾಡಿದ್ದು ನಮಗೆ ಹೆಮ್ಮೆಯ ವಿಷಯವಾಗಿದೆ. ಯಾರು ಬೌಲಿಂಗ್ ಮಾಡುತ್ತಾರೊ ಅವರು ತಮ್ಮ ಕೆಲಸವನ್ನು ನಿರ್ವಹಿಸುತ್ತಾರೆ. ನಾವು ಆರು ಬೌಲರ್​ಗಳನ್ನು ಕಣಕ್ಕಿಳಿಸಿದೆವು. ನಾಯಕನಾಗಿ ನಾನು ಯಾರಿಗೆ ಬೌಲಿಂಗ್ ಕೊಡಬೇಕು, ಬೌಲಿಂಗ್ ಮಾಡಲು ಯಾರು ಸೂಕ್ತ ವ್ಯಕ್ತಿ ಎಂದು ತಿಳಿಯುವುದು ಮುಖ್ಯ, ಇದು ನನ್ನ ಕೆಲಸ- ರೋಹಿತ್ ಶರ್ಮಾ.

4 / 7
ವಿಶ್ವಕಪ್ ಆರಂಭಕ್ಕೂ ಮುನ್ನ ನಾವು ಸಾಕಷ್ಟು ತಯಾರಿ ಮಾಡಿಕೊಂಡಿದ್ದೆವು. ಯಾರು ಎಲ್ಲಿ ಏನು ಮಾಡಬೇಕೆಂದು ಸ್ಪಷ್ಟವಾಗಿ ಹೇಳಿದ್ದೇವೆ. ಯಾರು ಎಲ್ಲಿ ಬ್ಯಾಟ್ ಮಾಡಲಿದ್ದಾರೆ ಎಂಬ ಬಗ್ಗೆ ಗೊಂದಲಗಳಿಲ್ಲ. ಹೀಗಿದ್ದರೆ ಎಲ್ಲವೂ ಚೆನ್ನಾಗಿ ಕಾಣುತ್ತಿದೆ. ನಾವು ತುಂಬಾ ಉತ್ಸುಕರಾಗಲು ಬಯಸುವುದಿಲ್ಲ. ಸಮತೋಲನದಲ್ಲಿರಲು ಬಯಸುತ್ತೇವೆ ಎಂದು ರೋಹಿತ್ ಹೇಳಿದ್ದಾರೆ.

5 / 7
ಇದೇವೇಳೆ ಮಾತನಾಡಿದ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಝಂ, ನಾವು ಚೆನ್ನಾಗಿ ಬ್ಯಾಟಿಂಗ್ ಆರಂಭಿಸಿದ್ದೇವೆ. ನಾನು, ಇಮಾಮ್ ಮತ್ತು ರಿಜ್ವಾನ್ ಉತ್ತಮ ಲಯದಲ್ಲಿದ್ದೆವು. ಆದರೆ, ಇದ್ದಕ್ಕಿದ್ದಂತೆ ಕುಸಿತ ಕಂಡು ಪಂದ್ಯವನ್ನು ಸರಿಯಾಗಿ ಮುಗಿಸಲಿಲ್ಲ. ನಾವು ಪ್ರಾರಂಭಿಸಿದ ರೀತಿಯಲ್ಲಿ, 280-290 ರನ್ ಅನ್ನು ಟಾರ್ಗೆಟ್ ನೀಡಬಹುದಿತ್ತು. ರೋಹಿತ್ ಶರ್ಮಾ ಅವರ ಅತ್ಯುತ್ತಮ ಇನ್ನಿಂಗ್ಸ್ ಅದ್ಭುತವಾಗಿತ್ತು ಎಂದು ಹೇಳಿದ್ದಾರೆ.

6 / 7
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 42.5 ಓವರ್​ಗಳಲ್ಲಿ 191 ರನ್​ಗಳಿಗೆ ಆಲೌಟ್ ಆಯಿತು. ಬಾಬರ್ ಅಝಂ ಅರ್ಧಶತಕ ಗಳಿಸಿದರು. ಟಾರ್ಗೆಟ್ ಬೆನ್ನಟ್ಟಿದ ಭಾರತ ರೋಹಿತ್ ಶರ್ಮಾ ಅವರ ಸ್ಫೋಟಕ 86 ರನ್ ಹಾಗೂ ಶ್ರೇಯಸ್ ಅಯ್ಯರ್ ಅವರ ಅರ್ಧಶತಕ ನೆರವಿನಿಂದ 30.3 ಓವರ್​ನಲ್ಲಿ ಗೆಲುವು ಕಂಡಿತು.

7 / 7
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ

ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ