ಪರ್ತ್ ಟೆಸ್ಟ್ ನಡುವೆ ಟೀಮ್ ಇಂಡಿಯಾ ಸೇರಲಿರುವ ರೋಹಿತ್ ಶರ್ಮಾ
Australia vs India Test: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯವು ಪರ್ತ್ನಲ್ಲಿ ನಡೆಯುತ್ತಿದ್ದರೆ, 2ನೇ ಪಂದ್ಯವು ಡಿಸೆಂಬರ್ 6 ರಿಂದ ಅಡಿಲೇಡ್ನಲ್ಲಿ ಶುರುವಾಗಲಿದೆ. ಹಾಗೆಯೇ 3ನೇ ಪಂದ್ಯ ಡಿಸೆಂಬರ್ 14 ರಿಂದ ಬ್ರಿಸ್ಬೇನ್ ನಲ್ಲಿ ಜರುಗಲಿದೆ. ಡಿಸೆಂಬರ್ 26 ರಿಂದ ಮೆಲ್ಬೋರ್ನ್ನಲ್ಲಿ ಬಾಕ್ಸಿಂಗ್ ಡೇ ಟೆಸ್ಟ್ ನಡೆಯಲಿದ್ದು, ಸಿಡ್ನಿಯಲ್ಲಿ ಜರುಗಲಿರುವ ಕೊನೆಯ ಟೆಸ್ಟ್ ಪಂದ್ಯ ಜನವರಿ 3 ರಿಂದ ಆರಂಭವಾಗಲಿದೆ.
1 / 5
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಆಸ್ಟ್ರೇಲಿಯಾಗೆ ತೆರಳಿದ್ದಾರೆ. ಶನಿವಾರ ರಾತ್ರಿ ರೋಹಿತ್ ಶರ್ಮಾ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಆಸ್ಟ್ರೇಲಿಯಾಗೆ ತೆರಳಿದ್ದು, ಭಾನುವಾರ ಟೀಮ್ ಇಂಡಿಯಾವನ್ನು ಕೂಡಿಕೊಳ್ಳುವ ಸಾಧ್ಯತೆಯಿದೆ.
2 / 5
ಎರಡನೇ ಮಗುವಿನ ಜನನದ ಹಿನ್ನಲೆ ರೋಹಿತ್ ಶರ್ಮಾ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದರು. ಇದೀಗ ಕಾಂಗರೂ ನಾಡಿಗೆ ತೆರಳಿರುವ ಹಿಟ್ಮ್ಯಾನ್ ಡಿಸೆಂಬರ್ 6 ರಿಂದ ಶುರುವಾಗಲಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ.
3 / 5
ರೋಹಿತ್ ಶರ್ಮಾ ಅಲಭ್ಯೆಯ ಕಾರಣ ಇದೀಗ ಪರ್ತ್ ಟೆಸ್ಟ್ನಲ್ಲಿ ಟೀಮ್ ಇಂಡಿಯಾವನ್ನು ಉಪನಾಯಕ ಜಸ್ಪ್ರೀತ್ ಬುಮ್ರಾ ಮುನ್ನಡೆಸುತ್ತಿದ್ದಾರೆ. ಹಾಗೆಯೇ ಹಿಟ್ಮ್ಯಾನ್ ಬದಲಿಗೆ ತಂಡದಲ್ಲಿ ದೇವದತ್ ಪಡಿಕ್ಕಲ್ ಸ್ಥಾನ ಪಡೆದಿದ್ದಾರೆ.
4 / 5
ಇದೀಗ ಆಸ್ಟ್ರೇಲಿಯಾಗೆ ತೆರಳಿರುವ ರೋಹಿತ್ ಶರ್ಮಾ ಮೊದಲ ಟೆಸ್ಟ್ ಪಂದ್ಯದ ನಡುವೆ ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದು, ಹೀಗಾಗಿ ದ್ವಿತೀಯ ಟೆಸ್ಟ್ ಪಂದ್ಯದಿಂದ ದೇವದತ್ ಪಡಿಕ್ಕಲ್ ಹೊರಬೀಳುವುದು ಖಚಿತ ಎಂದೇ ಹೇಳಬಹುದು. ಹಾಗೆಯೇ ಉಳಿದ 4 ಪಂದ್ಯಗಳಲ್ಲಿ ರೋಹಿತ್ ಶರ್ಮಾ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.
5 / 5
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ದೇವ್ದತ್ ಪಡಿಕ್ಕಲ್.