- Kannada News Photo gallery Cricket photos Rohit Sharma lead Team India practising at the Gabba for ICC Mens T20 World Cup 2022
T20 World Cup: ಗಬ್ಬಾದಲ್ಲಿ ಟೀಮ್ ಇಂಡಿಯಾ ಆಟಗಾರರ ಭರ್ಜರಿ ಅಭ್ಯಾಸ: ಪೋಟೋ ನೋಡಿ
Team India: ಐಸಿಸಿ ಟಿ20 ವಿಶ್ವಕಪ್ 2022 ರಲ್ಲಿ ಭಾರತ ತಂಡ ಅಕ್ಟೋಬರ್ 23 ರಂದು ಮೆಲ್ಬೋರ್ನ್ ಸ್ಟೇಡಿಯಂನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಆಡುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ ಭರ್ಜರಿ ಅಭ್ಯಾಸ ನಡೆಸುತ್ತಿದೆ.
Updated on:Oct 17, 2022 | 9:54 AM

ಐಸಿಸಿ ಟಿ20 ವಿಶ್ವಕಪ್ 2022 ರಲ್ಲಿ (T20 World Cup) ಭಾರತ ತಂಡ ಅಕ್ಟೋಬರ್ 23 ರಂದು ಮೆಲ್ಬೋರ್ನ್ ಸ್ಟೇಡಿಯಂನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಆಡುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ ಭರ್ಜರಿ ಅಭ್ಯಾಸ ನಡೆಸುತ್ತಿದೆ.

ಈಗಾಗಲೇ ಪರ್ತ್ನಲ್ಲಿ ವೆಸ್ಟರ್ನ್ ಆಸ್ಟ್ರೇಲಿಯಾ ವಿರುದ್ಧ ನಡೆದಿರುವ ಎರಡು ಅನಧಿಕೃತ ಅಭ್ಯಾಸ ಪಂದ್ಯದಲ್ಲಿ ಭಾರತ ಸೋಲು-ಗೆಲುವಿನ ರುಚಿ ಕಂಡಿದೆ. ಇದೀಗ ಗಬ್ಬಾಕ್ಕೆ ಬಂದಿರುವ ಭಾರತ ಇಂದು ಆ್ಯರೋನ್ ಫಿಂಚ್ ನಾಯಕತ್ವದ ಆಸ್ಟ್ರೇಲಿಯಾ ವಿರುದ್ಧ ಅಧಿಕೃತ ವಾರ್ಮ್-ಅಪ್ ಮ್ಯಾಚ್ ಆಡುತ್ತಿದೆ.

ಪ್ರ್ಯಾಕ್ಟೀಸ್ ಸೆಷನ್ನಲ್ಲಿ ಹಿರಿಯ ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್ (Dinesh Karthik) ಅವರು ಯುವ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ಗೆ ಬ್ಯಾಟಿಂಗ್ ಟಿಪ್ಸ್ ನೀಡುತ್ತಿರುವುದು ಕಂಡುಬಂದಿದೆ.

ಟೀಮ್ ಇಂಡಿಯಾ ಪ್ಲೇಯರ್ಸ್ ಬ್ಯಾಟಿಂಗ್, ಬೌಲಿಂಗ್, ಫೀಲ್ಡಿಂಗ್ ಅಭ್ಯಾಸ ಮಾಡುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ಸ್ಟ್ಯಾಂಡ್ ಬೈ ಬೌಲರ್ ಆಗಿರುವ ಶಾರ್ದೂಲ್ ಠಾಕೂರ್ ಕೂಡ ಬ್ಯಾಟರ್ಗಳಿಗೆ ಬೌಲಿಂಗ್ ಮಾಡಿದರು.

ಟಿ20 ವಿಶ್ವಕಪ್ಗೆ ಮುಖ್ಯ ಆಟಗಾರನಾಗಿ ಆಯ್ಕೆಯಾಗದ ಮೊಹಮ್ಮದ್ ಶಮಿ ಬಳಿಕ ಜಸ್ಪ್ರೀತ್ ಬುಮ್ರಾ ಅಲಭ್ಯತೆಯಲ್ಲಿ ತಂಡ ಸೇರಿಕೊಂಡಿದ್ದು ಕಠಿಣ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

ವಿರಾಟ್ ಕೊಹ್ಲಿ ಮೈದಾನದಲ್ಲಿ ತಮಾಷೆ ಮಾಡುತ್ತಾ ಅಭ್ಯಾಸ ನಡೆಸುತ್ತಿರುವುದು ಕಂಡುಬಂತು.
Published On - 9:54 am, Mon, 17 October 22
