ಟೀಮ್ ಇಂಡಿಯಾದಿಂದ ರೋಹಿತ್ ಶರ್ಮಾ ಕಿಕ್​ ಔಟ್ ಬಹುತೇಕ ಖಚಿತ..!

Rohit Sharma: ಟೆಸ್ಟ್​ ಕ್ರಿಕೆಟ್​ನಲ್ಲಿ ರೋಹಿತ್ ಶರ್ಮಾ ಅವರ ಕಳಪೆ ಪ್ರದರ್ಶನ ಮುಂದುವರೆದಿದೆ. ಕಳೆದ 10 ಇನಿಂಗ್ಸ್​ನಲ್ಲಿ ಹಿಟ್​​ಮ್ಯಾನ್ ಕ್ರಮವಾಗಿ 3, 18, 11, 8, 0, 2, 52, 23, 8 ಮತ್ತು 6 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಕಳಪೆ ಪ್ರದರ್ಶನದ ಹೊರತಾಗಿಯೂ ನಾಯಕತ್ವದಡಿಯಲ್ಲಿ ಅವರು ಪ್ಲೇಯಿಂಗ್ ಇಲೆವೆನ್​​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 09, 2024 | 10:09 AM

ಟಿ20 ವಿಶ್ವಕಪ್​​ ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಚುಟುಕು ಮಾದರಿ ಕ್ರಿಕೆಟ್​​ಗೆ ವಿದಾಯ ಹೇಳಿದ್ದರು. ಇದಾಗ್ಯೂ ಹಿಟ್​​ಮ್ಯಾನ್ ಏಕದಿನ ಹಾಗೂ ಟೆಸ್ಟ್​ನಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದರು. ಇದಕ್ಕೆ ಮುಖ್ಯ ಕಾರಣ ಮುಂಬರುವ ಚಾಂಪಿಯನ್ಸ್ ಟ್ರೋಫಿ ಹಾಗೂ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್ ಪಂದ್ಯ.

1 / 6
ಈ ಎರಡು ಟೂರ್ನಿಗಳ ಬಳಿಕ ರೋಹಿತ್ ಶರ್ಮಾ ಭಾರತ ತಂಡದಿಂದ ಹೊರಬೀಳುವುದು ಬಹುತೇಕ ಖಚಿತ. ಏಕೆಂದರೆ ಮುಂದಿನ ವರ್ಷ ಹಿಟ್​​ಮ್ಯಾನ್ 38ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಹೀಗಾಗಿ ಅವರನ್ನು ಎರಡು ತಂಡಗಳ ನಾಯಕತ್ವದಿಂದ ಕೆಳಗಿಳಿಸಿ ಹೊಸ ಕ್ಯಾಪ್ಟನ್ ಅನ್ನು ಆಯ್ಕೆ ಮಾಡಲು ಈಗಾಗಲೇ ಬಿಸಿಸಿಐ ಆಯ್ಕೆ ಸಮಿತಿ ಚರ್ಚಿಸಿದೆ.

2 / 6
ಒಂದು ವೇಳೆ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್-ಗವಾಸ್ಕರ್ ಸರಣಿ ಸೋತರೆ, ಟೆಸ್ಟ್ ತಂಡದಿಂದ ನಾಯಕತ್ವದಿಂದ ರೋಹಿತ್ ಶರ್ಮಾ ಅವರನ್ನು ಕೆಳಗಿಳಿಸುವುದು ಖಚಿತ. ಏಕೆಂದರೆ ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ಪಂದ್ಯವನ್ನು ಮುಂದಿಟ್ಟುಕೊಂಡು ಹಿಟ್​​ಮ್ಯಾನ್ ಅವರನ್ನು ಟೆಸ್ಟ್​ನಲ್ಲಿ ನಾಯಕರಾಗಿ ಈವರೆಗೆ ಮುಂದುವರೆಸಲಾಗಿದೆ.

3 / 6
ಅತ್ತ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​​ಗೆ ಪ್ರವೇಶಿಸುವಲ್ಲಿ ಟೀಮ್ ಇಂಡಿಯಾ ವಿಫಲವಾದರೆ ರೋಹಿತ್ ಶರ್ಮಾ ಅವರ ತಲೆದಂಡವಾಗಲಿದೆ. ಅಲ್ಲದೆ ಜಸ್​​ಪ್ರೀತ್ ಬುಮ್ರಾ ಅಥವಾ ರಿಷಭ್ ಪಂತ್​​ಗೆ ಟೆಸ್ಟ್ ತಂಡದ ನಾಯಕತ್ವ ನೀಡುವ ಬಗ್ಗೆ ಚರ್ಚಿಸಲಾಗಿದೆ ಎಂದು ವರದಿಯಾಗಿದೆ.

4 / 6
ಹಾಗೆಯೇ 2025ರ ಚಾಂಪಿಯನ್ಸ್ ಟ್ರೋಫಿ ಬಳಿಕ ಏಕದಿನ ತಂಡದಿಂದಲೂ ರೋಹಿತ್ ಶರ್ಮಾ ಹೊರಬೀಳಲಿದ್ದಾರೆ. ಅಲ್ಲದೆ ಏಕದಿನ ತಂಡಕ್ಕೂ ಹೊಸ ನಾಯಕನನ್ನು ಆಯ್ಕೆ ಮಾಡಲಾಗುತ್ತದೆ. ಇದೇ ಕಾರಣದಿಂದಾಗಿ ಶುಭ್​​ಮನ್ ಗಿಲ್ ಅವರನ್ನು ಏಕದಿನ ತಂಡದ ಉಪನಾಯಕನಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

5 / 6
ಹೀಗಾಗಿ ಚಾಂಪಿಯನ್ಸ್ ಟ್ರೋಫಿ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಬಳಿಕ ಟೀಮ್ ಇಂಡಿಯಾದಿಂದ ರೋಹಿತ್ ಶರ್ಮಾ ಹೊರಬೀಳುವುದು ಖಚಿತ. ಅಲ್ಲದೆ ಮುಂಬರುವ ಐಸಿಸಿ ಟೂರ್ನಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ತಂಡದಲ್ಲೂ ಮಹತ್ವದ ಬದಲಾವಣೆ ಕಂಡು ಬರಲಿದೆ.

6 / 6
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ