IND vs AUS: 2193 ದಿನಗಳ ನಂತರ ರೋಹಿತ್ ಟೆಸ್ಟ್ ವೃತ್ತಿಜೀವನದಲ್ಲಿ ವಿಚಿತ್ರ ಕಾಕತಾಳೀಯ

|

Updated on: Dec 06, 2024 | 12:47 PM

IND vs AUS: ಅಡಿಲೇಡ್‌ನಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ 2193 ದಿನಗಳ ನಂತರ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದಾರೆ. ಇದೇ ಅಡಿಲೇಡ್‌ನಲ್ಲಿ 2018ರಲ್ಲಿ ಕೊನೆಯ ಬಾರಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ್ದರು. ಇದೀಗ ಅದೇ ಅಡಿಲೇಡ್​ನಲ್ಲಿ ರೋಹಿತ್ 6ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ್ದಾರೆ.

1 / 6
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯ ಅಡಿಲೇಡ್‌ನಲ್ಲಿ ನಡೆಯುತ್ತಿದೆ. ಇದು ಡೇ ನೈಟ್ ಟೆಸ್ಟ್ ಆಗಿದ್ದು, ಪಿಂಕ್ ಚೆಂಡಿನೊಂದಿಗೆ ಆಡಲಾಗುತ್ತಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಬರೋಬ್ಬರು 2193 ದಿನಗಳ ನಂತರ ಟೆಸ್ಟ್‌ನಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದಾರೆ.

2 / 6
ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಸಂಬಂಧಿಸಿದಂತೆ ರೋಹಿತ್‌ ಅವರ ಟೆಸ್ಟ್ ವೃತ್ತಿಜೀವನದಲ್ಲಿ ವಿಚಿತ್ರ ಕಾಕತಾಳೀಯವೂ ಸಂಭವಿಸಿದೆ. ವಾಸ್ತವವಾಗಿ ರೋಹಿತ್ ಶರ್ಮಾ ಟೆಸ್ಟ್​ನಲ್ಲಿ ಕೊನೆಯ ಬಾರಿಗೆ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ್ದು ಕೂಡ ಇದೇ ಅಡಿಲೇಡ್ ಟೆಸ್ಟ್‌ನಲ್ಲಿ. ಹಿಟ್‌ಮ್ಯಾನ್ 2018 ರಲ್ಲಿ ಟೆಸ್ಟ್‌ನಲ್ಲಿ ಮಧ್ಯಮ ಕ್ರಮಾಂಕದಲ್ಲಿ ಕೊನೆಯ ಬಾರಿಗೆ ಬ್ಯಾಟ್ ಮಾಡಿದ್ದರು.

3 / 6
ಆಗ ಭಾರತ ತಂಡ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಗಾಗಿ ಆಸ್ಟ್ರೇಲಿಯಾ ಪ್ರವಾಸದಲ್ಲಿತ್ತು. ಸರಣಿಯ ಮೊದಲ ಪಂದ್ಯ ಅಡಿಲೇಡ್‌ನಲ್ಲಿ ನಡೆದಿತ್ತು. ಆ ಪಂದ್ಯದಲ್ಲೂ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್‌ ಮಾಡಿದ್ದರೆ, ವಿರಾಟ್ ಕೊಹ್ಲಿ ತಂಡದ ನಾಯಕರಾಗಿದ್ದರು. ಆ ಪಂದ್ಯದಲ್ಲಿ ಕೆಎಲ್ ರಾಹುಲ್ ಮತ್ತು ಮುರಳಿ ವಿಜಯ್ ಓಪನಿಂಗ್ ಮಾಡಿದ್ದರು.

4 / 6
ಹೀಗಾಗಿ ರೋಹಿತ್ ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಮಾಡಿದ್ದರು. ಆ ಟೆಸ್ಟ್ ಕೂಡ ಡಿಸೆಂಬರ್ 6 ರಿಂದ ನಡೆದಿತ್ತು. ಅಂದರೆ 2193 ದಿನಗಳ ನಂತರ ಇದೀಗ ರೋಹಿತ್ ಮತ್ತೆ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸುತ್ತಿದ್ದಾರೆ.

5 / 6
ಆ ಟೆಸ್ಟ್‌ನಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ ರೋಹಿತ್ ಮೊದಲ ಇನ್ನಿಂಗ್ಸ್‌ನಲ್ಲಿ 37 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ ಒಂದು ರನ್ ಗಳಿಸಿದ್ದರು. ಇದೀಗ ಈ ಟೆಸ್ಟ್​ನಲ್ಲಿ 6ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದ ರೋಹಿತ್ ಕೇವಲ 3 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದಾರೆ. ಆ ಟೆಸ್ಟ್‌ನಲ್ಲಿ ಟೀಂ ಇಂಡಿಯಾ 31 ರನ್‌ಗಳಿಂದ ಸೋತಿತ್ತು.

6 / 6
ಇನ್ನು ಈ ಪಂದ್ಯದಲ್ಲಿ ರೋಹಿತ್ ಬದಲಿಗೆ ಯಶಸ್ವಿ ಜೈಸ್ವಾಲ್ ಮತ್ತು ಕೆಎಲ್ ರಾಹುಲ್ ಓಪನಿಂಗ್ ಮಾಡಿದರು. ಆದರೆ, ಪಂದ್ಯದ ಮೊದಲ ಎಸೆತದಲ್ಲೇ ಟೀಂ ಇಂಡಿಯಾ ಹಿನ್ನಡೆ ಅನುಭವಿಸಿತು. ಮಿಚೆಲ್ ಸ್ಟಾರ್ಕ್ ಯಶಸ್ವಿಗೆ ಪೆವಿಲಿಯನ್ ಹಾದಿ ತೋರಿಸಿದರು. ಮೊದಲ ದಿನ ಭೋಜನ ವಿರಾಮದ ವೇಳೆಗೆ ಭಾರತ ನಾಲ್ಕು ವಿಕೆಟ್ ಕಳೆದುಕೊಂಡು 82 ರನ್ ಗಳಿಸಿದೆ. ಸದ್ಯ ರಿಷಭ್ ಪಂತ್ 4 ರನ್ ಹಾಗೂ ನಾಯಕ ರೋಹಿತ್ ಶರ್ಮಾ 1 ರನ್ ಗಳಿಸಿ ಕ್ರೀಸ್‌ನಲ್ಲಿದ್ದಾರೆ.