ಟೀಮ್ ಇಂಡಿಯಾದಿಂದ ರೋಹಿತ್ ಶರ್ಮಾ ಕಿಕ್ ಔಟ್ ಬಹುತೇಕ ಖಚಿತ..!
Rohit Sharma: ಟೆಸ್ಟ್ ಕ್ರಿಕೆಟ್ನಲ್ಲಿ ರೋಹಿತ್ ಶರ್ಮಾ ಅವರ ಕಳಪೆ ಪ್ರದರ್ಶನ ಮುಂದುವರೆದಿದೆ. ಕಳೆದ 10 ಇನಿಂಗ್ಸ್ನಲ್ಲಿ ಹಿಟ್ಮ್ಯಾನ್ ಕ್ರಮವಾಗಿ 3, 18, 11, 8, 0, 2, 52, 23, 8 ಮತ್ತು 6 ರನ್ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಕಳಪೆ ಪ್ರದರ್ಶನದ ಹೊರತಾಗಿಯೂ ನಾಯಕತ್ವದಡಿಯಲ್ಲಿ ಅವರು ಪ್ಲೇಯಿಂಗ್ ಇಲೆವೆನ್ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
1 / 6
ಟಿ20 ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಚುಟುಕು ಮಾದರಿ ಕ್ರಿಕೆಟ್ಗೆ ವಿದಾಯ ಹೇಳಿದ್ದರು. ಇದಾಗ್ಯೂ ಹಿಟ್ಮ್ಯಾನ್ ಏಕದಿನ ಹಾಗೂ ಟೆಸ್ಟ್ನಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದರು. ಇದಕ್ಕೆ ಮುಖ್ಯ ಕಾರಣ ಮುಂಬರುವ ಚಾಂಪಿಯನ್ಸ್ ಟ್ರೋಫಿ ಹಾಗೂ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ.
2 / 6
ಈ ಎರಡು ಟೂರ್ನಿಗಳ ಬಳಿಕ ರೋಹಿತ್ ಶರ್ಮಾ ಭಾರತ ತಂಡದಿಂದ ಹೊರಬೀಳುವುದು ಬಹುತೇಕ ಖಚಿತ. ಏಕೆಂದರೆ ಮುಂದಿನ ವರ್ಷ ಹಿಟ್ಮ್ಯಾನ್ 38ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಹೀಗಾಗಿ ಅವರನ್ನು ಎರಡು ತಂಡಗಳ ನಾಯಕತ್ವದಿಂದ ಕೆಳಗಿಳಿಸಿ ಹೊಸ ಕ್ಯಾಪ್ಟನ್ ಅನ್ನು ಆಯ್ಕೆ ಮಾಡಲು ಈಗಾಗಲೇ ಬಿಸಿಸಿಐ ಆಯ್ಕೆ ಸಮಿತಿ ಚರ್ಚಿಸಿದೆ.
3 / 6
ಒಂದು ವೇಳೆ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್-ಗವಾಸ್ಕರ್ ಸರಣಿ ಸೋತರೆ, ಟೆಸ್ಟ್ ತಂಡದಿಂದ ನಾಯಕತ್ವದಿಂದ ರೋಹಿತ್ ಶರ್ಮಾ ಅವರನ್ನು ಕೆಳಗಿಳಿಸುವುದು ಖಚಿತ. ಏಕೆಂದರೆ ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯವನ್ನು ಮುಂದಿಟ್ಟುಕೊಂಡು ಹಿಟ್ಮ್ಯಾನ್ ಅವರನ್ನು ಟೆಸ್ಟ್ನಲ್ಲಿ ನಾಯಕರಾಗಿ ಈವರೆಗೆ ಮುಂದುವರೆಸಲಾಗಿದೆ.
4 / 6
ಅತ್ತ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೆ ಪ್ರವೇಶಿಸುವಲ್ಲಿ ಟೀಮ್ ಇಂಡಿಯಾ ವಿಫಲವಾದರೆ ರೋಹಿತ್ ಶರ್ಮಾ ಅವರ ತಲೆದಂಡವಾಗಲಿದೆ. ಅಲ್ಲದೆ ಜಸ್ಪ್ರೀತ್ ಬುಮ್ರಾ ಅಥವಾ ರಿಷಭ್ ಪಂತ್ಗೆ ಟೆಸ್ಟ್ ತಂಡದ ನಾಯಕತ್ವ ನೀಡುವ ಬಗ್ಗೆ ಚರ್ಚಿಸಲಾಗಿದೆ ಎಂದು ವರದಿಯಾಗಿದೆ.
5 / 6
ಹಾಗೆಯೇ 2025ರ ಚಾಂಪಿಯನ್ಸ್ ಟ್ರೋಫಿ ಬಳಿಕ ಏಕದಿನ ತಂಡದಿಂದಲೂ ರೋಹಿತ್ ಶರ್ಮಾ ಹೊರಬೀಳಲಿದ್ದಾರೆ. ಅಲ್ಲದೆ ಏಕದಿನ ತಂಡಕ್ಕೂ ಹೊಸ ನಾಯಕನನ್ನು ಆಯ್ಕೆ ಮಾಡಲಾಗುತ್ತದೆ. ಇದೇ ಕಾರಣದಿಂದಾಗಿ ಶುಭ್ಮನ್ ಗಿಲ್ ಅವರನ್ನು ಏಕದಿನ ತಂಡದ ಉಪನಾಯಕನಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
6 / 6
ಹೀಗಾಗಿ ಚಾಂಪಿಯನ್ಸ್ ಟ್ರೋಫಿ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದ ಬಳಿಕ ಟೀಮ್ ಇಂಡಿಯಾದಿಂದ ರೋಹಿತ್ ಶರ್ಮಾ ಹೊರಬೀಳುವುದು ಖಚಿತ. ಅಲ್ಲದೆ ಮುಂಬರುವ ಐಸಿಸಿ ಟೂರ್ನಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ತಂಡದಲ್ಲೂ ಮಹತ್ವದ ಬದಲಾವಣೆ ಕಂಡು ಬರಲಿದೆ.