IND vs WI: ಭಾರತ-ವೆಸ್ಟ್ ಇಂಡೀಸ್ ಮೊದಲ ಟಿ20 ಪಂದ್ಯದ ರೋಚಕ ಫೋಟೋಗಳು ಇಲ್ಲಿದೆ ನೋಡಿ
TV9 Web | Updated By: Vinay Bhat
Updated on:
Jul 30, 2022 | 11:27 AM
ಏಕದಿನ ಬಳಿಕ ಇದೀಗ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲೂ ಭಾರತ ಪರಾಕ್ರಮ ಮೆರೆದಿದೆ. ಟ್ರಿನಿಡಾಟ್ ನ ಬ್ರಿಯನ್ ಲಾರ ಸ್ಟೇಡಿಯಂನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಬರೋಬ್ಬರಿ 68 ರನ್ ಗಳ ಭರ್ಜರಿ ಜಯ ಸಾಧಿಸಿದೆ.
1 / 7
ಏಕದಿನ ಬಳಿಕ ಇದೀಗ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲೂ ಭಾರತ ಪರಾಕ್ರಮ ಮೆರೆದಿದೆ. ಟ್ರಿನಿಡಾಟ್ ನ ಬ್ರಿಯನ್ ಲಾರ ಸ್ಟೇಡಿಯಂನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಬರೋಬ್ಬರಿ 68 ರನ್ ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ 1-0 ಮುನ್ನಡೆ ಪಡೆದುಕೊಂಡಿದೆ.
2 / 7
ಮೊದಲು ಬ್ಯಾಟ್ ಮಾಡಿದ ಭಾರತ ಉತ್ತಮ ಆರಂಭ ಪಡೆದುಕೊಂಡಿದ್ದು ಬಿಟ್ಟರೆ ನಂತರ ಮಧ್ಯಮ ಕ್ರಮಾಂಕದಲ್ಲಿ ಸಂಪೂರ್ಣ ವೈಫಲ್ಯ ಅನುಭವಿಸಿತು. ರಾಹುಲ್ ಅನುಪಸ್ಥಿತಿಯಲ್ಲಿ ನಾಯಕ ರೋಹಿತ್ ಶರ್ಮಾ ಜೊತೆ ಸೂರ್ಯಕುಮಾರ್ ಯಾದವ್ ಇನ್ನಿಂಗ್ಸ್ ಆರಂಭಿಸಿದರು. ಈ ಜೋಡಿ 4.4 ಓವರ್ ನಲ್ಲಿ 44 ರನ್ ಬಾರಿಸಿತು.
3 / 7
ಸೂರ್ಯ 16 ಎಸೆತಗಳಲ್ಲಿ 24 ರನ್ ಗಳಿಸಿ ಔಟಾದರು. ಇದರ ಬೆನ್ನಲ್ಲೇ ಶ್ರೇಯಸ್ ಅಯ್ಯರ್ ಕೂಡ ಶೂನ್ಯಕ್ಕೆ ನಿರ್ಗಮಿಸಿದರು. ರಿಷಭ್ ಪಂತ್ (14) ಹಾಗೂ ಹಾರ್ದಿಕ್ ಪಾಂಡ್ಯ (1) ಆಟ ಕೂಡ ನಡೆಯಲಿಲ್ಲ. ಇದರ ನಡುವೆ ಏಕಾಂಗಿಯಾಗಿ ರನ್ ಕಲೆಹಾಕುತ್ತಿದ್ದ ರೋಹಿತ್ ಆಕರ್ಷಕ ಅರ್ಧಶತಕ ಸಿಡಿಸಿ ಮಿಂಚಿದರು. ಆದರೆ, 44 ಎಸೆತಗಳಲ್ಲಿ 7 ಫೋರ್, 2 ಸಿಕ್ಸರ್ ಬಾರಿಸಿ 64 ರನ್ ಗಳಿಸಿ ಹಿಟ್ ಮ್ಯಾನ್ ಕೂಡ ಬ್ಯಾಟ್ ಕೆಳಗಿಟ್ಟರು.
4 / 7
ರವೀಂದ್ರ ಜಡೇಜಾ 16 ರನ್ ಗಳಿಸಿದರಷ್ಟೆ. ಅಂತಿಮ ಹಂತದಲ್ಲಿ ಕ್ರೀಸ್ ಗೆ ಬಂದ ಕಾರ್ತಿಕ್ ಸ್ಫೋಟಕ ಬ್ಯಾಟಿಂಗ್ ನಡಸಿ ತಂಡಕ್ಕೆ ಆಸರೆಯಾದರು. ಶ್ರೀಆರ್. ಅಶ್ವಿನ್ (13*) ಕೂಡ ಇವರಿಗೆ ಸಾಥ್ ನೀಡಿದರು. ಪರಿಣಾಮ ಭಾರತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 190 ರನ್ ಗಳಿಸಿತು.
5 / 7
ಟಾರ್ಗೆಟ್ ಬೆನ್ನಟ್ಟಿದ ವೆಸ್ಟ್ ಇಂಡೀಸ್ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 122 ರನ್ ಗಳಿಸಲಷ್ಟೇ ಶಕ್ತವಾಯಿತು. ತಂಡದ ಪರ ಶಮರ್ ಬ್ರೂಕ್ಸ್ 20 ಹಾಗೂ ಬೌಲರ್ ಕೀಮೊ ಪೌಲ್ 19 ರನ್ ಗಳಿಸಿದ್ದೇ ಹೆಚ್ಚು.
6 / 7
ಭಾರತ ಪರ ಅರ್ಶ್ ದೀಪ್ ಸಿಂಗ್, ಆರ್. ಅಶ್ವಿನ್ ಮತ್ತು ರವಿ ಬಿಷ್ಟೋಯ್ ತಲಾ 2 ವಿಕೆಟ್ ಕಿತ್ತರೆ, ಭುವನೇಶ್ವರ್ ಕುಮಾರ್ ಮತ್ತು ಜಡೇಜಾ 1 ವಿಕೆಟ್ ಪಡೆದರು.
7 / 7
ವಿಕೆಟ್ ಪಡೆದಾಗ ಸಂಭ್ರಮಿಸುತ್ತಿರುವ ರವಿ ಬಿಷ್ಣೋಯಿ.